ಹರಿಯಾಣ | ಮೂವರು ಪಕ್ಷೇತರರ ರಾಜೀನಾಮೆ ನಂತರ ಸರ್ಕಾರದ ಸಂಖ್ಯಾಬಲ ಹೇಗಿದೆ?

Date:

ಹರಿಯಾಣದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆದ ನಂತರ  ಬಿಜೆಪಿ ಸರ್ಕಾರದಲ್ಲಿ ಬಹುಮತ ಸಂಖ್ಯಾಬಲ ಕುಸಿತಗೊಂಡು ಅಲ್ಪಮತಕ್ಕೆ ಇಳಿದಿದೆ. ಮುಖ್ಯಮಂತ್ರಿ ನಯಾನಿ ಸಿಂಗ್‌ ಸೈನಿ ಸರ್ಕಾರಕ್ಕೆ ಆತಂಕ ಎದುರಾದ ಕಾರಣ ವಿಪಕ್ಷ ಕಾಂಗ್ರೆಸ್ ಪರಿಸ್ಥಿತಿ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ.

ಬಿಜೆಪಿಯ ಮಾಜಿ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಕಟ್ಟರ್ ಕೆಲವು ತಿಂಗಳ ಹಿಂದೆ ರಾಜೀನಾಮೆ ನೀಡಿದ ಪರಿಣಾಮ ನೂತನ ಮುಖ್ಯಮಂತ್ರಿಯಾಗಿ ನಯಾನಿ ಸಿಂಗ್‌ ಸೈನಿ ಅಧಿಕಾರ ಸ್ವೀಕರಿಸಿದ್ದಾರೆ. ನಿನ್ನೆ ನಡೆದ ಬೆಳವಣಿಗೆಯಲ್ಲಿ ಮೂವರು ಪಕ್ಷೇತರ ಶಾಸಕರಾದ ಸೋಬೀರ್‌ ಸಂಗ್ವಾನ್, ರಣಧೀರ್ ಸಿಂಗ್‌ ಗೊಲ್ಲೇನ್ ಹಾಗೂ ಧರ್ಮಪಾಲ್ ಗೊಡೇರ್ ಬಿಜೆಪಿ ಸರ್ಕಾರದಿಂದ ತಮ್ಮ ಬೆಂಬಲ ವಾಪಸ್‌ ತೆಗೆದುಕೊಳ್ಳುವುದಾಗಿ ಘೋಷಿಸಿದರು.

ಈ ಮೂವರು ಶಾಸಕರು ವಿಪಕ್ಷ ನಾಯಕ ಭೂಪೇಂದರ್ ಸಿಂಗ್ ಹೂಡ ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಉದಯ್‌ ಭಾನ್‌ ಅವರೊಂದಿಗಿದ್ದು, ಕೈ ಪಕ್ಷಕ್ಕೆ ನಿಷ್ಠೆ ತೋರಿದ್ದಾರೆ. ಪಕ್ಷೇತರರು ಸರ್ಕಾರಕ್ಕೆ ಬೆಂಬಲ ವಾಪಸ್‌ ಪಡೆದ ನಂತರ ಮಾತನಾಡಿದ ಭೂಪೇಂದರ್‌ ಸಿಂಗ್‌ ಹೂಡ, ಬಹುಮತ ಕಳೆದುಕೊಂಡಿರುವ ಬಿಜೆಪಿ ಸರ್ಕಾರ ತಕ್ಷಣ ರಾಜೀನಾಮೆ ನೀಡಬೇಕು. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ ಚುನಾವಣೆ ನಡೆಸಬೇಕು. ಇದು ಜನವಿರೋಧಿ ಸರ್ಕಾರ” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್: ಅಮೆರಿಕ ತಂಡದಲ್ಲಿ ಕನ್ನಡಿಗ ಕ್ರಿಕೆಟರ್‌ಗೆ ಸ್ಥಾನ

ಈ ನಡುವೆ ಬಿಜೆಪಿ ಮಾಜಿ ಮೈತ್ರಿ ಪಕ್ಷವಾಗಿರುವ ಜನನಾಯಕ ಜನತಾ ಪಕ್ಷ(ಜೆಜೆಪಿ) ತಮ್ಮ ಬೆಂಬಲವನ್ನು ಕಾಂಗ್ರೆಸ್‌ಗೆ ನೀಡುವುದಾಗಿ ತಿಳಿಸಿದೆ. ಜೆಜೆಪಿ ನಾಯಕ ಹಾಗೂ ಮಾಜಿ ಡಿಸಿಎಂ ದುಷ್ಯಂತ್‌ ಚೌತಾಲಾ ಅವರು ಸರ್ಕಾರ ಜನರ ನಂಬಿಕೆ ಕಳೆದುಕೊಂಡಿದೆ ಎಂದು ತಿಳಿಸಿದ್ದಾರೆ. ತಾವು ನಮ್ಮ ಬೆಂಬಲವನ್ನು ಸರ್ಕಾರದಿಂದ ವಾಪಸ್‌ ಪಡೆದಿದ್ದು, ಕಾಂಗ್ರೆಸ್ ತನ್ನ ಮುಂದಿನ ನಡೆಯನ್ನು ನಿರ್ಧರಿಸಬಹುದು ಎಂದು ಹೇಳಿದ್ದಾರೆ.

ಸರ್ಕಾರದ ಸಂಖ್ಯಾಬಲ ಎಷ್ಟಿದೆ

ಒಟ್ಟು 90 ಸದಸ್ಯರ ಹರಿಯಾಣ ವಿಧಾನಸಭೆಯಲ್ಲಿ ಪ್ರಸ್ತುತ 88 ಸದಸ್ಯರಿದ್ದಾರೆ. ಬಹುಮತ ಸಂಖ್ಯೆಗೆ 45 ಸದಸ್ಯರ ಬೆಂಬಲ ಬೇಕು. ಆಡಳಿತರೂಢ ಬಿಜೆಪಿ ಸರ್ಕಾರ 40 ಬಿಜೆಪಿ ಶಾಸಕರೊಂದಿಗೆ 6 ಪಕ್ಷೇತರ ಶಾಸಕರಿದ್ದರು. ಈಗ ಮೂವರು ಪಕ್ಷೇತರ ಶಾಸಕರು ರಾಜೀನಾಮೆ ನೀಡಿರುವುದರಿಂದ ಸರ್ಕಾರದ ಸಂಖ್ಯಾಬಲ 43ಕ್ಕೆ ಕುಸಿದಿದೆ. ವಿಪಕ್ಷ ಕಾಂಗ್ರೆಸ್‌ನ 30 ಶಾಸಕರು ಹಾಗೂ ಮೂವರು ಪಕ್ಷೇತರ ಶಾಸಕರ ಬೆಂಬಲ ಹೊಂದಿದೆ.

ಬಿಜೆಪಿ ಮೈತ್ರಿಯಿಂದ ಹೊರ ಬಂದು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇವೆ ಎಂದಿರುವ ಜೆಜೆಪಿ 10 ಶಾಸಕರನ್ನು ಹೊಂದಿದೆ. ಈ ಸಂಖ್ಯಾಬಲವನ್ನು ಕೂಡಿದರೆ ಒಟ್ಟು  ಕಾಂಗ್ರೆಸ್‌ ಬೆಂಬಲಿತರ ಸಂಖ್ಯೆ 43 ಆಗಲಿದೆ. ಮ್ಯಾಜಿಕ್‌ ಸಂಖ್ಯೆ ಪಡೆಯಲು ಇವರಿಗೂ ಇಬ್ಬರು ಶಾಸಕರ ಕೊರತೆ ಎದುರಾಗಲಿದೆ. ಇನ್ನುಳಿದಂತೆ ಐಎನ್‌ಎಲ್‌ಡಿ ಹಾಗೂ ಹೆಚ್‌ಎಲ್‌ಪಿ ಪಕ್ಷದ ಇಬ್ಬರು ಶಾಸಕರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...