ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್​ ಪತನ; 6 ಮಂದಿ ದುರ್ಮರಣ

Date:

ಅಹಮದಾಬಾದ್​​ನಲ್ಲಿ ಸಂಭವಿಸಿದ ವಿಮಾನ ದುರಂತ ಘಟನೆಯ ಶೋಕದ ನಡುವೆಯೇ ಮತ್ತೊಂದು ಅಪಘಾತ ಸಂಭವಿಸಿದೆ. ಉತ್ತರಾಖಂಡದ ಡೆಹ್ರಾಡೂನ್‌ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್‍‌ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಾಖಂಡದ ಗೌರಿಕುಂಡ್ ಪ್ರದೇಶದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್‍‌ನಲ್ಲಿ ಪೈಲಟ್ ಸೇರಿದಂತೆ ಆರು ಮಂದಿ ಪ್ರಯಾಣಿಸುತ್ತಿದ್ದರು. ಎಲ್ಲರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಎನ್​​ಡಿಆರ್​ಎಫ್​ ತಂಡಗಳು ತೆರಳಿದ್ದು, ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಅಪಘಾತಕ್ಕೀಡಾದ ಹೆಲಿಕಾಪ್ಟರ್ ‘ಆರ್ಯನ್ ಏವಿಯೇಷನ್‌’ ಸಂಸ್ಥೆಗೆ ಸೇರಿದ್ದು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಒಂದು ತಿಂಗಳಲ್ಲಿ ಉತ್ತರಾಖಂಡದಲ್ಲಿ ಸಂಭವಿಸಿದ 3ನೇ ಹೆಲಿಕಾಪ್ಟರ್ ದುರಂತ ಇದಾಗಿದೆ. ಮೇ 8ರ ಬೆಳಗ್ಗೆ ಉತ್ತರಕಾಶಿ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಪೈಲಟ್ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದರು. ಜೂನ್ 7 ರಂದು, ಕೇದಾರನಾಥದ ಬಳಿಯ ಹೆಲಿಕಾಪ್ಟರ್‍‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು, ತುರ್ತು ಭೂಸ್ಪರ್ಶ ಮಾಡಲಾಗಿತ್ತು. ಆದಾಗ್ಯೂ, ಪೈಲಟ್ ಬೆನ್ನಿಗೆ ಗಾಯಗಳಾಗಿದ್ದವು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...