ಮುಸ್ಲಿಂ ಮಹಿಳೆಯರ ಮುಖ ತೋರಿಸಿ ಮತ ಹಾಕಲು ಸೂಚಿಸಿದ ಬಿಜೆಪಿ ಅಭ್ಯರ್ಥಿ ಮಾಧವಿ ವಿರುದ್ಧ ಎಫ್‌ಐಆರ್

Date:

ಹೈದರಾಬಾದ್‌ನ ಬಿಜೆಪಿ ಅಭ್ಯರ್ಥಿ, ವಿವಾದಿತ ನಾಯಕಿ ಕೊಂಪೆಲ್ಲಾ ಮಾಧವಿ ಲತಾ ಅವರು ಮತಗಟ್ಟೆಯಲ್ಲಿ ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯರನ್ನು ತಮ್ಮ ಮತದಾರರ ಗುರುತಿನ ಚೀಟಿಯಲ್ಲಿರುವ ಫೋಟೋಗಳೊಂದಿಗೆ ಹೊಂದಿಸಲು ತಮ್ಮ ಮುಖವನ್ನು ತೋರಿಸುವಂತೆ ಒತ್ತಾಯಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾದ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿರುವುದಾಗಿ ವರದಿಯಾಗಿದೆ.

ಇಂದು ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಚುನಾವಣೆಯಲ್ಲಿ ಹೆಚ್ಚು ಧಾರ್ಮಿಕ ದ್ವೇಷಪೂರಿತ ಭಾಷಣಕ್ಕೆ ಕುಖ್ಯಾತರಾದ ಅಭ್ಯರ್ಥಿಗಳ ಪೈಕಿ ಮಾಧವಿ ಲತಾ ಕೂಡ ಒಬ್ಬರು. ಅವರು ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಕಡಿಮೆಯಿದ್ದರೂ ಹೈದರಾಬಾದ್‌ನಿಂದ ನಾಲ್ಕು ಬಾರಿ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಧವಿ ಲತಾ ಅವರ ಗುರುತನ್ನು ಪರಿಶೀಲಿಸಲು ಯಾರೊಬ್ಬರ ಮುಸುಕನ್ನು ಎತ್ತುವ ಹಕ್ಕು ಯಾವುದೇ ಅಭ್ಯರ್ಥಿಗೆ ಇಲ್ಲದಿರುವುದರಿಂದ ಅವರ ವಿರುದ್ಧ ಪೊಲೀಸರು, ಐಪಿಸಿ ಸೆಕ್ಷನ್ 171ಸಿ, 186,505(1) ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಅನ್ವಯ ಎಫ್‌ಐಆರ್ ದಾಖಲಿಸಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ರೊನಾಲ್ಡ್ ರಾಸ್ ತಿಳಿಸಿದ್ದಾರೆ.

“ಒಂದು ವೇಳೆ ಅಭ್ಯರ್ಥಿಗಳಿಗೆ ಮತದಾರರ ಬಗ್ಗೆ ಏನೇ ಅನುಮಾನವಿದ್ದಲ್ಲಿ, ಮತದಾರರ ಗುರುತನ್ನು ಪರಿಶೀಲಿಸಲು ಚುನಾವಣಾಧಿಕಾರಿಯವರ ಬಳಿ ವಿನಂತಿಸಿಕೊಳ್ಳಬಹುದು. ಖುದ್ದು ಅವರಾಗಿಯೇ ಈ ರೀತಿ ಮಾಡುವಂತಿಲ್ಲ. ಹಾಗಾಗಿ, ತಮ್ಮಿಷ್ಟದಂತೆ ವರ್ತಿಸಿರುವ ಮಾಧವಿ ಲತಾ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...