ಗರ್ಭಿಣಿಯನ್ನು ದಾಖಲಿಸಿಕೊಳ್ಳಲು 2 ಬಾರಿ ಆಸ್ಪತ್ರೆ ಸಿಬ್ಬಂದಿ ನಕಾರ; ಕೈಗಾಡಿಯಲ್ಲೇ ಹೆರಿಗೆ – ಮಗು ಸಾವು

Date:

ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ನಿರಾಕರಿಸಿದ್ದು, ಮಹಿಳೆಯು ಕೈಗಾಡಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಸೂಕ್ತ ರೀತಿಯಲ್ಲಿ ಹೆರಿಗೆಯಾಗದ ಪರಿಣಾಮ ಮಗು ಸಾವನ್ನಪ್ಪಿದೆ. ದುರ್ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ನಡೆದಿದೆ.

ರತ್ಲಾಮ್ ಜಿಲ್ಲೆಯ ಸೈಲಾನಾದಲ್ಲಿ ಘಟನೆ ನಡೆದಿದೆ. ಮಹಿಳೆಯನ್ನು ಹೆರಿಗೆಗಾಗಿ ದಾಖಲಿಸಲು ಆಕೆಯ ಪತಿ ಎರಡು ಬಾರಿ ಸಮುದಾಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ. ಆದರೆ, ಎರಡು ಬಾರಿಯೂ ಆಕೆಯನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಯ ಸಿಬ್ಬಂದಿ ನಿರಾಕರಿಸಿದ್ದಾರೆ. ಹೆರಿಗೆಗೆ ಇನ್ನೂ ಸಮಯವಾಗಿಲ್ಲವೆಂದು ಆಕೆಯನ್ನು ವಾಪಸ್‌ ಕಳಿಸಿದ್ದಾರೆ. ಪರಿಣಾಮ, ಮಹಿಳೆಗೆ ರಸ್ತೆಯಲ್ಲೇ ಕೈಗಾಡಿ ಮೇಲೆ ಹೆರಿಗೆಯಾಗಿದೆ. ಮಗು ಸಾವನ್ನಪ್ಪಿದೆ.

ಘಟನೆಗೆ ಸಂಬಂಧಿಸಿದ ಸಿಸಿ ಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಬೆಳಕಿಗೆ ಬಂದ ಬಳಿಕ ಸೈಲಾನಾ ಬ್ಲಾಕ್‌ ವೈದ್ಯಕೀಯ ಅಧಿಕಾರಿಗೆ (ಬಿಡಿಒ) ಜಿಲ್ಲಾಡಳಿತ ಶೋಕಾಸ್ ನೋಟಿಸ್ ನೀಡಿದೆ. ಶುಶ್ರೂಷಕಿ ಚೇತನಾ ಚಾರೆಲ್ ಮತ್ತು ಗಾಯತ್ರಿ ಪಾಟೀದಾರ್‌ ಎಂಬವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂಲಗಳ ಪ್ರಕಾರ, ಸೈಲಾನಾ ನಿವಾಸಿ ಕೃಷ್ಣ ಗ್ವಾಲಾ ಅವರು ತಮ್ಮ ಪತ್ನಿ ನೀತು ಅವರನ್ನು ಹೆರಿಗೆಗಾಗಿ ಮಾರ್ಚ್‌ 23ರ ರಾತ್ರಿ ಆರೋಗ್ಯಕ್ಕೆ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದರು. ಆದರೆ, ಶುಶ್ರೂಷಕಿ ಚೇತನಾ, ‘ಹೆರಿಗೆಗೆ ಇನ್ನೂ ಎರಡು/ಮೂರು ದಿನ ಬಾಕಿ ಇದೆ. ಈಗಲೇ ಆಕೆಯನ್ನು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಹೇಳಿ ವಾಪಸ್ ಕಳಿಸಿದ್ದಾರೆ. ಮರುದಿನ (ಮಾರ್ಚ್‌ 24) ಮುಂಜಾನೆಯೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆಯನ್ನು ಕೃಷ್ಣ ಅವರನ್ನು ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆಗ, ಕರ್ತವ್ಯದಲ್ಲಿದ್ದ ಶುಶ್ರೂಷಕಿ ಗಾಯತ್ರಿ ಕೂಡ ಅವರನ್ನು ವಾಪಸ್‌ ಕಳಿಸಿದ್ದಾರೆ.

ಮನೆಗೆ ಮರಳಿದ ಬಳಿಕ, ಹೆರಿಗೆ ನೋವು ಹೆಚ್ಚಾಗಿದೆ. ನೀತು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ವಾಹನಗಳು ಲಭ್ಯವಿಲ್ಲದೆ, ಆಕೆಯನ್ನು ಕೃಷ್ಣ ಅವರು ಕೈಗಾಡಿಯಲ್ಲಿ ಕೂರಿಸಿಕೊಂಡು ಆಸ್ಪತ್ರೆಯತ್ತ ಧಾವಿಸಿದ್ದಾರೆ. ಆದರೆ, ಆಸ್ಪತ್ರೆಗೆ ಬರುವುದಕ್ಕೂ ಮುನ್ನವೇ ಹೆರಿಗೆಯಾಗಿದ್ದು, ಶಿಶುವಿನ ಕಾಲುಗಳು ಮಾತ್ರ ಹೊರಬಂದಿದ್ದವು, ತಲೆ ಗರ್ಭದೊಳಗೇ ಇತ್ತು ಎಂದು ಹೇಳಲಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ಶುಶ್ರೂಷಕಿ ಹೆರಿಗೆ ಮಾಡಿಸಿದ್ದು, ಶಿಶು ಗರ್ಭದಲ್ಲೇ ಮೃತಪಟ್ಟಿತ್ತು ಎಂದು ವರದಿಯಾಗಿದೆ.

ಸಂತ್ರಸ್ತ ದಂಪತಿಗಳು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಕರ್ತವ್ಯಲೋಪ ಎಸಗಿದ ಶುಶ್ರೂಷಕಿಯನ್ನು ಅಮಾನತು ಮಾಡಿದ್ದಾರೆ.

https://twitter.com/i/status/1905908964761739395

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...