ಜೈಲಿಗೆ ವಾಪಸ್ ಹೋಗವುದಿಲ್ಲವೆನ್ನುವುದು ಕೇಜ್ರಿವಾಲ್ ಊಹೆ: ಸುಪ್ರೀಂ ಕೋರ್ಟ್

Date:

ಲೋಕಸಭಾ ಚುನಾವಣೆಯಲ್ಲಿ ಎಎಪಿಗೆ ಮತ ನೀಡಿದರೆ ನಾನು ಮತ್ತೆ ಜೈಲಿಗೆ ವಾಪಸ್‌ ಹೋಗುವುದಿಲ್ಲ ಎಂಬ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್,ಇದು ಜಾಮೀನು ನಿಯಮಗಳನ್ನು ಉಲ್ಲಂಘಿಸುವುದಿಲ್ಲ ಎಂದು ತಿಳಿಸಿದೆ.

ಕೇಜ್ರಿವಾಲ್‌ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅದು ಅವರ ಊಹೆ. ಈ ಬಗ್ಗೆ ನಾವೇನು ಹೇಳುವುದಿಲ್ಲ. ಜೂನ್‌ 2 ರಂದು ನ್ಯಾಯಾಲಯಕ್ಕೆ ಶರಣಾಗಬೇಕು ಎಂಬ ನಮ್ಮ ಆದೇಶ ಸ್ಪಷ್ಟವಾಗಿದೆ. ಕಾನೂನಿನ ಅನ್ವಯದಂತೆ ಕೋರ್ಟ್ ನಿರ್ಧಾರ ಕೈಗೊಂಡಿದೆ ಎಂದು ಜಾರಿ ನಿರ್ದೇಶನಾಲಯ ಪರ ವಕೀಲರಿಗೆ ಕೋರ್ಟ್ ತಿಳಿಸಿತು.

ನಾವು ಯಾವುದೇ ವಿನಾಯಿತಿ ನೀಡಿಲ್ಲ. ನಮ್ಮ ನಿರ್ಧಾರದ ಬಗ್ಗೆ ಟೀಕೆಗಳನ್ನು ಸ್ವಾಗತಿಸುತ್ತೇವೆ. ಇದನ್ನು ನಾವು ವಿವಾದವಾಗಿ ಮುಂದುವರೆಸುವುದಿಲ್ಲ. ನಮ್ಮ ಆದೇಶ ಸ್ಪಷ್ಟವಾಗಿದೆ. ನಾವು ದಿನಾಂಕವನ್ನು ನಿಗದಿಪಡಿಸಿದ್ದೇವೆ. ಮಧ್ಯಂತರ ಜಾಮೀನಿಗೆ ಕಾರಣಗಳನ್ನು ನೀಡಿದ್ದೇವೆ ಎಂದು ಹೇಳಿದ ಸುಪ್ರೀಂ ಕೋರ್ಟ್ ಜಾಮೀನನ್ನು ರದ್ದುಪಡಿಸಿ ಕೇಜ್ರಿವಾಲ್‌ ಅವರನ್ನು ಮತ್ತೆ ಜೈಲಿಗೆ ವಾಪಸ್‌ ಕಳಿಸಲು ನಿರಾಕರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಾಧ್ಯಮಗಳು ಮತ್ತು ಮೂರು ಕೊಲೆಗಳು

ಈ ಮೊದಲು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದ ಸಾಲಿಟರ್‌ ಜನರಲ್‌ ತುಷಾರ್ ಮೆಹತಾ, ಪ್ರಚಾರದ ಸಂದರ್ಭದಲ್ಲಿ ಕೇಜ್ರಿವಾಲ್ ಅವರು ಎಎಪಿ ಪರವಾಗಿ ಮತ ಚಲಾಯಿಸಿದರೆ ನಾನು ಮತ್ತೆ ಜೈಲಿಗೆ ವಾಪಸ್‌ ಹೋಗುವುದಿಲ್ಲ ಎಂದು ಹೇಳುತ್ತಿರುವುದನ್ನು ಕೋರ್ಟ್‌ಗೆ ಮನವರಿಕೆ ಮಾಡಿದರು.

“ಇದು ಕೋರ್ಟ್‌ ನೀಡಿದ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ನ್ಯಾಯಾಂಗದ ಕೆನ್ನೆಗೆ ಬಾರಿಸಿದಂತಾಗಿದೆ” ಎಂದು ವಾದ ಮಂಡಿಸಿದರು. ಆದರೆ ಕೋರ್ಟ್ ಸಾಲಿಟರ್‌ ಜನರಲ್‌ ವಾದವನ್ನು ಪರಿಗಣಿಸಲಿಲ್ಲ.

ಮೇ.12 ರಂದು ಸೋಮವಾರ ಚುನಾವಣಾ ಭಾಷಣ ಮಾಡಿದ್ದ ಕೇಜ್ರಿವಾಲ್, ನಾನು ಜೂನ್‌ 2 ರಂದು ಜೈಲಿಗೆ ಮರಳಲಿದ್ದು, ಜೈಲಿನಿಂದಲೇ ಜೂ.4 ರಂದು ಫಲಿತಾಂಶ ನೋಡುತ್ತೇನೆ. ಇಂಡಿಯಾ ಒಕ್ಕೂಟ ಜಯಗಳಿಸಿದರೆ ನಾನು ಜೂ.5 ರಂದು ವಾಪಸ್‌ ಜೈಲಿನಿಂದ ಬರುತ್ತೇನೆ ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...