ಜ್ಞಾನವಾಪಿ | ಹಿಂದೂಗಳ ಪೂಜೆಗೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿದ್ದ ಮಸೀದಿ ಸಮಿತಿಯ ಅರ್ಜಿ ವಜಾ

Date:

ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿದ್ದ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್ ವಜಾಗೊಳಿಸಿದೆ.

ಹಿಂದೂಗಳ ಪ್ರಾರ್ಥನೆ ಮುಂದುವರಿಯಲಿದೆ ಎಂದು ನ್ಯಾಯಾಧೀಶ ರಂಜನ್ ಅಗರ್‌ವಾಲ್ ಅವರು ಮಸೀದಿ ಸಮಿತಿ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಕಳೆದ ತಿಂಗಳು ವಾರಣಾಸಿ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿ ಮಸೀದಿಯ ನೆಲ ಮಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಬಹುದು ಎಂದು ತೀರ್ಪು ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಪೂರ್ವಜರು ಡಿಸೆಂಬರ್ 1993ರವರೆಗೂ ಜ್ಞಾನವಾಪಿಯಲ್ಲಿ ಪೂಜೆ ಸಲ್ಲಿಸಿದ್ದರು ಎಂದು ಶೈಲೇಂದ್ರ ಕುಮಾರ್ ಪಾಠಕ್‌ ಎಂಬುವವರ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ಎತ್ತಿ ಹಿಡಿದಿತ್ತು. ನಾನೊಬ್ಬ ಅನುಮಂಶಿಕ ಅರ್ಚಕನಾದ ಕಾರಣ ತಮಗೆ ಪೂಜೆ ಮಾಡಲು ಅವಕಾಶ ನೀಡಬೇಕೆಂದು ಪಾಠಕ್‌ ಮನವಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

ಜ್ಞಾನವಾಪಿ ಮಸೀದಿಯು 4 ನೆಲಮಾಳಿಗೆಯನ್ನು ಹೊಂದಿದ್ದು, ಅದರಲ್ಲಿ ಒಂದು ವ್ಯಾಸ್‌ ಕುಟುಂಬಕ್ಕೆ ಸೇರಿದೆ. ಅರ್ಜಿದಾರರ ವಾದವನ್ನು ಮಸೀದಿ ಸಮಿತಿ ನಿರಾಕರಿಸಿದೆ. ನೆಲಮಾಳಿಗೆಯಲ್ಲಿ ಯಾವುದೇ ವಿಗ್ರಹಗಳು ಇರಲಿಲ್ಲ. ಹಾಗಾಗಿ 1993ರ ವರೆಗೂ ಪೂಜೆ ಮಾಡಿರುವ ಬಗ್ಗೆ ಪ್ರಶ್ನೆಗಳು ಉದ್ಭವಿಸುವುದಿಲ್ಲ ಎಂದು ಮಸೀದಿ ಸಮಿತಿ ಹೇಳಿದೆ.

ವಾರಣಾಸಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಮಸೀದಿ ಸಮಿತಿ ವಾರಣಾಸಿ ಹೈಕೋರ್ಟ್ ಮೆಟ್ಟಿಲೇರಿತ್ತು.

ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವರದಿ ಹೊರಬಿದ್ದ ನಂತರ ವಾರಣಾಸಿ ನ್ಯಾಯಾಲಯದ ತೀರ್ಪು ಪ್ರಕಟವಾಗಿತ್ತು. ಈ ಮಸೀದಿಯನ್ನು ಔರಂಗಜೇಬ್‌ ಆಡಳಿತದ ವೇಳೆ ಹಿಂದು ದೇವಾಲಯದ ಅವಶೇಷಗಳ  ಮೇಲೆ ನಿರ್ಮಿಸಲಾಗಿತ್ತು ಎಂದು ವರದಿ ಹೇಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...