ಹನಿಮೂನ್ ಕೊಲೆ ಪ್ರಕರಣ | ದರೋಡೆಕೋರರು ಗಂಡನನ್ನು ಕೊಂದರು: ಆರೋಪಿ ಸೋನಮ್ ರಘುವಂಶಿ

Date:

ಹನಿಮೂನ್‌ಗೆ ಹೋಗಿದ್ದ ವೇಳೆ ಸುಪಾರಿ ಕೊಟ್ಟು ತನ್ನ ಪತಿ ರಾಜ ರಘುವಂಶಿಯನ್ನು ಕೊಲೆ ಮಾಡಿಸಿದ ಆರೋಪವನ್ನು ಹೊತ್ತಿರುವ ಪತ್ನಿ ಸೋನಮ್ ರಘುವಂಶಿ “ದರೋಡೆಕೋರರು ನನ್ನ ಗಂಡನನ್ನು ಕೊಂದರು. ನನ್ನ ಆಭರಣಗಳನ್ನು ದೋಚಲು ದರೋಡೆಕೋರರು ಯತ್ನಿಸಿದ್ದರು” ಎಂದು ಹೇಳಿಕೊಂಡಿದ್ದಾರೆ. ಹನಿಮೂನ್ ಕೊಲೆ ಪ್ರಕರಣ ಎಂದೆ ಕರೆಯಲಾಗುತ್ತಿರುವ ಈ ಪ್ರಕರಣವು ಸದ್ಯ ದೇಶದಾದ್ಯಂತ ಸಂಚಲನ ಮೂಡಿಸಿದೆ.

ಮಧ್ಯಪ್ರದೇಶದ ಇಂದೋರ್ ಮೂಲದ ರಾಜ ರಘುವಂಶಿ ಮತ್ತು ಸೋನಮ್ ರಘುವಂಶಿಯು ಮೇ 11ರಂದು ವಿವಾಹವಾಗಿದ್ದು ತಮ್ಮ ಹನಿಮೂನ್‌ಗಾಗಿ ಶಿಲ್ಲಾಂಗ್‌ಗೆ ಹೋಗಿದ್ದರು, ಬಳಿಕ ಮೇ 23ರಂದು ಇಬ್ಬರೂ ನಾಪತ್ತೆಯಾಗಿದ್ದರು. ಈ ಪೈಕಿ ರಾಜಾ ಅವರ ಮೃತದೇಹವು ಜೂನ್ 2ರಂದು ಪೂರ್ವ ಖಾಸಿ ಬೆಟ್ಟದ ಜಿಲ್ಲೆಯ ಕಮರಿಯಲ್ಲಿ ಪತ್ತೆಯಾಗಿತ್ತು. ಆದರೆ ಸೋನಮ್ ಪತ್ತೆಯಾಗಿರಲಿಲ್ಲ.

ಇದನ್ನು ಓದಿದ್ದೀರಾ? ಜಾತಿ ಸಮೀಕ್ಷೆ ವಿರೋಧಿಸುತ್ತಿರುವವರು ಲೂಟಿಕೋರರು, ದರೋಡೆಕೋರರು: ಪ್ರೊ.ರವಿವರ್ಮಕುಮಾರ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋನಮ್‌ಗಾಗಿ ಹುಡುಕಾಟ ನಡೆಯುತ್ತಿರುವಾಗಲೇ ಸೋಮವಾರ ಉತ್ತರ ಪ್ರದೇಶ ಗಾಜಿಪುರದ ಪೊಲೀಸರ ಮುಂದೆ ಸೋಮವಾರ ಸೋನಮ್ ಶರಣಾಗಿದ್ದರು. ಆಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮೇಘಾಲಯ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ಈ ಕೊಲೆಗೆ ಸೋನಮ್ ಅವರೇ ಸುಪಾರಿ ನೀಡಿದ್ದಾರೆ ಎಂದಿದ್ದಾರೆ.

ಹಾಗಾಗಿ ಪೊಲೀಸರು ಸೋನಮ್ ಬಂಧನ ಮಾಡಿದ್ದಾರೆ. ಢಾಬಾ ಒಂದರಲ್ಲಿ ಸಹಾಯ ಕೋರಿ ಸೋನಮ್ ಬಂದಿದ್ದರು. ಬಳಿಕ ಅಲ್ಲಿಂದಲೇ ತಮ್ಮ ಕುಟುಂಬಸ್ಥರಿಗೆ ಕರೆ ಮಾಡಿದ್ದರು ಎನ್ನಲಾಗಿದೆ. “ಸೋನಮ್ ತುಂಬಾ ದುಖಿಃತರಾಗಿದ್ದರು” ಎಂದು ಢಾಬಾ ಮಾಲೀಕ ಸಾಹಿಲ್ ಹೇಳಿದ್ದಾರೆ.

ಮೇಘಾಲಯ ಪೊಲೀಸರು ಸೋನಮ್ ತನ್ನ ಪತಿಯ ಕೊಲೆಗಾಗಿ ಸುಪಾರಿ ನೀಡಿದ್ದರು ಎಂದು ಹೇಳಿದ್ದಾರೆ. ಈ ಸಂಬಂಧ ಸೋನಂ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇತ್ತ ಘಾಜಿಪುರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಸೋನಮ್ ಯಾವುದೇ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...