ದೇಶಕ್ಕೆ ತಂದೆಯಿಲ್ಲ, ಆದರೆ ಮಕ್ಕಳಿದ್ದಾರೆ: ಕಂಗನಾ ಮತ್ತೊಂದು ವಿವಾದ

Date:

ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ನಟಿ-ರಾಜಕಾರಣಿ ಕಂಗನಾ ರನೌತ್ ವಿವಾದಕ್ಕೆ ನಾಂದಿ ಹಾಡಿದ್ದಾರೆ.

‘ದೇಶಕ್ಕೆ ತಂದೆ ಇಲ್ಲ. ಅದಕ್ಕೆ ಮಕ್ಕಳಿದ್ದಾರೆ. ಭಾರತ ಮಾತೆಯ ಈ ಮಕ್ಕಳು ಧನ್ಯರು ಎಂದು ಕಂಗನಾ ರನೌತ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದರು. ಶಾಸ್ತ್ರಿ ಅವರ 120ನೇ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪೋಸ್ಟ್‌ನಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸ್ಥಾನಮಾನವನ್ನು ಕಾಂಗ್ರೆಸ್ ಕಡಿಮೆ ಮಾಡಿದೆ ಎಂದು ಹೇಳಿದ್ದಾರೆ.

ಮತ್ತೊಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ದೇಶದಲ್ಲಿ ಗಾಂಧಿಯವರ ಸ್ವಚ್ಛತೆಯ ಪರಂಪರೆಯನ್ನು ಮಂದುವರಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. ಬಿಜೆಪಿ ಸಂಸದೆ ಹೇಳಿಕೆಯನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಯಾಣದಲ್ಲಿ ಆಡಳಿತ ವಿರೋಧಿ ಗಾಳಿ- ಇಳಿಜಾರಿನಲ್ಲಿ ಬಿಜೆಪಿ

ಬಾಲಿವುಡ್‌ನಿಂದ ರಾಜಕೀಯಕ್ಕೆ ಪಾದಾರ್ಪಣೆ ಮಾಡಿರುವ ಸಂಸದೆ ಕಂಗನಾ ರನೌತ್‌ ತಮ್ಮ ವಿವಾದಿತ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದಾರೆ. 2020ರಲ್ಲಿ ರೈತರ ಆಂದೋಲನದ ನಂತರ ಹಿಂತೆಗೆದುಕೊಂಡ 3 ಕೃಷಿ ಕಾನೂನುಗಳನ್ನು ಮತ್ತೆ ಜಾರಿಗೆ ತರುವುದಾಗಿ ಹೇಳಿದ್ದರು. ಅಲ್ಲದೆ ಪ್ರತಿಭಟನೆಯ ಸ್ಥಳದಲ್ಲಿ ಮೃತದೇಹಗಳನ್ನು ನೇತುಹಾಕಲಾಗುತ್ತಿದೆ. ಅತ್ಯಾಚಾರದ ಘಟನೆಗಳು ನಡೆಯುತ್ತಿವೆ ಎಂದು ವಿವಾದಿತ ಹೇಳಿಕೆಗಳನ್ನು ಕಂಗನಾ ಹೇಳಿದ್ದರು.

ಬಿಜೆಪಿ ಸಂಸದೆ ಕಂಗನಾ ಅವರು ಮಹಾತ್ಮಾ ಗಾಂಧಿಯವರ ಜನ್ಮದಿನದಂದು ಅಶ್ಲೀಲವಾಗಿ ವ್ಯಂಗ್ಯಮಾಡಿದ್ದಾರೆ. ಗೋಡ್ಸೆ ಆರಾಧಕರು ಬಾಪು ಮತ್ತು ಶಾಸ್ತ್ರಿ ಅವರ ನಡುವೆ ವ್ಯತ್ಯಾಸವನ್ನು ತೋರಿಸುತ್ತಾರೆ. ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಭಕ್ತರನ್ನು ಮನಪೂರ್ವಕವಾಗಿ ಕ್ಷಮಿಸುವರೇ? ಪ್ರತಿಯೊಬ್ಬ ಹುತಾತ್ಮರು ಗೌರವಕ್ಕೆ ಅರ್ಹರು ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...