ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂಬ ಶಂಕೆ; ನಾಲ್ವರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

Date:

ತನ್ನ ಪತ್ನಿಯು ವಿವಾಹೇತರ ಸಂಬಂಧ ಹೊಂದಿರಬಹುದು ಎಂದು ಅನುಮಾನಗೊಂಡಿದ್ದ ವ್ಯಕ್ತಿಯೊಬ್ಬ ತಮ್ಮ ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ವ್ಯಕ್ತಿ ಮತ್ತು ಮಕ್ಕಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಬಿಹಾರ ಮೂಲದ ಮನೋಜ್ ಮಹಾತೋ ಮತ್ತು ಆತನ ಮಕ್ಕಳು ಎಂದು ಗುರುತಿಸಲಾಗಿದೆ. ಘಟನೆ ದೆಹಲಿಯ ಫರೀದಾಬಾದ್‌ ಪ್ರದೇಶದಲ್ಲಿ ನಡೆದಿದೆ. ದೆಹಲಿಗೆ ತೆರಳುತ್ತಿದ್ದ ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರ ಸಾವನ್ನಪ್ಪಿದ ಸ್ಥಳದಲ್ಲಿ ಆಧಾರ್‌ ಕಾರ್ಡ್‌ ಪತ್ತೆಯಾಗಿದ್ದರಿಂದ ಪೊಲೀಸರು ಅವರ ಗುರುತನ್ನು ಪತ್ತೆ ಹಚ್ಚಿಸಿದ್ದಾರೆ. ಬಳಿಕ, ಮೃತದ ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಕುಟುಂಬಸ್ಥರು ಮೃತದೇಹಗಳನ್ನು ಗುರುತಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನ್ನ ಪತಿ ಮತ್ತು ಮಕ್ಕಳ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ಮನೋಜ್ ಅವರ ಪತ್ನಿ, “ಮಕ್ಕಳನ್ನು ಪಾರ್ಕ್‌ಗೆ ಕರೆದೊಯ್ಯುವುದಾಗಿ ಹೇಳಿ ಮನೋಜ್ ಮನೆಯಿಂದ ಹೊರಹೋಗಿದ್ದರು” ಎಂದು ತಿಳಿಸಿದ್ದಾರೆ. ಅಲ್ಲದೆ, ನನ್ನ ಸೋದರ ಸಂಬಂಧಿಯೊಂದಿಗೆ ಫೋನ್‌ನಲ್ಲಿ ಆಗ್ಗಾಗ್ಗೆ ಮಾತನಾಡುತ್ತಿದ್ದೆ. ಆ ಕಾರಣಕ್ಕೆ ನಾನು ವಿವಾಹೇತರ ಸಂಬಂಧ ಹೊಂದಿದ್ದೇನೆಂದು ತನ್ನ ಪತಿ ಶಂಕಿಸಿದ್ದರು” ಎಂದು ಹೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...