ನೇಪಾಳದಿಂದ ಭಾರತದೆಡೆ ಹಾರಿದ 15-20 ಡ್ರೋನ್‌ಗಳು: ಬಿಹಾರದಲ್ಲಿ ಹೈ ಅಲರ್ಟ್

Date:

ಸೋಮವಾರ ರಾತ್ರಿ ನೇಪಾಳದಿಂದ ಸುಮಾರು 15ರಿಂದ 20 ಡ್ರೋನ್‌ಗಳು ಭಾರತೀಯ ವಾಯುಪ್ರದೇಶಕ್ಕೆ ಪ್ರವೇಶಿಸಿದ್ದು ಕಂಡುಬಂದಿದೆ. ಈ ಬೆನ್ನಲ್ಲೇ ಮಂಗಳವಾರ ಭಾರತ-ನೇಪಾಳ ಗಡಿ ಜಿಲ್ಲೆಗಳಲ್ಲಿ ಬಿಹಾರ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಮಧುಬನಿ ಜಿಲ್ಲೆಯ ಕಮಲಾ ಗಡಿ ಹೊರಠಾಣೆ(ಬಿಒಪಿ) ಅಡಿಯಲ್ಲಿ ಡ್ರೋನ್‌ಗಳು ಸುಮಾರು 40 ನಿಮಿಷಗಳ ಕಾಲ ಹಾರಾಡಿ ಬಳಿಕ ನೇಪಾಳಕ್ಕೆ ಹಿಂತಿರುಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಸಶಸ್ತ್ರ ಸೀಮಾ ಬಲ್(ಎಸ್‌ಎಸ್‌ಬಿ) ಉಪ ಕಮಾಂಡೆಂಟ್ ವಿವೇಕ್ ಓಜಾ, “ಸೋಮವಾರ ಸಂಜೆ 7.30ರ ಸುಮಾರಿಗೆ ಕಮಲಾ ಗಡಿ ಪೊಲೀಸ್ ಹೊರಠಾಣೆ ಅಡಿಯಲ್ಲಿ ಬರುವ ಪ್ರದೇಶಗಳಲ್ಲಿ 15–20 ಡ್ರೋನ್‌ನಂತಹ ಉಪಕರಣಗಳು ಹಾರಾಡುತ್ತಿರುವುದು ಕಂಡುಬಂದಿದೆ. ಆ ಉಪಕರಣಗಳು ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸಿ ಉತ್ತರ ನೇಪಾಳದ ಕಡೆಗೆ ಮರಳಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅದಾನಿ ವ್ಯಾಪಾರೋದ್ಯಮ ಸಾಮ್ರಾಜ್ಯ ವಿಸ್ತರಣೆಗೆ ಮೋದಿ ಸಕ್ರಿಯ ಸಹಕಾರ; ಇಲ್ಲಿದೆ ಸಂಪೂರ್ಣ ವಿವರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್‌ಎಸ್‌ಬಿ ಸಿಬ್ಬಂದಿ ಈ ಡ್ರೋನ್‌ನಂತಹ ಉಪಕರಣ ನೇಪಾಳಕ್ಕೆ ಹಿಂದಿರುಗುತ್ತಿದ್ದಾಗ ಗಮನಿಸಿ ತಕ್ಷಣ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ದರ್ಭಾಂಗಾ ವಾಯುಪಡೆ ಮತ್ತು ದೆಹಲಿ ವಾಯುಪಡೆ ಕೇಂದ್ರಗಳ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಇದಾದ ಬಳಿಕ ಅಧಿಕಾರಿಗಳು ಅಂತಾರಾಷ್ಟ್ರೀಯ ಗಡಿಯ ಹೈ ಅಲರ್ಟ್ ಘೋಷಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಎಸ್‌ಎಸ್‌ಬಿ ಅಧಿಕಾರಿಗಳು ಸಂಪರ್ಕಿಸಿದಾ ನೇಪಾಳದ ಭದ್ರತಾ ಅಧಿಕಾರಿಗಳನ್ನು ಡ್ರೋನ್ ಬಳಕೆಯನ್ನು ನಿರಾಕರಿಸಿದ್ದಾರೆ. ಆದ್ದರಿಂದ ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ. ಗಡಿ ಪ್ರದೇಶದಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಡೆಪ್ಯೂಟಿ ಕಮಾಂಡೆಂಟ್ ಓಜಾ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...