ಹೀಗೆ ಮುಂದುವರೆದರೆ ಭೂಪಟದಿಂದ ರಾಜ್ಯವೇ ಅಳಿಸಿಹೋಗುತ್ತದೆ: ಸುಪ್ರೀಂ ಕೋರ್ಟ್‌ ಎಚ್ಚರಿಕೆ

Date:

ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ಹೆಚ್ಚಾಗಿದೆ. ಪರಿಸರ ಅಸಮತೋಲನ ಉಂಟಾಗಿದೆ. ಪರಿಣಾಮ, ಪ್ರವಾಹ, ಶಾಖ ಹೆಚ್ಚತ್ತಿದೆ. ಇದು ಹೀಗೆಯೇ ಮುಂದುವರೆದರೆ ಭೂಪಟದಿಂದ ಹಿಮಾಚಲ ಪ್ರದೇಶ ರಾಜ್ಯವೇ ಅಳಿಸಿಹೋಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಕಟುವಾಗಿ ನುಡಿದಿದೆ. ಅರಣ್ಯ ನಾಶವನ್ನು ಖಂಡಿಸಿದೆ.

ಹಿಮಾಚಲ ಪ್ರದೇಶದ ಕೆಲವು ಪ್ರದೇಶಗಳನ್ನು ‘ಹಸಿರು ಪ್ರದೇಶ’ ಎಂದು ಘೋಷಿಸಲು ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಕೆಲವು ಕಾರ್ಪೋರೇಟ್‌ಗಳು ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು. ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ಪೀಠವು, “ಹಿಮಾಚಲ ಪ್ರದೇಶದ ಪರಿಸ್ಥಿತಿ ಹದಗೆಟ್ಟಿದೆ. ಇಂತ ಪರಿಸ್ಥಿತಿಯಲ್ಲಿ ಹಸಿರು ಪ್ರದೇಶದ ಘೋಷಣೆ ಅತೀ ಮುಖ್ಯ. ಇದು ನಿರ್ದಿಷ್ಟ ಪ್ರದೇಶದಲ್ಲಿ ನಿರ್ಮಾಣ ಚಟುವಟಿಕೆಗಳನ್ನು ತಡೆಯುತ್ತದೆ. ಇಲ್ಲವಾದಲ್ಲಿ, ಇಡೀ ರಾಜ್ಯವೇ ಭೂಪಟದಿಂದ ಕಾಣೆಯಾಗಿಬಿಡುತ್ತದೆ” ಎಂದು ಹೇಳಿಕೆ. ಅರ್ಜಿಯನ್ನು ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?

“ಆದಾಯ ಗಳಿಸುವುದೇ ಮುಖ್ಯವಲ್ಲ. ಪರಿಸರ ಮತ್ತು ಪರಿಸರ ವಿಜ್ಞಾನವನ್ನು ಬಲಿಕೊಟ್ಟು ಆದಾಯ ಗಳಿಸಲು ಸಾಧ್ಯವಿಲ್ಲ ಆದಾಯಕ್ಕಿಂತ ಪ್ರಕೃತಿ ಮುಖ್ಯ. ಇದು ಆಳುವವರಿಗೂ ಮನವರಿಕೆಯಾಗಬೇಕು” ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕಿವಿಮಾತು ಹೇಳಿದೆ.

“ಹಿಮಾಚಲ ಪ್ರದೇಶದ ಪರಿಸ್ಥಿತಿ ಹದಗೆಟ್ಟಿದೆ. ಪರಿಸರ ಅಸಮತೋಲನ ತೀವ್ರಗೊಂಡಿದ್ದು, ಗಂಭೀರ ನೈಸರ್ಗಿಕ ವಿಕೋಪಗಳಿಗೆ ಕಾರಣವಾಗಿದೆ. ನಿರಂತರ ಭೂಕುಸಿತ, ಮನೆಗಳು ಮತ್ತು ಕಟ್ಟಡಗಳು ಕುಸಿಯುವುದು, ರಸ್ತೆ ಕುಸಿತ ಮುಂತಾದ ವಿದ್ಯಮಾನಗಳಿಗೆ ಪ್ರಕೃತಿ ಕಾರಣವಲ್ಲ, ಮಾನವರು ಕಾರಣ. ಹಿಮಾಚಲವು ಹಿಮಾಲಯ ಪರ್ವತಗಳ ಅಡಿಯಲ್ಲಿ ನೆಲೆಸಿದೆ. ಇಲ್ಲಿ ಯಾವುದೇ ಯೋಜನೆಯನ್ನು ಆರಂಭಿಸುವ ಮೊಲು ಭೂವಿಜ್ಞಾನಿಗಳು, ಪರಿಸರ ತಜ್ಞರು ಮತ್ತು ಸ್ಥಳೀಯರ ಅಭಿಪ್ರಾಯವನ್ನು ಪಡೆಯುವುದು ಮುಖ್ಯ. ಪ್ರಕೃತಿ ವಿಕೋಪವನ್ನು ತಡೆಯಲು ಈಗಲೂ ಎಚ್ಚೆತ್ತುಕೊಳ್ಳಲಿದ್ದರೆ, ಭವಿಷ್ಯವೇ ಇಲ್ಲವಾಗುತ್ತದೆ” ಎಂದು ಕೋರ್ಟ್‌ ಎಚ್ಚರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...