ವ್ಯಾಲೆಂಟೈನ್ಸ್‌ ದಿನದಂದೇ ಘೋರ ದುರಂತ: ಕಾರಿನಲ್ಲೇ ಯುವತಿಯನ್ನು ಕೊಂದು, ತಾನೂ ಗುಂಡು ಹಾರಿಸಿಕೊಂಡ ವ್ಯಕ್ತಿ

Date:

ಪ್ರೇಮಿಗಳ ದಿನದಂದೇ (ವ್ಯಾಲೆಂಟೈನ್ಸ್‌ ಡೇ) ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 107ರ ಪ್ರದೇಶದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಯುವಕ ಮತ್ತು ಯುವತಿಯ ಶವಗಳು ಗುಂಡೇಟಿನ ಗಾಯಗಳೊಂದಿಗೆ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

​ನೋಯ್ಡಾದ ಸೆಕ್ಟರ್ 39 ಪೊಲೀಸ್ ಠಾಣಾ ವ್ಯಾಪ್ತಿಯ ದಾದ್ರಿ ರಸ್ತೆಯ ಪಿಲ್ಲರ್ ನಂ. 84ರ ಸಮೀಪ ಕಾರೊಂದು ಅನುಮಾನಾಸ್ಪದವಾಗಿ ನಿಂತಿರುವುದಾಗಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲಿಸಿದಾಗ, ಕಾರಿನೊಳಗೆ ಇಬ್ಬರು ಮೃತಪಟ್ಟಿರುವುದು ಕಂಡುಬಂದಿದೆ. ಕಾರು ಒಳಗಿನಿಂದ ಲಾಕ್ ಆಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪರಿಶೀಲನೆಯ ವೇಳೆ ಇಬ್ಬರ ತಲೆಗೆ ಗುಂಡೇಟು ಬಿದ್ದಿರುವುದು ದೃಢಪಟ್ಟಿದೆ. ಮೃತ ವ್ಯಕ್ತಿಯ ಕೈಯಲ್ಲಿ ಪಿಸ್ತೂಲು ಪತ್ತೆಯಾಗಿದ್ದು, ಇದನ್ನು ಗಮನಿಸಿದರೆ, ಆತನೇ ಮೊದಲು ಯುವತಿಯ ಮೇಲೆ ಗುಂಡು ಹಾರಿಸಿ, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಮೃತರನ್ನು ದೆಹಲಿಯ ತ್ರಿಲೋಕ್‌ಪುರಿ ನಿವಾಸಿ ಸುಮಿತ್ (32) ಹಾಗೂ ನೋಯ್ಡಾ ಸೆಕ್ಟರ್ 101ರ ಸಾಲಾರ್‌ಪುರ ನಿವಾಸಿ ರೇಖಾ (26) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಇಬ್ಬರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.

​ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ತಂಡ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಮೃತದೇಹಗಳನ್ನು ಪಂಚನಾಮೆ ಪ್ರಕ್ರಿಯೆ ಮುಗಿಸಿದ ನಂತರ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸಾವಿಗೆ ನಿಖರ ಕಾರಣ ಮತ್ತು ಘಟನೆಯ ಹಿನ್ನೆಲೆ ತಿಳಿಯಲು ತನಿಖೆ ಮುಂದುವರಿದಿದೆ. ​ಪ್ರಸ್ತುತ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಹಜ ಸ್ಥಿತಿಯಲ್ಲಿದೆ. ಮೃತರಿಬ್ಬರ ನಡುವಿನ ಸಂಬಂಧ ಹಾಗೂ ಘಟನೆಗೆ ಕಾರಣವಾದ ಅಂಶಗಳ ಕುರಿತು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...