ಹಿಮಾಚಲ ಪ್ರದೇಶ | ಪ್ರವಾಹದಲ್ಲಿ ಕೊಚ್ಚಿ ಹೋದ ಒಂಬತ್ತು ಮಂದಿ, 150 ಕಿ.ಮೀ. ದೂರದಲ್ಲಿ ನಾಲ್ವರ ಮೃತದೇಹ ಪತ್ತೆ

Date:

ಹಿಮಾಚಲ ಪ್ರದೇಶದ ಪಾಂಗ್ಲುಯೆಡ್ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಎರಡು ಕುಟುಂಬಗಳ ಒಟ್ಟು ಒಂಬತ್ತು ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ನಾಲ್ವರ ಮೃತದೇಹ ಜ್ವಾಲಾಪುರದಲ್ಲಿ 150 ಕಿ.ಮೀ ದೂರದಲ್ಲಿ ಪತ್ತೆಯಾಗಿದೆ. ಇನ್ನೂ ಐವರು ಕಾಣೆಯಾಗಿದ್ದಾರೆ.

ಹತ್ತು ದಿನಗಳ ಹಿಂದೆ ಒಟ್ಟು ಒಂಬತ್ತು ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಇನ್ನೂ ಕಾಣೆಯಾದ ಐವರ ಶೋಧ ಮುಂದುವರೆಸಿದೆ. ಈ ಕುಟುಂಬದಲ್ಲಿ 23 ವರ್ಷದ ಖೇಮ್ ಲತಾ ಎಂಬ ಯುವತಿ ಮಾತ್ರ ಬದುಕುಳಿದಿದ್ದಾರೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಭಾರೀ ಮಳೆಯಿಂದಾಗಿ ಪ್ರವಾಹ; ಮೂವರ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್ 20ರಂದು ಮುಂಗಾರು ಆರಂಭವಾದಾಗಿನಿಂದ ಈವರೆಗೆ ಹಿಮಾಚಲ ಪ್ರದೇಶದಲ್ಲಿ ಒಟ್ಟು 91 ಮಂದಿ ಸಾವನ್ನಪ್ಪಿದ್ದಾರೆ, 34 ಜನರು ನಾಪತ್ತೆಯಾಗಿದ್ದಾರೆ. ಹಠಾತ್ ಪ್ರವಾಹ ಮತ್ತು ಮೇಘಸ್ಫೋಟದಿಂದಾಗಿ ಗಾಯಗೊಂಡವರ ಸಂಖ್ಯೆ 130ಕ್ಕೆ ಏರಿದೆ.

ಮಳೆಯ ಅಬ್ಬರದಿಂದಾಗಿ ಹಲವು ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಒಂದು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ 207 ರಸ್ತೆಗಳನ್ನು ಮುಚ್ಚಲಾಗಿದೆ. 132 ವಿದ್ಯುತ್ ಪರಿವರ್ತಕಗಳು ಕಾರ್ಯನಿರ್ವಹಿಸುತ್ತಿಲ್ಲ. ಸುಮಾರು 840 ನೀರಿನ ಯೋಜನೆಗಳು ಸಹ ಸದ್ಯ ಸ್ಥಗಿತಗೊಂಡಿವೆ.

ಸೇನೆ, ಎನ್‌ಡಿಆರ್‌ಎಫ್ ತಂಡಗಳು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ(ಎಸ್‌ಡಿಆರ್‌ಎಫ್), ಇಂಡೋ ಟಿಬೆಟಿಯನ್ ಗಡಿ ಪೊಲೀಸ್(ಐಟಿಬಿಪಿ) ಮತ್ತು ಹಿಮಾಚಲ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಕಾಣೆಯಾದವರಿಗಾಗಿ ಹುಡುಕಾಟ ನಡೆಯುತ್ತಿದೆ.

ಜುಲೈ 16ರವರೆಗೆ ಹಿಮಾಚಲ ಪ್ರದೇಶದ ಹವಾಮಾನ ಕೆಟ್ಟದಾಗಿರುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ತಿಳಿಸಿದೆ. ಕಾಂಗ್ರಾ ಮತ್ತು ಸಿರ್ಮೌರ್‌ನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...