ರಾಜಸ್ಥಾನ | ಕೋಟಾ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: 12 ಮಂದಿ ಸಾವು

Date:

ರಾಜಸ್ಥಾನದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಕೋಟಾ ಸೇರಿದಂತೆ ಹಲವು ಜಿಲ್ಲಗಳಲ್ಲಿ ಈವರೆಗೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಕೋಟಾ, ಪಾಲಿ, ಜಾಲೋರ್ ಮತ್ತು ಧೋಲ್ಪುರ್ ಜಿಲ್ಲೆಗಳು ಮಳೆಯಿಂದಾಗಿ ತೀವ್ರ ಹಾನಿಗೆ ಒಳಗಾಗಿದೆ.

ಜೋಧ್‌ಪುರದಲ್ಲಿ ಕೊಳವೆ ಬಾವಿಯಲ್ಲಿ ಕೆಲಸ ಮಾಡುತ್ತಿದ್ದ ರೈತ ಮತ್ತು ಲೈನ್‌ಮ್ಯಾನ್ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಪಾಲಿಯಲ್ಲಿ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಇಂದು(ಜುಲೈ 15) ಶಾಲೆಗಳಿಗೆ ರಜೆ ನೀಡಲಾಗಿದೆ.

ಇದನ್ನು ಓದಿದ್ದೀರಾ? ಭಾರೀ ಮಳೆ | ಗೊರೂರಿನ ಹೇಮಾವತಿ ಜಲಾಶಯದ ಆರು ಕ್ರೆಸ್ಟ್ ಗೇಟ್‌ಗಳ ಮೂಲಕ ನೀರು ಬಿಡುಗಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಲೋರ್ ಮತ್ತು ಜೋಧ್‌ಪುರದಲ್ಲಿ, ಮಾರ್ವಾರ್ ಜಂಕ್ಷನ್ ಮತ್ತು ಲುನಿ ನಡುವಿನ ಕೆಲವು ಪ್ರದೇಶಗಳಲ್ಲಿ ಹಳಿಗಳು ಮುಳುಗಿರುವುದರಿಂದ ರೈಲು ಸಂಚಾರ ವ್ಯತ್ಯಯವಾಗಿದೆ. ಪಾಲಿ ಮತ್ತು ಮಾರ್ವಾರ್ ಜಂಕ್ಷನ್ ನಡುವಿನ ಮಾರ್ಗಕ್ಕೂ ಪರಿಣಾಮ ಬೀರಿದೆ. ಹಲವು ರೈಲುಗಳ ವೇಳಾಪಟ್ಟಿ ಬದಲಾಗಿದೆ.

ಜೋಧ್‌ಪುರ-ಅಹಮದಾಬಾದ್‌ ಮಾರ್ಗದ ಸಬರಮತಿ ಎಕ್ಸ್‌ಪ್ರೆಸ್ ಅನ್ನು ಸಹ ರದ್ದುಗೊಳಿಸಲಾಗಿದೆ. ಮಾರ್ವಾರ್ ಜಂಕ್ಷನ್ ರೈಲು ವಿಭಾಗದ ಅಡಿಯಲ್ಲಿ ಮಾರ್ವಾರ್ ಜಂಕ್ಷನ್ ಮತ್ತು ಬೊಮಡೈನಲ್ಲಿ ಹಳಿಗಳು ಹಾನಿಗೊಳಗಾಗಿದೆ.

ಕೋಟಾ ಬ್ಯಾರೇಜ್‌ನಿಂದ ಎರಡು ಲಕ್ಷ ಕ್ಯೂಸೆಕ್‌ಗಳಿಗೂ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದ್ದು, ಉಕ್ಕಿ ಹರಿಯುವ ಚಂಬಲ್ ನದಿಯು ತಗ್ಗು ಪ್ರದೇಶಗಳನ್ನು ಮುಳುಗಿಸಿದೆ. ಮೀನುಗಾರಿಕೆಗಾಗಿ ತೆರಳಿದ್ದ ಏಳು ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು ಒಬ್ಬರ ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ರಾಜಸ್ಥಾನದಲ್ಲಿ ಹವಾಮಾನ ಇಲಾಖೆ ಪಾಲಿ, ಕೋಟಾ, ಜೋಧ್‌ಪುರ, ಚಿತ್ತೋರ್‌ಗಢ, ನಾಗೌರ್ ಮತ್ತು ಅಜ್ಮೀರ್‌ಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳ ಕಾಲ ಭಿಲ್ವಾರಾ, ಸಿರೋಹಿ, ಬರಾನ್, ಟೋಂಕ್ ಬುಂಡಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...