ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಇಂದು ಪ್ರಮಾಣವಚನ

Date:

ಜೆಎಂಎಂ ಕಾರ್ಯಾಧ್ಯಕ್ಷ ಹೇಮಂತ್ ಸೊರೇನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಮಾಣ ವಚನ ಸಮಾರಂಭ ಹಿನ್ನೆಲೆಯಲ್ಲಿ ರಾಂಚಿ ನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಇಂದು ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಸೊರೇನ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.’ಇಂಡಿಯಾ’ ಕೂಟದ ಪ್ರಮುಖ ನಾಯಕರು ಸೇರಿದಂತೆ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಮಾಣ ವಚನದಲ್ಲಿ ಪಾಲ್ಗೊಳ್ಳಲಿದ್ದಾರೆ. ಡಿಸಿಎಂ ಡಿ ಕೆ ಶಿವಕುಮಾರ್‌ ಕೂಡ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಹೇಮಂತ್ ಸೊರೇನ್ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಮಂತ್ರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೇಮಂತ್ ಸೊರೇನ್ ಅವರ ಜೆಎಂಎಂ ನೇತೃತ್ವದ ಮೈತ್ರಿ ಶನಿವಾರ ಜಾರ್ಖಂಡ್‌ನಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿತು. 81 ಸದಸ್ಯ ಬಲದ ಅಸೆಂಬ್ಲಿಯಲ್ಲಿ 56 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ 24 ಸ್ಥಾನಗಳನ್ನು ಪಡೆದುಕೊಂಡಿತು. ಹೇಮಂತ್ ಸೊರೇನ್ ಅವರು ಬಿಜೆಪಿಯ ಗಮ್ಲಿಯೆಲ್ ಹೆಂಬ್ರೋಮ್ ಅವರನ್ನು 39,791 ಮತಗಳ ಅಂತರದಿಂದ ಸೋಲಿಸಿ ಗೆಲುವು ಸಾಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...