ಮಳೆ ಅಬ್ಬರ | 260ಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ನಿರ್ಬಂಧ

Date:

ಕಳೆದ ಕೆಲವು ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ, ಮಂಡಿ ಜಿಲ್ಲೆಯ 176 ರಸ್ತೆಗಳು ಸೇರಿದಂತೆ ಹಿಮಾಚಲದ ಒಟ್ಟು 260ಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಡಿ, ಕಾಂಗ್ರಾ ಹಾಗೂ ಸಿರ್ಮೌರ್ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಶನಿವಾರ ಭಾರೀ ಮಳೆಯಾಗುತ್ತಿದೆ. ಭಾನುವಾರ ಮಳೆ ಆರ್ಭಟ ತೀವ್ರಗೊಳ್ಳುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ‘ರೆಡ್‌ ಅಲರ್ಟ್‌’ ಘೋಷಿಸಿದೆ. ಅಲ್ಲದೆ, ಉನಾ, ಬಿಲಾಸ್ಪುರ್, ಹಮೀರ್ಪುರ್, ಚಂಬಾ, ಸೋಲನ್, ಶಿಮ್ಲಾ ಹಾಗೂ ಕುಲ್ಲು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಡ್‌ ಘೋಷಿಸಲಾಗಿದೆ. ಹಿಮಾಚಲದಲ್ಲಿ ದಿನನಿತ್ಯ ಸುಮಾರು 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆ ಸುರಿಯುತ್ತಿದೆ.

ಮಳೆಯಿಂದಾಗಿ ಭೀಕರ ಪರಿಸ್ಥಿತಿ ಎದುರಾಗುವ ಆತಂಕ ರಾಜ್ಯದ ಜನರಲ್ಲಿ ಮನೆ ಮಾಡಿದೆ. ದಿನದಿಂದ ದಿನಕ್ಕೆ ಮಳೆ ತೀವ್ರತೆ ಹೆಚ್ಚುತ್ತಿದೆ. ಜೂನ್‌ 20ರಿಂದ ಈವರೆಗೆ 15 ದಿನಗಳಲ್ಲಿ ಸುಮಾರು 72 ಮಂದಿ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷವೂ ಇದೇ ರೀತಿ ಭಾರೀ ಮಳೆಯಾಗಿತ್ತು. ಪ್ರವಾಹ, ಭೂಕುಸಿತದಿಂದಾಗಿ 550ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಅಲ್ಲದೆ, 700 ಕೋಟಿ ರೂ,ಗಳಿಗೆ ಅಧಿಕ ನಷ್ಟವಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...