ಮಾನವ ಕಳ್ಳಸಾಗಣೆ | 22 ವರ್ಷದ ಬಳಿಕ ಪಾಕ್‌ನಿಂದ ಭಾರತಕ್ಕೆ ಮರಳಿದ ಮಹಿಳೆ

Date:

ಏಜೆಂಟ್‌ವೊಬ್ಬ ನೀಡಿದ್ದ ದುಬೈನಲ್ಲಿ ಉದ್ಯೋಗ ಕೊಡಿಸುವ ಆಮಿಷಕ್ಕೆ ತುತ್ತಾಗಿ, ಮಾನವ ಕಳ್ಳಸಾಗಣೆ ಜಾಲಕ್ಕೆ ಸಿಕ್ಕಿಕೊಂಡಿದ್ದ ಮಹಿಳೆಯೊಬ್ಬರು 22 ವರ್ಷದ ಬಳಿಕ ತನ್ನೂರಿಗೆ ಮರಳಿಸಿದ್ದಾರೆ. ಮಾನವ ಕಳ್ಳಸಾಗಣೆಗೆ ತುತ್ತಾಗಿ ಪಾಕಿಸ್ತಾನದ ಕರಾಚಿಯಲ್ಲಿದ್ದ ಮಹಿಳೆ ಇದೀಗ ಭಾರತಕ್ಕೆ ಮರಳಿದ್ದಾರೆ.

ಭಾರತದ ಮುಂಬೈ ಮೂಲದ ಹಿಮೀದಾ ಬಾನು ಅವರನ್ನು 22 ವರ್ಷಗಳ ಹಿಮದೆ ಮಾನವ ಕಳ್ಳಸಾಗಣೆ ಜಾಲವು ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಕರಾಚಿಗೆ ಕರೆದೊಯ್ಡಿತ್ತು. ಕರಾಚಿಯಲ್ಲಿ 22 ವರ್ಷ ಬದುಕಿನ ಹೋರಾಟ ನಡೆಸಿದ ಮಹಿಳೆ ಇದೀಗ ಲಾಹೋರ್‌ನ ವಾಘಾ ಗಡಿಯ ಮೂಲಕ ಭಾರತಕ್ಕೆ ಮರಳಿ ಬಂದಿದ್ದಾರೆ. ತನ್ನ ಕುಟುಂಬವನ್ನು ಸೇರಿಕೊಂಡಿದ್ದಾರೆ.

ನಾಲ್ಕು ಮಕ್ಕಳ ತಾಯಿಯಾಗಿದ್ದ ಹಮೀದಾ, “ತನ್ನ ಮಕ್ಕಳಿಗೆ ಉತ್ತಮ ಜೀವನವನ್ನು ಒದಗಿಸಬೇಕೆಂದು ವಿದೇಶದಲ್ಲಿ ಉದ್ಯೋಗ ಮಾಡಲು ನಿರ್ಧರಿಸಿದೆ. 2002ರಲ್ಲಿ, ವಿದೇಶಗಳಲ್ಲಿ ಉದ್ಯೋಗ ಕೊಡುವ ಏಜೆಂಜ್‌ ತನಗೆ ದುಬೈನಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, ನನ್ನನ್ನು ಕರಾಚಿಗೆ ಕರೆದೊಯ್ದರು. ಅಲ್ಲಿಯೂ ಯಾವುದೇ ಉದ್ಯೋಗವನ್ನು ಕೊಡಿಸಲಿಲ್ಲ. ಕೆಲ ದಿನಗಳ ಕಾಲ ಬೀದಿಗಳಲ್ಲಿ ವಾಸಿಸಿದ್ದೇನೆ. ಬಳಿಕ, ಸಣ್ಣ ಅಂಗಡಿಯೊಂದನ್ನು ತೆರೆದಿದ್ದೆ” ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಮೀದಾ ಅವರನ್ನು 2022ರಲ್ಲಿ ಯೂಟ್ಯೂಬರ್‌ ವಲ್ಲಿಯುಲ್ಲಾ ಮರೂಫ್ ಎಂಬವರು ಸಂದರ್ಶನ ಮಾಡಿದ್ದರು. ಆಗ ಹಮೀದಾ ತಾವು ಕಳ್ಳಸಾಗಣೆ ಜಾಲಕ್ಕೆ ಸಿಲುಕಿ ಕರಾಚಿಗೆ ಬಂದಿದ್ದಾಗಿ ಹೇಳಿಕೊಂಡಿದ್ದರು. ಆ ಸಂದರ್ಶನದ ವಿಡಿಯೋ ವೈರಲ್ ಆಗಿತ್ತು. ಬಳಿಕ, ಆಕೆಯ ಹಿನ್ನೆಲೆ ಮತ್ತು ಗುರುತನ್ನು ಪರಿಶೀಲಿಸಿದ ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್‌ ಅಧಿಕಾರಿಗಳು ಆಕೆಯ ಕುಟುಂಬಸ್ತರನ್ನು ಸಂಪರ್ಕಿಸಿದ್ದಾರೆ. ಬಳಿಕ, ಅಕೆಯನ್ನು ಭಾರತಕ್ಕೆ ಮರಳಿ ಬರಲು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...