ಮುಂಬೈ | ಮುರಿದು ಬಿದ್ದ ಬೃಹತ್ ಹೋರ್ಡಿಂಗ್; 14 ಸಾವು, 70ಕ್ಕೂ ಹೆಚ್ಚು ಜನರಿಗೆ ಗಾಯ

Date:

ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಮುರಿದು ಬಿದ್ದಿದ್ದು, ಘಟನೆಯಲ್ಲಿ ಈವರೆಗೆ 14 ಮಂದಿ ಸಾವನ್ನಪ್ಪಿದ್ದಾರೆ. 74 ಜನರು ಗಾಯಗೊಂಡಿದ್ದಾರೆ.

ಸೋಮವಾರ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿದೆ. ಈ ವೇಳೆ, ಘಾಟ್ಕೋಪರ್‌ನ ಪೆಟ್ರೋಲ್ ಪಂಪ್‌ನಲ್ಲಿ ಅಕ್ರಮವಾಗಿ ಹಾಕಲಾಗಿದ್ದ 100 ಅಡಿ ಎತ್ತರದ ಜಾಹೀರಾತು ಫಲಕ ಮುರಿದು ಬಿದ್ದಿದೆ.

ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಧಿಕಾರಿಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈವರೆಗೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 74 ಮಂದಿ ಗಾಯಗೊಂಡಿದ್ದು, ಅವರಲ್ಲಿ 31 ಜನರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. 35 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮವಾಗಿ ಹೋರ್ಡಿಂಗ್ ಹಾಕಿ, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಂಬೈ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಹೇಳಿದ್ದಾರೆ.

ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿರುವ ಫನ್ಸಾಲ್ಕರ್, “ಘಾಟ್ಕೋಪರ್‌ನಲ್ಲಿ ಸಂಭವಿಸಿದ ದುರದೃಷ್ಟಕರ ದುರ್ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳು. ಮುಂಬೈಪೊಲೀಸ್ ತಂಡವು ರಕ್ಷಣಾ ಕಾರ್ಯಾಚರಣೆಯಲ್ಲಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡುತ್ತೇವೆ” ಎಂದಿದ್ದಾರೆ.

‘M/s Ego Media Private Limited’ ಮಾಲೀಕ ಭವೇಶ್ ಭಿಂಡೆ ಮತ್ತು ಇತರರ ವಿರುದ್ಧ ಪಂತ್ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಮತ್ತು ನರಹತ್ಯೆ ಆರೋಪದ ಮೇಲೆ ಐಪಿಸಿ ಸೆಕ್ಷನ್ 304, 338, ಮತ್ತು 337 ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಥಳಕ್ಕೆ ತೆರಳಿ, ಪರಿಸ್ಥಿತಿ ಅವಲೋಕಿಸಿದ್ದಾರೆ. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುವುದು ಮತ್ತು ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಏತನ್ಮಧ್ಯೆ, ಜಾಹೀರಾತು ಏಜೆನ್ಸಿಗೆ ಬಿಎಂಸಿ ನೋಟಿಸ್ ಜಾರಿ ಮಾಡಿದ್ದು, ಸ್ಥಳದ ಸಮೀಪವಿರುವ ಉಳಿದ ಮೂರು ಹೋರ್ಡಿಂಗ್‌ಗಳನ್ನು ತಕ್ಷಣ ತೆಗೆದುಹಾಕುವಂತೆ ತಾಕೀತು ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...