ಡುಮ್ಮ ಎಂದು ಅಪಹಾಸ್ಯ; 20 ಕಿ.ಮೀ ಹಿಂಬಾಲಿಸಿ ಗುಂಡು ಹಾರಿಸಿದ!

Date:

ತನ್ನನ್ನು ಡುಮ್ಮ, ದಪ್ಪಗಿದ್ದೀಯ ಎಂದು ಅಪಹಾಸ್ಯ ಮಾಡಿದ ಕಾರಣಕ್ಕಾಗಿ ಕೋಪಗೊಂಡ ಯುವಕ, ಇಬ್ಬರು ಅತಿಥಿಗಳ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಘಟನೆ ನಡೆದ ಮರುದಿನ ಖಜ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಲ್‌ಘಾಟ್ ಪ್ರದೇಶದ ನಿವಾಸಿ ಅರ್ಜುನ್ ಚೌಹಾಣ್ ಬಂಧಿತ ಆರೋಪಿ. ಈತನ ಜೊತೆ ಆತನ ಸ್ನೇಹಿತನಾದ ಆಸೀಫ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಅರ್ಜುನ್‌ ಇತ್ತೀಚೆಗೆ ತನ್ನ ಚಿಕ್ಕಪ್ಪನೊಂದಿಗೆ ದೇವಸ್ಥಾನವೊಂದರಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ಹೋಗಿದ್ದ. ಈ ವೇಳೆ ಸ್ಥಳೀಯರಾದ ಅನಿಲ್ ಚೌಹಾಣ್ ಮತ್ತು ಶುಭಂ ಚೌಹಾಣ್ ಎಂಬ ಇಬ್ಬರು ಅತಿಥಿಗಳು ಅರ್ಜುನ್ ಚೌಹಾಣ್‌ನನ್ನು ಡುಮ್ಮ, ಬೊಜ್ಜು, ದಪ್ಪಗಿದ್ದೀಯಾ ಅಂತ ಸಿಕ್ಕಾಪಟ್ಟೆ ಅಪಹಾಸ್ಯ ಮಾಡುತ್ತಿದ್ದರು. ಇದರಿಂದ ಕೋಪಗೊಂಡ ಅರ್ಜುನ್‌ ಕಾರ್ಯಕ್ರಮ ಮುಗಿದ ನಂತರ ತನ್ನ ಸ್ನೇಹಿತ ಆಸಿಫ್‌ ಖಾನ್‌ ಜೊತೆಗೆ ಆ ಇಬ್ಬರು ಅತಿಥಿಗಳನ್ನು 20 ಕಿ.ಮೀ ವರೆಗೂ ಹಿಂಬಾಲಿಸಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಮ್ಲಾ ಒಪ್ಪಂದದತ್ತ ಕಣ್ಣು ಹಾಯಿಸಬೇಕಿದೆ ಭಾರತ-ಪಾಕ್

ಗೋರಖ್‌ಪುರದ ತೆನುವಾ ಟೋಲ್ ಪ್ಲಾಜಾ ಬಳಿ ಕಾರು ನಿಲ್ಲಿಸಿದಾಗ ಇಬ್ಬರನ್ನೂ ಹೊರಗೆಳೆದು ಗುಂಡು ಹಾರಿಸಿ ಪರಾರಿಯಾದ ಎಂದು ದಕ್ಷಿಣ ಎಸ್ಪಿ ಜಿತೇಂದ್ರ ಕುಮಾರ್‌ ತಿಳಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಸದ್ಯ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಶುಭಂ ಚೌಹಾಣ್ ಅವರ ತಂದೆಯ ದೂರಿನ ಆಧಾರದ ಮೇಲೆ, ಎಫ್‌ಐಆರ್ ದಾಖಲಿಸಲಾಗಿದೆ. ತನ್ನನ್ನು ಡುಮ್ಮ ಎಂದು ಕರೆದ ಕಾರಣ ಕೊಲ್ಲಲು ನಿರ್ಧರಿಸಿದ್ದೆ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...