ಹೈದರಾಬಾದ್‌ ಕ್ರಿಕೆಟ್ ಸಂಸ್ಥೆ ಭ್ರಷ್ಟಾಚಾರ ಹಗರಣ: ಮಾಜಿ ಕ್ರಿಕೆಟಿಗ ಮೊಹಮ್ಮದ್‌ ಅಜರುದ್ದೀನ್‌ಗೆ ಇ.ಡಿ ಸಮನ್ಸ್

Date:

ಹೈದರಾಬಾದ್‌ ಕ್ರಿಕೆಟ್‌ ಸಂಸ್ಥೆಯಲ್ಲಿನ(ಹೆಚ್‌ಸಿಎ) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ) ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದ ಮೊಹಮ್ಮದ್ ಅಜರುದ್ದೀನ್ ಅವರಿಗೆ ಸಮನ್ಸ್‌ ನೀಡಿದ್ದು, ತನಿಖೆಗೆ ಇಂದು ಹಾಜರಾಗಬೇಕೆಂದು ತಿಳಿಸಲಾಗಿದೆ.

ಅಜರುದ್ದೀನ್‌ ಈ ಮೊದಲು ಹೆಚ್‌ಸಿಎನಲ್ಲಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಹಣ ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಇ.ಡಿ ಅಜರುದ್ದೀನ್‌ ಅವರಿಗೆ ನೀಡುತ್ತಿರುವ ಮೊದಲ ಸಮನ್ಸ್‌ ಆಗಿದೆ.

ಪ್ರಕರಣವು 20 ಕೋಟಿ ರೂ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ್ದಾಗಿದೆ. ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರಿಕೆಟ್‌ ಕ್ರೀಡಾಂಗಣದ ಅಭಿವೃದ್ದಿಗಾಗಿ ಖರೀದಿಸಲಾಗಿದ್ದ ಡೀಸೆಲ್ ಜನರೇಟರ್‌ಗಳು, ಅಗ್ನಿ ಶಾಮಕ ವ್ಯವಸ್ಥೆಗಳು ಹಾಗೂ ಮತ್ತಿತ್ತರ ಸಾಮಗ್ರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೊದಲು ಮೊಹಮ್ಮದ್ ಅಜರುದ್ದೀನ್ ಮತ್ತು ಹೈದರಾಬಾದ್ ಕ್ರಿಕೆಟ್ ಸಂಸ್ಥೆಯ (ಎಚ್‌ಸಿಎ) ಕೆಲ ಮಾಜಿ ಪದಾಧಿಕಾರಿಗಳ ವಿರುದ್ಧ ಹಣವನ್ನು ದುರುಪಯೋಗಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಯಾಣದಲ್ಲಿ ಆಡಳಿತ ವಿರೋಧಿ ಗಾಳಿ- ಇಳಿಜಾರಿನಲ್ಲಿ ಬಿಜೆಪಿ

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುನೀಲ್ ಕಾಂತೆ ಬೋಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಹೈದರಾಬಾದ್​ನ ಉಪ್ಪಳ ಪೊಲೀಸ್ ಠಾಣೆಯಲ್ಲಿ ಎಚ್‌ಸಿಎ ಮಾಜಿ ಅಧ್ಯಕ್ಷ ಅಜರುದ್ದೀನ್ ಮತ್ತು ಇತರ ಮಾಜಿ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಮಾರ್ಚ್ 3, 2021 ರಂದು ನಡೆದ 9 ನೇ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಸಂಘದ ಆಗಿನ ಅಧ್ಯಕ್ಷ ಮೊಹಮ್ಮದ್ ಅಜರುದ್ದೀನ್ ಅವರು ಅಗ್ನಿಶಾಮಕ ಉಪಕರಣಗಳ ಬಗ್ಗೆ ಚರ್ಚೆ ಮಾಡಿದ್ದರು. ಆದರೆ, ನಂತರ ಯಾವುದೇ ಕಾರಣ ನೀಡದೆ ಯಾವುದೇ ಬಿಡ್‌ದಾರರಿಗೆ ಟೆಂಡರ್‌ ಹಂಚಿಕೆ ಮಾಡಿರಲಿಲ್ಲ. ನಂತರ, ಅದೇ ಕೆಲಸಕ್ಕಾಗಿ ಎಚ್‌ಸಿಎ ಎರಡನೇ ಟೆಂಡರ್ ಅನ್ನು ಕರೆಯಿತು. ಎಚ್‌ಸಿಎಗೆ ಎಷ್ಟು ನಷ್ಟವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ವಿವರವಾದ ತನಿಖೆಯ ಅಗತ್ಯವಿದೆ ಎಂದು ದೂರುದಾರರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...