ಹೋಳಿ ಹಬ್ಬ | ಉತ್ತರ ಪ್ರದೇಶದಲ್ಲಿ 11 ಮಂದಿ ಸಾವು

Date:

ಹೋಳಿ ಹಬ್ಬದ ಆಚರಣೆ ವೇಳೆ ಉತ್ತರ ಪ್ರದೇಶದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. 9 ಮಂದಿ ಪ್ರತ್ಯೇಕ ಅಪಘಾತಗಳಲ್ಲಿ ಸಾವನ್ನಪ್ಪಿದ್ದರೆ, ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ, ಮರಕ್ಕೆ ಕಾರು ಡಿಕ್ಕಿ ಹೊಡೆದು, ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಮೈನ್‌ಪಾಲ್ (35) ಮತ್ತು ರಾಜು (30) ಎಂದು ಗುರುತಿಸಲಾಗಿದೆ. ಸೋನ್‌ಭದ್ರದಲ್ಲಿ ಹೋಳಿ ಹಬ್ಬದ ಆಚರಣೆಗಾಗಿ ತೆರಳುತ್ತಿದ್ದ ವೇಳೆ ಇಬ್ಬರಿಗೆ ಲಾರಿ ಡಿಕ್ಕಿ ಹೊರೆದಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರನ್ನು ಸಂದೀಪ್ ಚೌಹಾಣ್ (20) ಮತ್ತು ವಿಕಿ ಚೌಹಾಣ್ (21) ಎಂದು ಗುರುತಿಸಲಾಗಿದೆ.

ಭದೋಹಿಯಲ್ಲಿ, ಸಂಬಂಧಿಯ ಮನೆಯಲ್ಲಿ ಹೋಳಿ ಹಬ್ಬ ಅಚರಿಸಿ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಇಬ್ಬರು ಯುವಕರು ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಓಂಪ್ರಕಾಶ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಜ್‌ಗಂಜ್‌ನಲ್ಲಿ, ಬೈಕ್‌ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ನೇಹಿತರು ಮೃತಪಟ್ಟಿದ್ದಾರೆ. ಅಲ್ಲದೆ, ಸುಲ್ತಾನ್‌ಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿ, ಓರ್ವ ಮೃತಪಟ್ಟಿದ್ದಾರೆ. ಮೃತನನ್ನು ಸುರೇಶ್‌ ಕುಮಾರ್‌ ರೈದಾಸ್ ಎಂದು ಗುರುತಿಸಲಾಗಿದೆ.

ಇನ್ನು, ಬಾರಾಬಂಕಿಯ ಟಿಕೈತ್‌ ನಗರ ಪ್ರದೇಶದಲ್ಲಿ ಹೋಳಿ ಹಬ್ಬ ಮುಗಿಸಿ ಈಜಲು ಘಾಗ್ರಾ ನದಿಗೆ ಇಳಿದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...