ಹಿಂದಿ ರಾಷ್ಟ್ರ ಭಾಷೆ: ಪ್ರಕರಣವೊಂದರಲ್ಲಿ ಹಿಂದಿಯಲ್ಲಿ ಸಾಕ್ಷ್ಯ ನುಡಿಯಲು ಹೇಳಿದ ಸುಪ್ರೀಂ ನ್ಯಾಯಾಧೀಶರು

Date:

ಪ್ರಕರಣವೊಂದರಲ್ಲಿ ಹಿಂದಿ ರಾಷ್ಟ್ರ ಭಾಷೆ ಎಂದಿರುವ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರೊಬ್ಬರು ಪಶ್ಚಿಮ ಬಂಗಾಳದ ಕೆಲ ಸಾಕ್ಷಿಗಳಿಗೆ ಉತ್ತರ ಪ್ರದೇಶದ ನ್ಯಾಯಾಲಯದ ಮುಂದೆ ಹಿಂದಿಯಲ್ಲಿ ಸಾಕ್ಷ್ಯ ನುಡಿಯುವಂತೆ ನಿರ್ದೇಶನ ನೀಡಿದ್ದಾರೆ.

ಉತ್ತರ ಪ್ರದೇಶದ ಫರುಕ್ಕಾಬಾದ್‌ನಲ್ಲಿ ಮೋಟಾರ್‌ ವಾಹನಗಳ ಅಪಘಾತಗಳ ಕ್ಲೇಮ್‌ ಟ್ರಿಬ್ಯುನಲ್‌ನಲ್ಲಿ ಬಾಕಿಯಿರುವ ಒಂದು ಅಪಘಾತ ಪ್ರಕರಣವನ್ನು ಪಶ್ಚಿಮ ಬಂಗಾಳದ ಡಾರ್ಜಲಿಂಗ್‌ಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಧೀಶರಾದ ದೀಪಾಂಕರ್‌ ದತ್ತಾ ತಮ್ಮ ಆದೇಶದಲ್ಲಿ ಹಿಂದಿ ರಾಷ್ಟ್ರ ಭಾಷೆ ಎಂದು ಪ್ರಸ್ತಾಪಿಸಿದರು.

“ಭಾರತದಂತಹ ವೈವಿಧ್ಯಮಯ ದೇಶದಲ್ಲಿ, ಜನರು ವಿಭಿನ್ನ ಭಾಷೆಗಳನ್ನು ಮಾತನಾಡುತ್ತಾರೆ ಎಂಬುದರಲ್ಲಿ ಸಂದೇಹವಿಲ್ಲ. ಇಲ್ಲಿ ಕನಿಷ್ಠ 22 ಅಧಿಕೃತ ಭಾಷೆಗಳಿವೆ. ಆದರೆ ಹಿಂದಿ ರಾಷ್ಟ್ರ ಭಾಷೆ ಆಗಿರುವುದರಿಂದ ಅರ್ಜಿದಾರರು ಹಾಜರುಪಡಿಸುವ ಸಾಕ್ಷಿಗಳು ತಮ್ಮ ಸಾಕ್ಷ್ಯವನ್ನು ಹಿಂದಿಯಲ್ಲಿ ನೀಡಬೇಕು.” ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶದ ಫರುಕ್ಕಾಬಾದ್‌ನಲ್ಲಿ ಮೋಟಾರ್‌ ವಾಹನಗಳ ಅಪಘಾತಗಳ ಕ್ಲೇಮ್‌ ಟ್ರಿಬ್ಯುನಲ್‌ನಲ್ಲಿ ಬಾಕಿಯಿರುವ ಒಂದು ಅಪಘಾತ ಪ್ರಕರಣವನ್ನು ಪಶ್ಚಿಮ ಬಂಗಾಳದ ಡಾರ್ಜಲಿಂಗ್‌ಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ಮೇಲಿನ ಆದೇಶ ಹೊರಡಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಪ್ರಧಾನಿಗೆ ಎಂ ಕೆ ಸ್ಟಾಲಿನ್‌ ಪತ್ರ

ಅಪಘಾತವು ಸಿಲಿಗುರಿಯಲ್ಲಿ ನಡೆದಿರುವುದರಿಂದ ಡಾರ್ಜಲಿಂಗ್‌ನ ಟ್ರಿಬ್ಯುನಲ್‌ನಲ್ಲಿ ವಿಚಾರಣೆ ನಡೆದರೆ ಅನುಕೂಲಕರ ಎಂದು ಅರ್ಜಿದಾರರು ಹೇಳಿದ್ದಾರೆ. ಅಷ್ಟೇ ಅಲ್ಲದೆ ಅರ್ಜಿದಾರರ ಪರ ಎಲ್ಲ ಸಾಕ್ಷಿಗಳೂ ಸಿಲಿಗುರಿಯವರಾಗಿರುವುದರಿಂದ ಉತ್ತರ ಪ್ರದೇಶ ಟ್ರಿಬ್ಯುನಲ್‌ನಲ್ಲಿ ಭಾಷೆಯ ಸಮಸ್ಯೆ ಎದುರಾಗಬಹುದು ಎಂದಿದ್ದರು.

ಆದರೆ ಈ ಮನವಿಯನ್ನು ತಿರಸ್ಕರಿಸಿದ ದತ್ತಾ, ಅರ್ಜಿದಾರರ ವಾದವನ್ನು ಒಪ್ಪಿದಲ್ಲಿ, ಕ್ಲೇಮ್‌ ಮಾಡುವವರು ಅನಾನುಕೂಲ ಎದುರಿಸಬಹುದು ಹಾಗೂ ತಮ್ಮ ವಾದವನ್ನು ಬಂಗಾಳಿ ಭಾಷೆಯಲ್ಲಿ ಮಂಡಿಸಲು ಕಷ್ಟಪಡಬಹುದು ಎಂದು ಹೇಳಿದ್ದಾರೆ.

ನ್ಯಾಯಧೀಶರಾದ ದೀಪಂಕರ್ ದತ್ತಾ ಪಶ್ಚಿಮ ಬಂಗಾಳದವರಾಗಿದ್ದು, ಮಾತೃಭಾಷೆ ಬಂಗಾಳಿಯಾಗಿದೆ. ಅಲ್ಲದೆ ಸಂವಿಧಾನದ ಪ್ರಕಾರ ಭಾರತಕ್ಕೆ ಯಾವುದೇ ರಾಷ್ಟ್ರಭಾಷೆಯಿಲ್ಲ. ಸಂವಿಧಾನದ ಎಂಟನೇ ಶೆಡ್ಯೂಲ್‌ ಪ್ರಕಾರ 22 ನಿಯೋಜಿತ ಅಧಿಕೃತ ಭಾಷೆಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...