ಶೌಚಾಲಯದಿಂದ ವಿಚಾರಣೆಗೆ ಹಾಜರಾದ ವ್ಯಕ್ತಿಗೆ ಭಾರಿ ದಂಡ: ಹೈಕೋರ್ಟ್‌ ಆದೇಶ

Date:

ವರ್ಚುವಲ್ ವಿಚಾರಣೆಯ ಸಮಯದಲ್ಲಿ ದಾವೆದಾರರಲ್ಲಿ ಓರ್ವ ಶೌಚಾಲಯದಿಂದ ಮತ್ತು ಇನೊಬ್ಬ ಮಲಗುವ ಕೋಣೆಯಿಂದ ಹಾಜರಾಗಿದ್ದು, ಆ ಇಬ್ಬರಿಗೂ ಗುಜರಾತ್ ಹೈಕೋರ್ಟ್‌ ದಂಡ ವಿಧಿಸಿದೆ. ‘ಇದು ಕೋರ್ಟ್‌ ಹಾಲ್, ಸಿನಿಮಾ ಹಾಲ್‌ ಅಲ್ಲ’ ಎಂದು ಎಚ್ಚರಿಕೆ ನೀಡಿದೆ.

ಶೌಚಾಲಯದಿಂದ ವಿಚಾರಣೆಗೆ ಹಾಜರಾದ ವ್ಯಕ್ತಿಗೆ 2 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ಸಮಾಜ ಸೇವೆ ಮಾಡುವಂತೆ ಆದೇಶಿಸಿದೆ. ಮಲಗುವ ಕೋಣೆಯಲ್ಲಿ ಹಾಸಿಗೆಯ ಮೇಲೆ ಮಲಗಿ ವಿಚಾರಣೆಗೆ ಹಾಜರಾದ ವ್ಯಕ್ತಿಗೆ 25,000 ರೂ. ದಂಡ ವಿಧಿಸಿದೆ.

ಕೋರ್ಟ್‌ ವಿಚಾರಣೆ ವೇಳೆ ದುರ್ವರ್ತನೆ ತೋರಿದ ಇಬ್ಬರು ಒಬ್ಬರು ದಾವೆದಾರರ ಮಗ ಧವಲ್ ಪಟೇಲ್ ಎಂದು ಹೇಳಲಾಗಿದೆ. ಆತ ವಿಚಾರಣೆ ವೇಳೆ ಶೌಚಾಲಯದಿಂದ ಹಾಜರಾಗಿದ್ದಕ್ಕೆ, ಆತನ ವರ್ಚುವಲ್ ಸಂಪರ್ಕವನ್ನು ಕೋರ್ಟ್‌ ಕಡಿತಗೊಳಿಸಿದೆ. ಬಳಿಕ ಆತನ ಬಗ್ಗೆ ನ್ಯಾಯಮೂರ್ತಿ ಎಂ.ಕೆ ಥಕ್ಕರ್ ಅವರು ವಿಚಾರಿಸಿದ್ದು, ಆತ ಬೃಹತ್ ಕಾರ್ಪೊರೇಟ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ, ಆತನಿಗೆ 2 ಲಕ್ಷ ರೂ. ದಂಡ ವಿಧಿಸಿದ್ದಾರೆ. ಆ ಹಣದಲ್ಲಿ 1.5 ಲಕ್ಷ ರೂ.ಗಳನ್ನು ನ್ಯಾಯಾಲಯದ ರಿಜಿಸ್ಟ್ರಿಯಲ್ಲಿ ಠೇವಣಿ ಇಡಬೇಕು ಮತ್ತು 50,000 ರೂ.ಗಳನ್ನು ಅನಾಥಾಶ್ರಮಕ್ಕೆ ದಾನ ನೀಡಬೇಕು. ಜೊತೆಗೆ, ಹೈಕೋರ್ಟ್ ಸಂಕೀರ್ಣದ ಉದ್ಯಾನಗಳನ್ನು ಎರಡು ವಾರಗಳ ಕಾಲ ಸ್ವಚ್ಛಗೊಳಿಸಿ, ಅಲ್ಲಿನ ಗಿಡಗಳಿಗೆ ನೀರುಣಿಸಬೇಕು ಎಂದು ಆದೇಶಿಸಿದ್ದಾರೆ.

ಈ ವರದಿ ಓದಿದ್ದೀರಾ?: ಸ್ತನ ಮುಟ್ಟುವುದು – ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ; ಹೈಕೋರ್ಟ್‌ ತೀರ್ಪಿನ ವಿರುದ್ಧ ವ್ಯಾಪಕ ಆಕ್ರೋಶ

”ನ್ಯಾಯ ಮತ್ತು ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿಗಾಗಿ ಆನ್‌ಲೈನ್ ವಿಚಾರಣೆಯ ಸೌಲಭ್ಯವನ್ನು ಒದಗಿಸಲಾಗಿದೆ. ಆದರೆ, ವರ್ಚುವಲ್ ವಿಚಾರಣೆಯಲ್ಲಿ ಹಾಜರಾಗುವ ವ್ಯಕ್ತಿಯು ನ್ಯಾಯಾಲಯದ ಘನತೆಯನ್ನು ಕಾಪಾಡಲು ಅತ್ಯಂತ ಶಿಸ್ತು ಮತ್ತು ಸಭ್ಯತೆಯಿಂದ ವರ್ತಿಸಬೇಕು. ಅರ್ಜಿದಾರರು ತಮ್ಮ ಹಾಸಿಗೆಯ ಮೇಲೆ ಮಲಗಿ ನ್ಯಾಯಾಲಯದ ಕಲಾಪಗಳನ್ನು ಸಿನಿಮಾ ನೋಡುತ್ತಿರುವಂತೆ ನೋಡುತ್ತಿದ್ದರು. ಇಂತಹ ನಡವಳಿಕೆಯು ನ್ಯಾಯಾಲಯದ ಘನತೆಗೆ ಧಕ್ಕೆ ತರುತ್ತದೆ. ಇಂತಹ ನಡವಳಿಕೆಯನ್ನು ಸಹಿಸಲಾಗುವುದಿಲ್ಲ” ಎಂದು ನ್ಯಾಯಮೂರ್ತಿ ಥಕ್ಕರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...