ಅತ್ಯಾಚಾರ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುವಂತಿಲ್ಲ​

Date:

ಅತ್ಯಾಚಾರ, ಆ್ಯಸಿಡ್ ದಾಳಿ ಮತ್ತು ಲೈಂಗಿಕ ಕಿರುಕಿಳದಂತಹ ದೌರ್ಜನ್ಯಗಳಿಗೆ ಒಳಗಾದ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಯಾವುದೇ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳು ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಆದೇಶಿಸಿದೆ.

ದೆಹಲಿಯಲ್ಲಿ ಅಪ್ತಾಪ್ತ ಬಾಲಕಿಯ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿದ್ದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ ನಡೆಸಿವೆ. ಈ ವೇಳೆ, ಸಂತ್ರಸ್ತ ಬಾಲಕಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸಿವೆ ಎಂಬ ವಿಚಾರವನ್ನೂ ಹೈಕೋರ್ಟ್‌ ಗಮನಿಸಿದೆ. ಈ ಹಿನ್ನೆಲೆಯಲ್ಲಿ, “ಅತ್ಯಾಚಾರ, ಆ್ಯಸಿಡ್ ದಾಳಿ ಹಾಗೂ ಇತರ ಗಂಭೀರ ಸ್ವರೂಪ ದೌರ್ಜನ್ಯಗಳಿಗೆ ಒಳಗಾದ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಆರೈಕೆ ಮತ್ತು ಚಿಕಿತ್ಸೆಯನ್ನು ಒದಗಿಸುವುದು ಎಲ್ಲ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕ್ಲಿನಿಕ್‌ಗಳು, ವೈದ್ಯಕೀಯ ಕೇಂದ್ರಗಳ ಕರ್ತವ್ಯವಾಗಿದೆ. ಸಂತ್ರಸ್ತರಿಗೆ ಚಿಕಿತ್ಸೆ ಮತ್ತು ಆರೈಕೆ ಒದಗಿಸಲು ವೈದ್ಯಕೀಯ ಸಂಸ್ಥೆಗಳು ನಿರಾಕರಿಸುವಂತಿಲ್ಲ” ಎಂದು ನ್ಯಾಯಾಲಯ ಹೇಳಿದೆ.

“ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಸಂತ್ರಸ್ತೆಯರಿಗೆ ಗುರುತಿನ ಚೀಟಿ ನೀಡುವಂತೆ ವೈದ್ಯಕೀಯ ಸಂಸ್ಥೆಗಳು ಒತ್ತಾಯಿಸಬಾರದು. ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಿಗೆ ಚಿಕಿತ್ಸೆ ನೀಡಲು ನಿರಾಕರಿಸುವುದು ಅಪರಾಧ. ಒಂದು ವೇಳೆ, ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿ ನಿರಾಕರಿಸಿದರೆ, ಅಂತವರಿಗೆ ದಂಡ ವಿಧಿಸಬಹುದು” ಎಂದು ದೆಹಲಿ ಹೈಕೋರ್ಟ್‌ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...