ಬಂಗಾಳ ಸಿಎಂ ಮಮತಾ ವಿರುದ್ಧದ ಇಡಿ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

Date:

ತಮ್ಮ ತನಿಖೆಗೆ ಅಡ್ಡಿಪಡಿಸಿ, ಕಡತಗಳನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋಲ್ಕತ್ತಾ ಹೈಕೋರ್ಟ್‌ ಮುಂದೂಡಿದೆ. ನ್ಯಾಯಾಲಯದ ಆವರಣದಲ್ಲಿ ಬೃಹತ್ ಜನಸಂದಣಿಯಿದ್ದು, ಗದ್ದಲ ಉಂಟಾಗಿದೆ ಎಂದು ಹೇಳಿದ್ದು, ವಿಚಾರಣೆಯನ್ನು ಮುಂದೂಡಿದೆ. ಅರ್ಜಿಯನ್ನು ಜನವರಿ 14ರಂದು ವಿಚಾರಣೆಗೆ ತೆಗೆದುಕೊಳ್ಳಲು ಸಾಧ್ಯತೆ ಇದೆ.

ನ್ಯಾಯಾಲಯದ ಆವರಣದಲ್ಲಿ ಉಂಟಾಗಿದ್ದ ಜನಸಂದಣಿ ಮತ್ತು ಗದ್ದಲ ಪರಿಸ್ಥಿತಿ ಕುರಿತು ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆವರಣವು ಕಕ್ಕಿರಿದಿದ್ದು, ಏನೂ ಕೇಳಿಸುತ್ತಿಲ್ಲವೆಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮಮತಾ ಬ್ಯಾನರ್ಜಿ ಅವರು ಟಿಎಂಸಿಗೆ ರಾಜಕೀಯ ಸಲಹೆಗಳನ್ನು ನೀಡುವ ಐ-ಪ್ಯಾಕ್‌ ಸಂಸ್ಥೆಯ ಕಚೇರಿ ಮತ್ತು ಅದರ ಸಂಸ್ಥಾಪಕರ ಮನೆ ಮೇಲೆ ಇಡಿ ದಾಳಿ ನಡೆಸಿ, ಶೋಧ ಆರಂಭಿಸಿತ್ತು. ಈ ವೇಳೆ, ಸ್ಥಳಕ್ಕೆ ಧಾವಿಸಿದ್ದ ಮಮತಾ ಬ್ಯಾನರ್ಜಿ, ಇಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಟಿಎಂಸಿಯ ಚುನಾವಣಾ ಕಾರ್ಯತಂತ್ರ ಮತ್ತು ಪಕ್ಷದ ಆತಂರಿಕ ದಾಖಲೆಗಳನ್ನು ಬಿಜೆಪಿ ಸಂಗ್ರಹಿಸಲು ಇಡಿಯನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿದ್ದರು. ಅಧಿಕಾರಿಗಳು ವಶಕ್ಕೆ ಪಡೆಯಲು ಮುಂದಾಗಿದ್ದ ಕೆಲವು ದಾಖಲೆಗಳನ್ನು ಮಮತಾ ಹಿಂಪಡೆದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಮತಾ ವಿರುದ್ಧ 28 ಪುಟಗಳ ದೂರು ಅರ್ಜಿಯನ್ನು ಇಡಿ ಹೈಕೋರ್ಟ್‌ಗೆ ಸಲ್ಲಿಸಿದೆ. ಅದರಲ್ಲಿ, “ಪಶ್ಚಿಮ ಬಂಗಾಳ ಪೊಲೀಸರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಶಾಮೀಲಾಗಿ ‘ಕಾನೂನಿನ ನಿರ್ಲಕ್ಷ್ಯ’ದೊಂದಿಗೆ ನಮ್ಮ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ಸಾರ್ವಜನಿಕ ಕರ್ತವ್ಯವನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಮಮತಾ ವಿರುದ್ಧ ಎಫ್ಐಆರ್‌ ದಾಖಲಿಸಬೇಕು” ಎಂದು ಮನವಿ ಮಾಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...