ಮಹಾರಾಷ್ಟ್ರದಲ್ಲಿ 75ಕ್ಕೂ ಹೆಚ್ಚು ಅಧಿಕಾರಿಗಳ ಮೇಲೆ ಹನಿಟ್ರ್ಯಾಪ್

Date:

ಮಹಾರಾಷ್ಟ್ರದಲ್ಲಿ ಬೃಹತ್ ಹನಿಟ್ರ್ಯಾಪ್ ಹಗರಣ ನಡೆದಿದೆ ಎಂಬ ಸುದ್ದಿ ಬೆಳಕಿಗೆ ಬಂದಿದ್ದು, ಆಡಳಿತ ವ್ಯವಸ್ಥೆಯನ್ನು ಬೆಚ್ಚಿಬೀಳಿಸಿದೆ. ಸುಮಾರು 75ಕ್ಕೂ ಹೆಚ್ಚು ಹಿರಿಯ ಸರ್ಕಾರಿ ಅಧಿಕಾರಿಗಳು, ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರ ಮೇಲೆ ಹನಿಟ್ರ್ಯಾಪ್‌ ನಡೆಸಲಾಗಿದೆ ಎಂದು ವರದಿಯಾಗಿದೆ. ಸುದ್ದಿ ಬೆಳಕಿಗೆ ಬಂದ ಬೆನ್ನಲ್ಲೇ, ಮಹಾರಾಷ್ಟ್ರದ ವಿಪಕ್ಷಗಳು ತನಿಖೆಗೆ ಆಗ್ರಹಿಸಿವೆ.

ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ವಿಚಾರವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್ ಹಿರಿಯ ನಾಯಕ ನಾನಾ ಪಟೋಲೆ, “ಇದು ಸಾಮಾನ್ಯ ಅಪರಾಧವಲ್ಲ. ಈ ಹಗರಣವು ರಾಷ್ಟ್ರದ ಭದ್ರತೆಗೆ ಭಾರೀ ಅಪಾಯ ಉಂಟುಮಾಡುವ ಸಾಧ್ಯತೆ ಇದೆ. ಇಂತಹ ಟ್ರ್ಯಾಪ್‌ಗಳಿಂದ ರಹಸ್ಯ ದಾಖಲೆಗಳು ರಾಷ್ಟ್ರ ವಿರೋಧಿ ಶಕ್ತಿಗಳಿಗೆ ದೊರೆಯುವ ಅಪಾಯವಿದೆ. ಈ ಬಗ್ಗೆ ಸರ್ಕಾರ ಕೂಡಲೇ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಎನ್‌ಸಿಪಿ (ಎಸ್‌ಪಿ) ವಕ್ತಾರ ಮಹೇಶ್ ತಪಸೇ, “ಹನಿಟ್ರ್ಯಾಪ್‌ ಹಗರಣವು ಮುಂಬೈ, ಥಾಣೆ, ಪುಣೆ ಹಾಗೂ ನಾಸಿಕ್ ಸೇರಿದಂತೆ ಪ್ರಮುಖ ನಗರಗಳಲ್ಲಿ ನಡೆದಿದೆ. ಇದರಿಂದ ರಾಜ್ಯದ ಆಡಳಿತಕ್ಕೆ ಅಪಾಯವಾಗಲಿದೆ. ಉನ್ನತ ಹುದ್ದೆಯಲ್ಲಿ ಇರುವ ಅಧಿಕಾರಿಗಳ ಖಾಸಗಿ ಜೀವನಕ್ಕೂ ಭದ್ರತೆ ಇಲ್ಲವಾಗಿದೆ. ಇಂತಹ ಹಗರಣಗಳ ಬಗ್ಗೆ ಸರ್ಕಾರದ ಮೌನವು ಅನುಮಾನ ಹುಟ್ಟುಹಾಕಿದೆ. ಗುಪ್ತಚರ ಇಲಾಖೆಗಳು ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ವಿಫಲವಾಗಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹನಿಟ್ರ್ಯಾಪ್ ಜಾಲದ ಹಿಂದೆ ನಾಸಿಕ್‌ ಮೂಲಕ ರಾಜಕೀಯ ಮಾಜಿ ಪದಾಧಿಕಾರಿಯ ಕೈವಾಡವಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಸಾಮಾಜಿಕ ಕಾರ್ಯಕರ್ತ ವಿಜಯ್ ಕುಂಭಾರ್, “ನಾಸಿಕ್‌ನ ಐಷಾರಾಮಿ ಹೋಟೆಲ್‌ಗಳಲ್ಲಿ ಈ ಸಂಚು ನಡೆಯುತ್ತಿದೆ. ಈ ಬಗ್ಗೆ ಮಹಿಳೆಯೊಬ್ಬರು ಮುಂಬೈನ ನಾಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...