ಭಾರತ ಹಿಂದೂರಾಷ್ಟ್ರವಾಗಬೇಕಾದರೆ ಹಿಂದೂ ಮಹಿಳೆಯರು ನಾಲ್ಕು ಮಕ್ಕಳಿಗೆ ಜನ್ಮನೀಡಬೇಕೆಂದ ಸ್ವಾಮೀಜಿ!

Date:

ಭಾರತ ಹಿಂದೂರಾಷ್ಟ್ರವಾಗಬೇಕಾದರೆ ಎಲ್ಲ ಹಿಂದೂ ಮಹಿಳೆಯರು ತಮ್ಮ ದೇಹದ ಸೌಂದರ್ಯದ ಚಿಂತೆಯನ್ನು ಬಿಟ್ಟು ಕನಿಷ್ಠ ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕು ಎಂದು ಸ್ವಾಮೀಜಿಯೊಬ್ಬರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ನಡೆಯುತ್ತಿರುವ ಶ್ರೀಮದ್ ಭಾಗವತ ಕಥಾದಲ್ಲಿ ಪ್ರವಚನ ನೀಡಿದ ಪಂಚಯತಿ ನಿರಾಂಜನಿ ಅಖಾಡಾದ ಮಹಾಮಂಡಲೇಶ್ವರ ಸ್ವಾಮಿ ಪ್ರೇಮಾನಂದ ಮಹಾರಾಜ್ ಈ ಪ್ರಚೋದನಕಾರಿ ಹೇಳಿಕೆಯನ್ನು ಮಾಡಿದ್ದಾರೆ.

“ನಾನು ಭಗವತ್ ಕಥಾದಲ್ಲಿ ನಿಮಗೆ ಇಷ್ಟವಾಗುವ ವಿಷಯವನ್ನು ಹೇಳಲು ಬಂದಿಲ್ಲ. ನಾನು ಸನಾತನ ಧರ್ಮವನ್ನು ಮುಂದಕ್ಕೆ ಕೊಂಡೊಯ್ಯುವ ವಿಷಯವನ್ನು ಹೇಳುತ್ತಿದ್ದೇನೆ. ಉತ್ತರ ಪ್ರದೇಶದ 17 ಜಿಲ್ಲೆಗಳು ನಮ್ಮ ಕೈ ತಪ್ಪಿಹೋಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಬುಡಕಟ್ಟು ಮಹಿಳೆಯರು ಹಿಂದೂಗಳಲ್ಲ, ಮಂಗಳಸೂತ್ರ ಧರಿಸಬಾರದು ಎಂದು ಹೇಳಿದ ಶಿಕ್ಷಕಿ ಅಮಾನತು

“ಪಶ್ಚಿಮ ಬಂಗಾಳದಲ್ಲೂ ಇದೇ ಪರಿಸ್ಥಿತಿಯಿದೆ. ಅಸ್ಸಾಂನಲ್ಲಿ 5 ಲಕ್ಷ ಜನರಿಗೆ ಪಾಸ್‌ಪೋರ್ಟ್ ಮತ್ತು ವೀಸಾ ಇಲ್ಲ. ಸರಳವಾಗಿ ಹೇಳುವುದಾದರೆ 2 ಕೋಟಿ ಆಗಿದ್ದವರು 9 ಕೋಟಿ ಆದರು, ಈಗ 38 ಕೋಟಿ ಆಗಿದ್ದಾರೆ” ಎಂದು ಮುಸ್ಲಿಮರ ಜನಸಂಖ್ಯೆಯನ್ನು ಉದ್ದೇಶಿಸಿ ದ್ವೇಷ ಬಿತ್ತುವ ಪ್ರವಚನ ಮಾಡಿದ್ದಾರೆ.

“ಇನ್ನೂ ಸಮಯವಿದೆ, ಜಾಗರೂಕರಾಗದಿದ್ದರೆ ಭಾರತವೂ ಇಂಡೋನೇಷ್ಯಾ ಆಗುತ್ತದೆ. ಶೀಘ್ರದಲ್ಲೇ ನೀವು ಅಲ್ಪಸಂಖ್ಯಾತರಾಗುತ್ತೀರಿ” ಎಂದಿದ್ದಾರೆ.

“ಸನಾತನ ಸಂಸ್ಕೃತಿಯನ್ನು ರಕ್ಷಿಸಲು ಮಹಿಳೆಯರು ತಲಾ ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕಾಗಿದೆ. ಹಿಂದೂ ಮಹಿಳೆಯರು ಒಂದೆರಡು ಮಕ್ಕಳನ್ನು ಹೆರಲು ಕೂಡ ಹಿಂಜರಿಯುತ್ತಿದ್ದಾರೆ. ಆದರೆ ಇತರ ಸಮುದಾಯದ ಜನರು 8-8 ಮಕ್ಕಳನ್ನು ಹೆರುತ್ತಾರೆ. ಹಿಂದೂ ಮಹಿಳೆಯರು ನಿಮ್ಮ ದೇಹ ಸೌಂದರ್ಯದ ಚಿಂತೆಯನ್ನು ಬಿಟ್ಟು ಸನಾತನ ಧರ್ಮ ಮತ್ತು ದೇಶಕ್ಕಾಗಿ ಏನಾದರೂ ಮಾಡಬೇಕು” ಎಂದು ಹೇಳಿದರು.

 

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...