ಮರ್ಯಾದೆಗೇಡು ಹತ್ಯೆ | ಧರ್ಮದ ಗಡಿ ಮೀರಿ ಪ್ರೀತಿ ಬೆಸೆದಿದ್ದ ಪ್ರೇಮಿಗಳ ಬರ್ಬರ ಕೊಲೆ

Date:

ಎರಡು ವಿಭಿನ್ನ ಕೋಮುವಿನ ಯುವಕ-ಯುವತಿ ಪರಸ್ಪರ ಪ್ರೀತಿಸಿದ್ದಕ್ಕಾಗಿ, ಅವರನ್ನು ಯುವತಿಯ ಕುಟುಂಬಸ್ಥರು ಬರ್ಬರವಾಗಿ ಕೊಲೆಗೈದಿರುವ ಮರ್ಯಾದೆಗೇಡು ಹತ್ಯೆ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಘಟನೆ ನಡೆದಿದ್ದು, ಯುವತಿಯ ಸಹೋದರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಹಮ್ಮದ್ ಅರ್ಮಾನ್ (24) ಮತ್ತು ಕಾಜಲ್ ಸೈನಿ (18) ಇಬ್ಬರೂ ಮೊರಾದಾಬಾದ್‌ನ ಉಮ್ರಿ ಸಬ್ಜಿಪುರ ಗ್ರಾಮದ ನಿವಾಸಿಗಳು. ಇವರಿಬ್ಬರೂ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ಇಬ್ಬರೂ ಮೂರು ದಿನಗಳಿಂದ ನಾಪತ್ತೆಯಾಗಿದ್ದರು. ಇದೀಗ, ಅವರ ಮೃತದೇಹಗಳು ಬುಧವಾರ ಸಂಜೆ ಗ್ರಾಮದ ಹೊರವಲಯದಲ್ಲಿರುವ ದೇವಸ್ಥಾನದ ಬಳಿ ಪತ್ತೆಯಾಗಿವೆ ಎಂದು ಪಕ್ಬಾಡಾ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮುಂದುವರೆದ ತಮಿಳುನಾಡು ರಾಜ್ಯಪಾಲರ ಮೊಂಡಾಟ: ಸುಪ್ರೀಂ ತಪರಾಕಿಗೂ ಬೆಲೆ ಇಲ್ಲವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ, ಕಾಜಲ್ ಅವರನ್ನು ಭೇಟಿ ಮಾಡಲು ಅರ್ಮಾನ್ ತೆರಳಿದ್ದರು. ಅವರನ್ನು ಕಾಜಲ್ ಅವರ ಸಂಬಂಧಿಕರು ಗಮನಿಸಿದ್ದಾರೆ. ಕೋಪಗೊಂಡ ಕಾಜಲ್ ಕುಟುಂಬಸ್ಥರು ಪ್ರೇಮಿಗಳ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ. ಬಳಿಕ, ಗ್ರಾಮದ ಸಮೀಪವಿರುವ ಗಗನ್ ನದಿಯ ಬಳಿ ಮೃತದೇಹಗಳನ್ನು ಹೂತುಹಾಕಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

ಭಾನುವಾರದಿಂದ ಅರ್ಮಾನ್‌ ಕಾಣೆಯಾಗಿದ್ದರಿಂದ, ಆತನ ಕುಟುಂಬಸ್ಥರು ತಮ್ಮ ಮಗ ನಾಪತ್ತೆಯಾಗಿದ್ದಾರೆಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಆರಂಭಿಸಿದ್ದರು. ವಿಚಾರಣೆಯ ವೇಳೆ, ಯುವತಿಯ ಸಹೋದರರು ಅರ್ಮಾನ್‌ ಮತ್ತು ಕಾಜಲ್‌ರನ್ನು ಕೊಂದಿದ್ದಾರೆ ಎಂಬುದು ಬಹಿರಂಗವಾಗಿದೆ. ಆರೋಪಿಗಳು ನೀಡಿದ ಮಾಹಿತಿ ಆಧಾರದಲ್ಲಿ ನದಿ ಮತ್ತು ದೇವಸ್ಥಾನದ ಬಳಿ ಶೋಧ ನಡೆಸಲಾಗಿದ್ದು, ಇಬ್ಬರ ಮೃತದೇಹಗಳೂ ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.

ಬಳಿಕ, ಯುವತಿಯ ಸಹೋದರರಾದ ರಿಂಕು ಸೈನಿ ಮತ್ತು ಸತೀಶ್ ಸೈನಿ ಅವರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...