ಹಿಮಾಚಲ ಮೇಘಸ್ಫೋಟ | ಸಾವಿನ ಸಂಖ್ಯೆ 11ಕ್ಕೆ ಏರಿಕೆ; 40ಕ್ಕೂ ಹೆಚ್ಚು ಮಂದಿ ನಾಪತ್ತೆ

Date:

ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟವಾಗಿದ್ದು, ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರು, ಮಂಡಿ ಜಿಲ್ಲೆಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ.

ಜುಲೈ 31ರ ರಾತ್ರಿ ಕುಲು ಜಿಲ್ಲೆಯ ನಿರ್ಮಂದ್, ಸೈನ್ಜ್ ಮತ್ತು ಮಲಾನಾ ಹಾಗೂ ಮಂಡಿ ಜಿಲ್ಲೆಯ ಪಧಾರ್ ಮತ್ತು ಶಿಮ್ಲಾ ಜಿಲ್ಲೆಯ ರಾಂಪುರ್ ಪ್ರದೇಶದಲ್ಲಿ ಮೇಘಸ್ಪೋಟ ಸಂಭವಿಸಿದೆ. 11 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.

ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು, ನಾಪತ್ತೆಯಾದವರ ಪತ್ತೆಗೆ ಸ್ನಿಫರ್ ಡಾಗ್‌ಗಳು, ಡ್ರೋನ್‌ಗಳು ಮತ್ತು ಇತರ ಉಪಕರಣಗಳನ್ನು ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಸೇನೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಐಟಿಬಿಪಿ, ಸಿಐಎಸ್‌ಎಫ್, ಹಿಮಾಚಲ ಪ್ರದೇಶ ಪೊಲೀಸ್ ಮತ್ತು ಗೃಹ ರಕ್ಷಕರ ತಂಡಗಳ 410 ಸಿಬ್ಬಂದಿಗಳು ರಕ್ಷಣಾ ಕಾರ್ಯಗಳಲ್ಲಿ ತೊಡಗಿದ್ದಾರೆ.

ರಾಂಪುರ ಉಪವಿಭಾಗದ ಸರ್ಪಾರ ಗ್ರಾಮ ಪಂಚಾಯತಿಯ ಸಮೇಜ್ ಗ್ರಾಮದಲ್ಲಿ 30ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

“ರಾಜ್ಯ ಸರ್ಕಾರ ಶುಕ್ರವಾರ ಸಂತ್ರಸ್ತರಿಗೆ 50,000 ರೂಪಾಯಿ ತಕ್ಷಣದ ಪರಿಹಾರ ಘೋಷಿಸಿದೆ ಮತ್ತು ಮುಂದಿನ ಮೂರು ತಿಂಗಳುಗಳ ಕಾಲ ಮನೆ ಬಾಡಿಗೆ, ಗ್ಯಾಸ್, ಆಹಾರ ಮತ್ತು ಇತರ ಅಗತ್ಯ ವಸ್ತುಗಳ ಜೊತೆಗೆ ಮಾಸಿಕ 5,000 ರೂಪಾಯಿಗಳನ್ನು ನೀಡಲಾಗುತ್ತದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 27ರಿಂದ ಆಗಸ್ಟ್ 3ರವರೆಗೆ ರಾಜ್ಯದಲ್ಲಿ ಎದುರಾದ ಪ್ರವಾಹದಿಂದಾಗಿ 662 ಕೋಟಿ ರೂ.ನಷ್ಟವಾಗಿದೆ. 89 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...