ಭೀಕರ ಕೃತ್ಯ | ಬಾಲಕನನ್ನು ವಿವಸ್ತ್ರಗೊಳಿಸಿ, ಇರಿದು ಕೊಂದ 8 ಮಂದಿ ದುಷ್ಕರ್ಮಿಗಳು

Date:

ದುಷ್ಕರ್ಮಿಗಳ ಗುಂಪೊಂದು 14 ವರ್ಷದ ಬಾಲಕನನ್ನು ವಿವಸ್ತ್ರಗೊಳಿಸಿ ಭೀಕರವಾಗಿ ಇರಿದು ಕೊಂದಿರುವ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ನಾಲ್ವರು ಬಾಲಾಪರಾಧಿಗಳು ಸೇರಿದಂತೆ 8 ಜನರ ಗುಂಪು ಈ ಕೃತ್ಯ ಎಸಗಿದೆ ಎಂದು ಪೊಪಲೀಸರು ತಿಳಿಸಿದ್ದಾರೆ.

ದೆಹಲಿಯ ಹೈದರ್ಪುರ ಪ್ರದೇಶದಲ್ಲಿ ಘಟನೆ ನಡೆದಿದೆ. ಬಾಲಕ ಮೃತದೇಹವು ಹೈದರ್ಪುರ ಹೊರವಲಯದಲ್ಲಿರುವ ಕಾಲುವೆಯಲ್ಲಿ ಪತ್ತೆಯಾಗಿದೆ. ಸಿರಾಸ್ಪುರದ ಜೀವನ್ ಪಾರ್ಕ್ ನಿವಾಸಿಯಾಗಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿ, ವಿವಸ್ತ್ರಗೊಳಿಸಿ, ಕೊಂದಿದ್ದಾರೆ. ಇದು ಸೇಡಿನ ಕೃತ್ಯವಾಗಿದೆ ಎಂದು ಪೊಲಿಸರು ಶಂಕಿಸಿದ್ದಾರೆ.

ಕೃತ್ಯವು ಮೂರ್ನಾಲ್ಕು ದಿನಗಳ ಹಿಂದೆಯೇ ನಡೆದಿದ್ದು, ಈಗ ಮೃತದೇಹ ಪತ್ತೆಯಾಗಿದೆ. ದೇಹವು ಭಾಗಶಃ ಕೊಳೆತಿದ್ದು, ಪೊಲಿಸರು ಮರಣೋತ್ತರ ಪರೀಕ್ಷೆಗೆ ರವಾಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು, ಅವರ ಬಂಧನಕ್ಕಾಗಿ ಪೊಲೀಸ್‌ ತಂಡಗಳನ್ನು ರಚಿಸಿದ್ದಾರೆ.

“ತಾಂತ್ರಿಕ ಕಣ್ಗಾವಲು ಬಳಸಿ, ಇಬ್ಬರು ಪ್ರಮುಖ ಆರೋಪಿಗಳಾದ ಕೃಷ್ಣ ಅಲಿಯಾಸ್ ಭೋಲಾ (19) ಮತ್ತು ಇನ್ನೊಬ್ಬ ಬಾಲಾಪರಾಧಿಯನ್ನು ಮೊದಲಿಗೆ ಗುರುತಿಸಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಹರೇಶ್ವರ್ ವಿ ಸ್ವಾಮಿ ಹೇಳಿದ್ದಾರೆ.

ಕಳೆದ ವರ್ಷ ಮೋನು ಮತ್ತು ಸೋನು ಎಂಬವರು ಆರೋಪಿ ಕೃಷ್ಣನ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಬಗ್ಗೆ ಸಾಕ್ಷಿ ಹೇಳಲು ಮೃತ ಬಾಲಕ ನಿರಾಕರಿಸಿದ್ದನು. ಈ ಕಾರಣಕ್ಕೆ, ಆರೋಪಿ ಕೃಷ್ಣ ಮೃತ ಬಾಲಕನ ಮೇಲೆ ದ್ವೇಷ ಸಾಧಿಸಿದ್ದ. ಆತನನ್ನು ಕೊಲ್ಲಲು ತನ್ನ ಇತರ ಏಳು ಮಂದಿ ಆರೋಪಿ ಸ್ನೇಹಿತರೊಂದಿಗೆ ಸಂಚು ರೂಪಿಸಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

“ಜೂನ್ 29-30ರ ನಡುರಾತ್ರಿ ಕೃಷ್ಣ ಮತ್ತು ಇತರ ಆರೋಪಿಗಳು ವೀರ್ ಚೌಕ್ ಬಜಾರ್ ಬಳಿ ಮೃತ ಬಾಲಕನನ್ನು ಅಡ್ಡಗಟ್ಟಿದ್ದಾರೆ. ಆತನ ಸ್ನೇಹಿತನ ಎದುರೇ ಅಪಹರಿಸಿ, ಎಳೆದೊಯ್ದಿದ್ದಾರೆ. ಅಲ್ಲಿ, ಆತನ ಬಾಯಿಗೆ ಸ್ಕಾರ್ಫ್‌ ಕಟ್ಟಿ, ಆತನನ್ನು ವಿವಸ್ತ್ರಗೊಳಿಸಿ, ಆರೋಪಿಗಳು ಸರದಿಯಲ್ಲಿ ಆತನಿಗೆ ಇರಿದಿದ್ದಾರೆ. ಮೃತದೇಹವನ್ನು ನೀರಿಗೆ ಎಸೆದಿದ್ದಾರೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಗಳ ಬಳಿಕ ಈವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...