‘ಯುಪಿ, ಬಿಹಾರದ ಹಿಂದಿ ಭಾಷಿಕರು ತಮಿಳುನಾಡಿನಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಾರೆ’: ಡಿಎಂಕೆ ಸಂಸದನ ವಿವಾದಾತ್ಮಕ ಹೇಳಿಕೆ

Date:

ತಮಿಳುನಾಡಿಗೆ ಬರುವ ಉತ್ತರ ಪ್ರದೇಶ ಮತ್ತು ಬಿಹಾರದ ಹಿಂದಿ ಭಾಷಿಕರು ಕಟ್ಟಡ ನಿರ್ಮಾಣ ಕೆಲಸ ಅಥವಾ ರಸ್ತೆಗಳು ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸುವ ಕೆಲಸ ಮಾಡುತ್ತಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಡಿಎಂಕೆ ಸಂಸದರ ಹೇಳಿಕೆಯ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಡಿಎಂಕೆ ಸಂಸದರ ವಿರುದ್ಧ ಮಾತನಾಡದ ಎರಡು ರಾಜ್ಯಗಳ ಇಂಡಿಯಾ ಒಕ್ಕೂಟದ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಡಿಯೋದಲ್ಲಿ, ಮಾರನ್ ಇಂಗ್ಲಿಷ್ ಕಲಿತವರನ್ನು ಮತ್ತು ಹಿಂದಿಯನ್ನು ಮಾತ್ರ ಕಲಿತವರನ್ನು ಹೋಲಿಸಿದ್ದಾರೆ. ಮೊದಲಿನವರು ಐಟಿ ಕಂಪನಿಗಳಲ್ಲಿ ಕೆಲಸ ಮಾಡಿದರೆ, ಹಿಂದಿ ಕಲಿತವರು ಕೆಳಮಟ್ಟದ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರದ ಜನರ ಬಗ್ಗೆ ಡಿಎಂಕೆ ಸಂಸದರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಪಾಟ್ನಾದ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್, ಡಿಎಂಕೆ ನಾಯಕರು ಬಿಹಾರದ ಜನರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

“ತಮ್ಮ ‘ಇಂಡಿಯಾ’ ಒಕ್ಕೂಟದ ಸದಸ್ಯರಾಗಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸರ್ಕಾರದ ಸ್ಥಿತಿಯಿಂದಾಗಿ ಬಿಹಾರದ ಜನರು ಅಲ್ಲಿಗೆ ಹೋಗಬೇಕಾಗಿದೆ” ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಶೆಹಜಾದ್ ಪೂನಾವಾಲಾ, ‘ಸಂಸದರು ದೇಶದ ಜನರನ್ನು ಜಾತಿ, ಭಾಷೆ ಮತ್ತು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದರು. ಡಿಎಂಕೆ ಸಂಸದರ ವಿರುದ್ಧ ಇಂಡಿಯಾ ಮೈತ್ರಿಕೂಟ ತಾಳಿರುವ ‘ನಿಷ್ಕ್ರಿಯತೆ’ ಯನ್ನು ಟೀಕಿಸಿದರು.

ಬಿಜೆಪಿ ನಾಯಕ ದಯಾನಿಧಿ ಮಾರನ್ ಬಳಸಿದ ಭಾಷೆಯನ್ನು ‘ದುರದೃಷ್ಟಕರ’ ಎಂದಿರುವ ಶೆಹಜಾದ್ ಪೂನಾವಾಲಾ, ಒಕ್ಕೂಟದ ಇತರ ನಾಯಕರ ಕ್ರಮವನ್ನು ನೋಡಿದಾಗ ಈ ಹೇಳಿಕೆಯು ಕಾಕತಾಳೀಯವಲ್ಲ ಎಂದು ಹೇಳಿದ್ದಾರೆ.

“ದಯಾನಿಧಿ ಮಾರನ್ ಅವರ ಹೇಳಿಕೆಗೆ ಇಂಡಿಯಾ ಒಕ್ಕೂಟದ ನಾಯಕರಾದ ನಿತೀಶ್ ಕುಮಾರ್, ತೇಜಸ್ವಿ ಯಾದವ್, ಲಾಲು ಪ್ರಸಾದ್ ಯಾದವ್, ಕಾಂಗ್ರೆಸ್,  ಅಖಿಲೇಶ್ ಯಾದವ್ ಎಲ್ಲರೂ ಸುಮ್ಮನಿದ್ದಾರೆ. ಈ ರೀತಿ ಏನೂ ನಡೆಯುತ್ತಿಲ್ಲ ಎಂದು ನಟಿಸುತ್ತಿದ್ದಾರೆಯೇ? ಅವರು ಯಾವಾಗ ಈ ಬಗ್ಗೆ ತಮ್ಮ ನಿಲುವು ತೆಗೆದುಕೊಳ್ಳುತ್ತಾರೆ?” ಎಂದು ಪೂನಾವಾಲಾ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...