‘ಅಪರಾಧಿಯ ಆಸ್ತಿಯನ್ನು ಹೇಗೆ ಕೆಡವುತ್ತೀರಿ’; ಸರ್ಕಾರಗಳ ಬುಲ್ಡೋಜರ್ ನ್ಯಾಯದ ವಿರುದ್ಧ ಸುಪ್ರೀಂ ಕಿಡಿ

Date:

ನಾನಾ ಪ್ರಕರಣಗಳಲ್ಲಿ ಅಪರಾಧಿಗಳ ಮನೆ, ನಿವಾಸ, ಆಸ್ತಿಗಳನ್ನು ಕೆಡವುವ ‘ಬುಲ್ಡೋಜರ್ ನ್ಯಾಯ’ದ ವಿರುದ್ಧ ಸುಪ್ರೀಂ ಕೋರ್ಟ್‌ ಕಿಡಿಕಾರಿದೆ. “ಅಪರಾಧ ಪ್ರಕರಣಗಳಲ್ಲಿ ಆರೋಪಿಯು ಅಪರಾಧಿಯೇ ಆಗಿದ್ದರೂ, ಆತನ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ” ಎಂದು ಹೇಳಿದ್ದು, ಸರ್ಕಾರಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಕೆಲವು ಗಂಭೀರ ಪ್ರಕರಣಗಳಲ್ಲಿ ಅಪರಾಧಿಗಳ ಮನೆಗಳನ್ನು ಅಧಿಕಾರಿಗಳು ಕೆಡವುವುದು ದೇಶಾದ್ಯಂತ ವರದಿಯಾಗುತ್ತಿವೆ. ಅದರಲ್ಲೂ ಮಧ್ಯಪ್ರದೇಶದಲ್ಲಂತೂ ಅಪರಾಧಿಗಳ ನಿವಾಸಗಳನ್ನು ಧ್ವಂಸಗೊಳಿಸುವುದು ಎಗ್ಗಿಲ್ಲದೆ ನಡೆಯುತ್ತಿದೆ. ಇಂತಹ ಬುಲ್ಡೋಜರ್ ಕ್ರಮವನ್ನು ತಡೆಯಬೇಕೆಂದು ಹಲವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರಿದ್ದ ಪೀಠವು ಅರ್ಜಿಗಳ ವಿಚಾರಣೆ ನಡೆಸಿದೆ. ಸರ್ಕಾರಗಳು ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

“ವ್ಯಕ್ತಿಯು ಅಪರಾಧಿಯೆಂದು ಘೋಷಿಸಲ್ಪಟ್ಟರೂ, ಆತನ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿ ಆರೋಪಿಯಾಗಿರುವ ಮಾತ್ರಕ್ಕೆ ಅವರ ಮನೆಯನ್ನು ಹೇಗೆ ಕೆಡವುತ್ತೀರಿ” ಎಂದು ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ. ಕಾನೂನಿನಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಅನುಸರಿಸದೆ ಅಪರಾಧಿಗಳ ಮನೆಗಳನ್ನು ಕೆಡವಲು ಸಾಧ್ಯವಿಲ್ಲ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಓರ್ವ ವ್ಯಕ್ತಿ ದಂಗೆಕೋರ ಆಗಿರಬಹುದು. ಆ ಕಾರಣಕ್ಕೆ ಆತನ ತಂದೆಯ ಮನೆ ಕೆಡವಿದರೆ? ಅವರು ಎಲ್ಲಿ ಹೋಗಬೇಕು. ಏನು ಮಾಡಬೇಕು. ಇದು ಸರಿಯಾದ ನಡೆಯಲ್ಲ. ನಾವು ಪ್ಯಾನ್-ಇಂಡಿಯಾ ಆಧಾರದ ಮೇಲೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಲು ಪ್ರಸ್ತಾಪಿಸುತ್ತೇವೆ” ಎಂದು ಪೀಠವು ಹೇಳಿದೆ.

“ಅಪರಾಧಿ ಅಥವಾ ಆರೋಪಿಗಳ ಕಟ್ಟಡವು ಕಾನೂನುಬಾಹಿರವಾಗಿದ್ದರೆ ಮಾತ್ರ ಅಂತಹ ಮನೆಗಳನ್ನು ನೆಲಸಮವನ್ನು ಮಾಡಬಹುದು. ಅಂತಹ ಪ್ರಕರಣಗಳಲ್ಲಿಯೂ ಮೊದಲ ನೋಟಿಸ್ ನೀಡಿ, ಉತ್ತರಿಸಲು ಸಮಯ ಕೊಡಬೇಕು. ನಂತರ ಕ್ರಮ ಕೈಗೊಳ್ಳಬೇಕು” ಎಂದು ಪೀಠ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...