ನವೀನ್ ಪಟ್ನಾಯಕ್‌ಗೆ ನಿವೃತ್ತಿ ಪಡೆಯಿರಿ ಎಂದ ಅಮಿತ್ ಶಾ, ಪರೋಕ್ಷವಾಗಿ ಮೋದಿಗೆ ಸೂಚನೆ ನೀಡಿದ್ದಾರೆಯೇ?

Date:

ಹೆಚ್ಚು ವಯಸ್ಸಾಗಿರುವ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ನಿವೃತ್ತಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿರುವುದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿಗೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ, 77 ವರ್ಷ ವಯಸ್ಸಾಗಿರುವ ನವೀನ್‌ ಪಟ್ನಾಯಕ್‌ ರಾಜಕೀಯ ನಿವೃತ್ತಿ ಪಡೆದುಕೊಳ್ಳಬೇಕು ಎಂದು ಮಾತನಾಡಿದ್ದಾರೆ. ಈ ರೀತಿ ಮಾತನಾಡಿ 73 ವರ್ಷ 7 ತಿಂಗಳಾಗಿರುವ ಪ್ರಧಾನಿ ನರೇಂದ್ರ ಮೋದಿಗೆ ಪರೋಕ್ಷವಾಗಿ ರಾಜಕೀಯ ನಿವೃತ್ತಿ ಪಡೆಯಿರಿ ಎಂದು ಸೂಚನೆ ನೀಡಿದ್ದಾರೆ ಎಂದಿದ್ದಾರೆ.

ಒಂದು ವೇಳೆ ಕೆಂದ್ರದಲ್ಲಿ ಬಿಜೆಪಿ ಅಧಿಕಾರ ರಚಿಸಿದರೆ ಅಮಿತ್‌ ಶಾ ಅವರು ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಬಿಜೆಪಿ ಸರ್ಕಾರ ರಚಿಸದಿದ್ದರೆ ಮೋದಿಗಿಂತ ಅಮಿತ್‌ ಶಾ ಹೆಚ್ಚು ಸಂತೋಷ ಪಡುತ್ತಾರೆ. ಹಾಗೆಯೇ ವಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಪಿ ಚಿದಂಬರಂ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ಒಂದು ವರ್ಷ, ಸಮರ್ಥನೀಯವಲ್ಲದ ನಡೆ

ಇತ್ತೀಚಿಗೆ ಒಡಿಶಾದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಅಮಿತ್‌ ಶಾ, ಹೆಚ್ಚು ವಯಸ್ಸಾಗಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ನವೀನ್‌ ಪಟ್ನಾಯಕ್‌ ನಿವೃತ್ತಿ ಪಡೆಯಬೇಕು. ಸ್ಥಳೀಯ ಬಿಜೆಪಿಯ ನಾಯಕರೊಬ್ಬರು ಅಧಿಕಾರ ರಚಿಸಲಿದ್ದಾರೆ ಎಂದು ಹೇಳಿದ್ದರು.

ಬಿಜೆಪಿ ನೀತಿಯಂತೆ 75 ವರ್ಷ ಮೇಲ್ಪಟ್ಟವರು ರಾಜಕೀಯ ನಿವೃತ್ತಿ ಪಡೆಯಬೇಕು. ಆದರೆ ಇತ್ತೀಚಿಗೆ ಮಾತನಾಡಿದ್ದ ಅಮಿತ್ ಶಾ 75 ವರ್ಷದ ನಂತರವೂ ಮೋದಿ ಪ್ರಧಾನಿಯಾಗಿ ಮುಂದುವರೆಯುತ್ತಾರೆ ಎಂದು ತಿಳಿಸಿದ್ದರು.

ಅಮಿತ್‌ ಶಾ ಹೇಳಿಕೆಯ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಒಳಗೊಂಡ ವಿಪಕ್ಷ ನಾಯಕರು ಬಿಜೆಪಿಯ ನಿವೃತ್ತಿಯ ನೀತಿ ಎಲ್‌ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಯಶವಂತ್‌ ಸಿನ್ಹಾ ಸೇರಿದಂತೆ ಕೆಲವರಿಗೆ ಮಾತ್ರ ಸೀಮಿತವೇ ಎಂದು ಪ್ರಶ್ನಿಸಿದ್ದರು. ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಒಳಗೊಂಡು ಹಲವು ನಾಯಕರನ್ನು 75 ವರ್ಷ ದಾಟಿದ ಕಾರಣದಿಂದ ಅಧಿಕಾರದಿಂದ ಕೆಳಗಿಳಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...