ಮರ್ಯಾದೆಗೇಡು ಹತ್ಯೆ | ತಳ ಸಮುದಾಯದ ಅಳಿಯನನ್ನು ಗುಂಡಿಕ್ಕಿ ಕೊಂದ ಜಾತಿವಾದಿ ಮಾವ

Date:

ಜಾತೀಯತೆ, ಜಾತಿ ದೌರ್ಜನ್ಯವನ್ನು ತೊಡೆದು ಹಾಕಲು ಸಂವಿಧಾನದಲ್ಲಿ ನಾನಾ ಕಾನೂನುಗಳನ್ನು ರೂಪಿಸಲಾಗಿದೆ. ಆದರೂ, ಪ್ರಬಲ ಜಾತಿಗಳಲ್ಲಿ ಜಾತಿ ರೋಗ ವಾಸಿಯಾಗಿಲ್ಲ. ಜಾತಿಯ ಕಾರಣಕ್ಕಾಗಿ ದೌರ್ಜನ್ಯಗಳು, ಅತ್ಯಾಚಾರಗಳು, ಹತ್ಯೆಗಳು ಮುಂದುವರೆದಿವೆ. ಅಂತಹದ್ದೇ ಪ್ರಕರಣವೊಂದರಲ್ಲಿ ತನ್ನ ಅಳಿತ ತಳ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಅಳಿಯನನ್ನು ಜಾತಿವಾದಿ ಮಾವನೊಬ್ಬ ಗುಂಡಿಕ್ಕಿ ಕೊಂದರುವ ಅಮಾನುಷ ‘ಮರ್ಯಾದೆಗೇಡು ಹತ್ಯೆ’ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ದರ್ಭಂಗಾದಲ್ಲಿ ಘಟನೆ ನಡೆದಿದೆ. ದರ್ಭಂಗಾ ವೈದ್ಯಕೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ನರ್ಸಿಂಗ್‌ ವಿದ್ಯಾರ್ಥಿ ರಾಹುಲ್‌ ಎಂಬವರನ್ನು ಆತನ ಮಾವ ಕೊಂದಿದ್ದಾನೆ.

ತಳಸಮುದಾಯದ ರಾಹುಲ್ ಮತ್ತು ಆತನ ಸಹಪಾಠಿ, ಪ್ರಬಲ ಜಾತಿಯ ಯುವತಿ ಪರಸ್ಪರ ಪ್ರೀತಿಸಿ ಇದೇ ವರ್ಷದ ಏಪ್ರಿಲ್‌ನಲ್ಲಿ ವಿವಾಹವಾಗಿದ್ದರು. ಆ ಕಾರಣಕ್ಕಾಗಿಯೇ ಯುವತಿ ತಂದೆ ಪ್ರೇಮಶಂಕರ್‌ ಝಾ ಎಂಬಾತ ರಾಹುಲ್‌ನನ್ನು ಕಾಲೇಜಿನ ಆವರಣದಲ್ಲಿಯೇ ಗುಂಡು ಹಾರಿಸಿ ಕೊಂದಿದ್ದಾನೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬಿಹಾರದಲ್ಲಿ ಎದುರಾಳಿಗಳ ಕೈಕಾಲು ಕಟ್ಟಿ, ತಾನು ಗೆಲ್ಲುವುದು ಬಿಜೆಪಿ ಹುನ್ನಾರ

ರಾಹುಲ್ ಮೇಲೆ ಪ್ರೇಮಾಶಂಕರ್ ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆತನನ್ನು ಕಾಲೇಜಿನ ವಿದ್ಯಾರ್ಥಿಗಳು ಹಿಡಿದು, ಥಳಿಸಿದ್ದಾರೆ. ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ರಾಹುಲ್ ಹತ್ಯೆಯನ್ನು ಖಂಡಿಸಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸಾಮಾಜಿಕ ಜಾಗೃತಿ, ಅರಿವು ಮೂಡಿಸಲು ಸಾವಿರಾರು ಕಾರ್ಯಕ್ರಮಗಳು ನಡೆಯುತ್ತಿದ್ದರೂ ಕೂಡಾ ಜನರಲ್ಲಿ ಅಂಟಿಕೊಂಡಿರುವ ಜಾತಿಯ ವೈರಸ್‌ ಇನ್ನೂ ತೊಲಗದೇ ಇರುವುದು ವಿಪರ್ಯಾಸ. ಭಾರತೀಯ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ಮತ್ತು ಸಮಾನತೆಯನ್ನು ಬೋಧಿಸಲಾಗಿದೆ. ಆದರೂ ಇಂದಿಗೂ ಜಾತಿ ಧರ್ಮಗಳ ಕಾರಣಕ್ಕಾಗಿ ತಮ್ಮ ಮಕ್ಕಳನ್ನು ಹತ್ಯೆಗೈಯ್ಯುತ್ತಿರುವ ಘಟನೆಗಳು ನಡೆಯುತ್ತಲೇ ಇವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...