ದೇಶದ ಜನತೆಗೆ ಬೆಳ್ಳಂಬೆಳಗ್ಗೆಯೇ ಆಘಾತ: ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆ

Date:

ದೇಶದ ಜನತೆಗೆ ಸೆಪ್ಟೆಂಬರ್‌ ತಿಂಗಳ ಮೊದಲ ದಿನವೇ ಭರ್ಜರಿ ಶಾಕ್ ತಟ್ಟಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ಭಾರಿ ಏರಿಕೆಯಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು ಸಿಲಿಂಡರ್‌ ಬೆಲೆ ಏರಿಕೆ ಮಾಡಲು ನಿರ್ಧರಿಸಿರುವುದರಿಂದ ಜನರ ಜೇಬಿಗೆ ಕತ್ತರಿ ಬೀಳಲಿದೆ.

ತೈಲ ಮಾರುಕಟ್ಟೆ ಕಂಪನಿಗಳು ಬೆಲೆ ಏರಿಕೆಯ ಬಗ್ಗೆ ಘೋಷಣೆ ಮಾಡಿದ ನಂತರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಶನಿವಾರದಿಂದ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ದರವನ್ನು ಸೆಪ್ಟೆಂಬರ್ 1 ರಿಂದ 39 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ಚಿಲ್ಲರೆ ಬೆಲೆಯನ್ನು 1,691.50 ರೂ.ಗೆ ಜಾರಿಗೊಳಿಸಲಾಗಿದೆ. ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.

ಆಗಸ್ಟ್ 1 ರಂದು, ತೈಲ ಕಂಪನಿಗಳು ನವದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಂತಹ ಮೆಟ್ರೋ ನಗರಗಳನ್ನು ಒಳಗೊಂಡಂತೆ ದೇಶಾದ್ಯಂತ 19 ಕೆಜಿ ಸಿಲಿಂಡರ್‌ಗೆ ರೂ 8.50 ಹೆಚ್ಚಳ ಮಾಡಿ ಘೋಷಿಸಿದ್ದವು. ಆಗಸ್ಟ್‌ನಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ 8.50 ರೂಪಾಯಿ ಏರಿಕೆ ಮಾಡಲಾಗಿತ್ತು. ಇತ್ತ ಇಂದಿನಿಂದ ಚೆನ್ನೈನಲ್ಲಿ ವಾಣಿಜ್ಯ ಬಳಕೆಗಾಗಿ 19 ಕೆಜಿ ಅಡುಗೆ ಅನಿಲ ಸಿಲಿಂಡರ್ ಅನ್ನು 1,855 ರೂ.ಗೆ ಮಾರಾಟ ಮಾಡುವುದಾಗಿ ಘೋಷಿಸಿವೆ. ಅದೇ ರೀತಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಕೋಲ್ಕತ್ತಾದಲ್ಲಿ 1,756 ರೂ. ಮತ್ತು ಮುಂಬೈನಲ್ಲಿ 1,598 ರೂ.ಗೆ ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹರಿಯಾಣ, ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಬದಲು

ಬೆಂಗಳೂರಿನಲ್ಲಿಯೂ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ 38 ರೂಪಾಯಿ ಏರಿಕೆಯಾಗಿದ್ದು, ಇಂದಿನಿಂದ 1769.50 ರೂಪಾಯಿಗೆ ಸಿಲಿಂಡರ್ ಸಿಗಲಿದೆ. ಅದೇ ಸಮಯದಲ್ಲಿ, ದೇಶೀಯ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಹಾಗಾಗಿ ಗೃಹಬಳಕೆಯ ಸಿಲಿಂಡರ್ ಬೆಲೆ ರೂ.805.50 ಆಗಿ ಮುಂದುವರಿದಿದೆ.

ಎಲ್‌ಪಿಜಿ ಬೆಲೆಗಳಲ್ಲಿನ ಹಠಾತ್ ಹೆಚ್ಚಳವು ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಿಂದ ಹಿಡಿದು ಸಣ್ಣ-ಪ್ರಮಾಣದ ಕೈಗಾರಿಕೆಗಳವರೆಗೆ ವಿವಿಧ ವಲಯಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಬಹುದು. ಯಾಕೆಂದರೆ ಗ್ಯಾಸ್ ಬೆಲೆ ಏರಿಕೆಯಾದಂತೆ ಹೋಟೆಲ್‌ಗಳು ತಿಂಡಿಗಳ ಬೆಲೆಯನ್ನೂ ಏರಿಸುತ್ತವೆ. ಹೀಗಾಗಿ ಈಗಾಗಲೇ ದಿನನಿತ್ಯದ ಬಹುತೇಕ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗಂತೂ ಈ ಬೆಲೆ ಏರಿಕೆಯು ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...