ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹೇಮಂತ್ ಸೊರೇನ್

Date:

ಮೂರನೇ ಬಾರಿಗೆ ಹಾಗೂ ಜಾರ್ಖಂಡ್‌ನ 13ನೇ ಮುಖ್ಯಮಂತ್ರಿಯಾಗಿ ಹೇಮಂತ್‌ ಸೊರೇನ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಂಚಿಯ ರಾಜಭವನದಲ್ಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರು ಹೇಮಂತ್‌ ಸೊರೇನ್‌ ಅವರಿಗೆ ಪ್ರಮಾಣ ವಚನ ಬೊಧಿಸಿದರು.

ಹೇಮಂತ್‌ ಸೊರೇನ್‌ ತಂದೆ ಶಿಬು ಸೊರೇನ್‌, ಅವರ ತಾಯಿ ರೂಪಿ ಸೊರೇನ್‌, ಪತ್ನಿ ಕಲ್ಪನಾ ಸೊರೇನ್‌ ಹಾಗೂ ಜೆಎಂಎಂನ ಹಿರಿಯ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಚಂಪೈ ಸೊರೇನ್ ಅವರು ಕೂಡ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಮಳೆ ಹೊಯ್ಯುತಿದೆ, ಡೆಂಘೀ ಹರಡುತಿದೆ- ಆರೋಗ್ಯ ಇಲಾಖೆ ಏನು ಮಾಡುತ್ತಿದೆ?

ಭೂ ಹಗರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಐದು ತಿಂಗಳ ಹಿಂದಷ್ಟೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಚಂಪೈ ಸೊರೇನ್‌, ಹೇಮಂತ್‌ ಸೊರೇನ್‌ ಅವರಿಗೆ ಸಿಎಂ ಆಗಲು ಪುನಃ ಅವಕಾಶ ನೀಡಿದ್ದಾರೆ.

ಭೂ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಜನವರಿಯಲ್ಲಿ ಬಂಧನಕ್ಕೊಳಗಾಗಿದ್ದರು. ಬಂಧನಕ್ಕೊಳಗಾಗುವ ಮುನ್ನ ಸಿಎಂ ಹುದ್ದೆಗೆ ಹೇಮಂತ್ ರಾಜೀನಾಮೆ ನೀಡಿದ್ದರು. ಜಾರ್ಖಂಡ್‌ ಹೈಕೋರ್ಟ್ ಜೂನ್‌ 28 ರಂದು ಹೇಮಂತ್‌ ಸೊರೇನ್‌ ಅವರಿಗೆ ಜಾಮೀನು ನೀಡಿತ್ತು.

ಪ್ರಕರಣದ ಒಟ್ಟಾರೆ ದೃಷ್ಟಿಕೋನದಲ್ಲಿ ನಿರ್ದಿಷ್ಟವಾಗಿ ಅಥವಾ ಪರೋಕ್ಷವಾಗಿ ಆರೋಪಿಯಾಗಿರುವವರು ಭೂಹಗರಣದಲ್ಲಿ ಭಾಗಿಯಾಗಿರುವಂತೆ ಕಂಡುಬಂದಿಲ್ಲ ಎಂದು ನ್ಯಾಯಾಧೀಶರು ಜಾಮೀನು ನೀಡುವ ಸಂದರ್ಭದಲ್ಲಿ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...