ದೆಹಲಿ, ಉತ್ತರ ಭಾರತದಲ್ಲಿ ಭೂಕಂಪ; ಮನೆಯಿಂದ ಓಡಿಬಂದ ಜನ

Date:

ರಾಷ್ಟ್ರೀಯ ರಾಜಧಾನಿ ನವದೆಹಲಿ ಹಾಗೂ ಉತ್ತರ ಭಾರತದ ಕೆಲವು ಕಡೆ ಇಂದು ಬೆಳಿಗ್ಗೆ 5.36ಕ್ಕೆ ಪ್ರಬಲ ಭೂಕಂಪ ಉಂಟಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ(ಎನ್‌ಸಿಎಸ್) ಪ್ರಕಾರ ಭೂಕಂಪನದ ಕೇಂದ್ರಬಿಂದು ದೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್ ಮಹಾವಿದ್ಯಾಲಯದ ಬಳಿ ಪತ್ತೆಯಾಗಿದೆ.

ಭೂಕಂಪದಿಂದ ದೆಹಲಿ, ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಗಾಜಿಯಾಬಾದ್‌ನಲ್ಲಿರುವ ಹಲವಾರು ಬಹುಮಹಡಿ ಕಟ್ಟಡಗಳ ನಿವಾಸಿಗಳು ಆತಂಕದಿಂದ ಹೊರಗೆ ಓಡಿ ಬಂದಿದ್ದಾರೆ. ಬಿಹಾರದ ಕೆಲವು ಕಡೆಗಳಲ್ಲಿ ಭೂಕಂಪನ ಸಂಭವಿಸಿದೆ.

ಗಾಜಿಯಾಬಾದ್‌ನ ನಿವಾಸಿಯೊಬ್ಬರು ಈ ರೀತಿಯ ಅನುಭವವನ್ನು ನನ್ನ ಜೀವಮಾನದಲ್ಲಿ ಅನುಭವಿಸಿರಲಿಲ್ಲ ಎಂದು ಆತಂಕದಿಂದ ತಿಳಿಸಿದ್ದಾರೆ. ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕರು ಭೂಕಂಪನ ಉಂಟಾದಾಗ ಗಾಬರಿಗೊಂಡು ಎಲ್ಲರೂ ಅಲ್ಲಿಂದ ಹೊರಗೆ ಓಡಿಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಆದರೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. 5 ಕಿಲೋಮೀಟ‌ರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಕೂಡ ದೆಹಲಿಯ ನಾಗರಿಕರಿಗೆ ಸುರಕ್ಷತೆಯಿಂದಿರಲು ಮನವಿ ಮಾಡಿದ್ದಾರೆ. ದೆಹಲಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ.ಪ್ರತಿಯೊಬ್ಬರು ಶಾಂತರೀತಿಯಲ್ಲಿ ಇದ್ದು, ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಮುಂದಿನ ಸಂಭವನೀಯ ತೊಂದರೆಗಳ ಬಗ್ಗೆ ಎಚ್ಚರವಾಗಿರಬೇಕು. ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ ಎಂದು ತಿಳಿಸಿದ್ದಾರೆ.

ದೆಹಲಿ ಪೊಲೀಸರು ನಾಗರಿಕರಿಗೆ ಸಹಾಯಕ್ಕಾಗಿ ತುರ್ತು ಸಹಾಯವಾಣಿ ಕರೆ 112 ಕ್ಕೆ ಕರೆ ಮಾಡಬೇಕೆಂದು ತಿಳಿಸಿದ್ದಾರೆ.

https://twitter.com/PTI_News/status/1891285445834617236?ref_src=twsrc%5Etfw%7Ctwcamp%5Etweetembed%7Ctwterm%5E1891285445834617236%7Ctwgr%5E7b04b2554cca11268026bb2402ae93c6a9e2e359%7Ctwcon%5Es1_&ref_url=https%3A%2F%2Ftimesofindia.indiatimes.com%2Findia%2Fstrong-earthquake-tremors-felt-in-delhi-ncr-northern-india%2Farticleshow%2F118314502.cms&mx=2
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...