ರಾಜಭವನದ ಘನತೆಗೆ ಚ್ಯುತಿ: ಪಶ್ಚಿಮ ಬಂಗಾಳ ಪೊಲೀಸ್ ಆಯುಕ್ತ, ಡಿಸಿಪಿ ವಿರುದ್ಧ ಗೃಹ ಸಚಿವಾಲಯದಿಂದ ಶಿಸ್ತು ಕ್ರಮ

Date:

ಪಶ್ಚಿಮ ಬಂಗಾಳ ರಾಜ್ಯಪಾಲರ ಕಚೇರಿಯ ವಿರುದ್ಧ ಸುಳ್ಳು ವದಂತಿಗಳನ್ನು ಹರಡಲಾಗುತ್ತಿದೆ ಎಂಬ ಆರೋಪದಡಿ ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಹಾಗೂ ಓರ್ವ ಉಪ ಪೊಲೀಸ್ ಆಯುಕ್ತರ ವಿರುದ್ಧ ಶಿಸ್ತು ಕ್ರಮಕ್ಕೆ ಕೇಂದ್ರ ಗೃಹ ಸಚಿವಾಲಯ ಚಾಲನೆ ನೀಡಿದೆ ಎಂದು ಕೇಂದ್ರ ಸರಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಹಾಗೂ ಕೋಲ್ಕತ್ತಾ ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಇಂದಿರಾ ಮುಖರ್ಜಿ ಸಾರ್ವಜನಿಕ ಸೇವಕರಾಗಲು ಅನರ್ಹರು ಎಂಬಂತೆ ಕಾರ್ಯಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಆರೋಪಿಸಿ, ಅವರ ವಿರುದ್ಧ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ ಬೋಸ್ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಿದ ನಂತರ ಕೇಂದ್ರ ಗೃಹ ಸಚಿವಾಲಯ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೋತ್ತರ ಹಿಂಸಾಚಾರದ ಸಂತ್ರಸ್ತರು ನನ್ನನ್ನು ಭೇಟಿಯಾಗಲು ಅಗತ್ಯ ಅನುಮತಿಯನ್ನು ನೀಡಿದ ಹೊರತಾಗಿಯೂ ಕೋಲ್ಕತ್ತಾ ಪೊಲೀಸ್ ಅಧಿಕಾರಿಗಳು ಅವರಿಗೆ ನನ್ನನ್ನು ಭೇಟಿಯಾಗಲು ಅವಕಾಶ ನೀಡಿಲ್ಲ ಎಂದು ಕಳೆದ ಜೂನ್ ತಿಂಗಳಲ್ಲಿ ರಾಜ್ಯಪಾಲ ಸಿ ವಿ ಆನಂದ್ ಬೋಸ್ ಕೇಂದ್ರ ಗೃಹ ಸಚಿವರಿಗೆ ವರದಿ ಸಲ್ಲಿಸಿದ್ದರು.

“ಪಶ್ಚಿಮ ಬಂಗಾಳ ರಾಜ್ಯಪಾಲರು ಐಪಿಎಸ್ ಅಧಿಕಾರಿಗಳ ವಿರುದ್ಧ ಸಲ್ಲಿಸಿದ ವಿಸ್ತೃತ ವರದಿಯನ್ನು ಆಧರಿಸಿ, ಅವರ ವಿರುದ್ಧ ಕೇಂದ್ರ ಗೃಹ ಸಚಿವಾಲಯವು ಶಿಸ್ತು ಕ್ರಮಕ್ಕೆ ಚಾಲನೆ ನೀಡಿದೆ.ಪತ್ರದ ಪ್ರತಿಗಳನ್ನು ಜುಲೈ 4 ರಂದು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...