ನಾನು ಪ್ರಧಾನಿ ಹುದ್ದೆಯ ಸ್ಪರ್ಧೆಯಲ್ಲಿಲ್ಲ: ಶರದ್‌ ಪವಾರ್

Date:

  • ರಾಮ್ ತಕವಾಲೆ ಅವರ ಸಂತಾಪ ಸಭೆಯಲ್ಲಿ ಶರದ್‌ ಪವಾರ್ ಮಾತು
  • 2024ರಲ್ಲಿ ನಡೆಯಲಿರುವ ಲೋಕಸಭೆ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆ

ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಶರದ್‌ ಪವಾರ್‌ ಅವರು ತಾವು ಪ್ರಧಾನ ಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿಲ್ಲ ಎಂದು ಹೇಳಿದ್ದಾರೆ.

ಪ್ರತಿಪಕ್ಷಗಳು ದೇಶದ ಒಳಿತಿಗಾಗಿ ಕೆಲಸ ಮಾಡುವ ನಾಯಕತ್ವ ಬಯಸುತ್ತವೆ. ಈ ನಿಟ್ಟಿನಲ್ಲಿ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚೆಗೆ ನಿಧನರಾದ ಪುಣೆ ವಿಶ್ವವಿದ್ಯಾಲಯದ ಉಪಕುಲಪತಿ ರಾಮ್ ತಕವಾಲೆ ಅವರ ಸಂತಾಪ ಸಭೆಯಲ್ಲಿ ಶರದ್‌ ಪವಾರ್‌ ಭಾಗವಹಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರತಿಪಕ್ಷಗಳು ಒಗ್ಗೂಡಿದರೆ ಯಾರಾದರೂ ಒಬ್ಬರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವುದು ಸ್ವಲ್ಪ ಕಷ್ಟವಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಪ್ರತಿಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದ್ದರಿಂದ ನಾನು ಪ್ರಧಾನಿ ಹುದ್ದೆಯ ಸ್ಪರ್ಧೆಯಲ್ಲಿಲ್ಲ” ಎಂದು ಪವಾರ್‌ ತಿಳಿಸಿದರು.

‍ಶರದ್‌ ಪವಾರ್‌ ಅವರು ಮಹಾ ವಿಕಾಸ್ ಅಘಾಡಿಯ ಭಾಗವಾಗಿರುವ ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ಜೊತೆ ಸ್ಥಾನಗಳ ಹಂಚಿಕೆ ಕುರಿತು ಮಾತನಾಡಿ, ”ಇತ್ತೀಚೆಗೆ ನನ್ನ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಮಹಾ ವಿಕಾಸ್ ಅಘಾಡಿ ನಾಯಕರು ಈ ಬಗ್ಗೆ ನಿರ್ಧರಿಸುತ್ತಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ₹2,000 ಬೆಲೆಯ ನೋಟನ್ನೇ ನೀಡುತ್ತಿರುವ ಗ್ರಾಹಕರು: ಝೊಮ್ಯಾಟೋಗೆ ಹೊಸ ತಲೆಬಿಸಿ!

“ಉದ್ಧವ್ ಠಾಕ್ರೆ, ಸೋನಿಯಾ ಗಾಂಧಿ ಅಥವಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾನು ಒಟ್ಟಿಗೆ ಕುಳಿತು ಸ್ಥಾನಗಳ ಹಂಚಿಕೆ ಬಗ್ಗೆ ಹೆಚ್ಚಿನ ಚರ್ಚೆ ನಡೆಸುತ್ತೇವೆ” ಎಂದು ಶರದ್‌ ಪವಾರ್ ತಿಳಿಸಿದ್ದಾರೆ.

2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮುಂದಿನ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯೂ ನಡೆಯಲಿದೆ.

ಅನೇಕ ರಾಜ್ಯಗಳ ವಿಧಾನಸಭೆ ಚುನಾವಣೆಯು ಈ ವರ್ಷ ನಡೆಯುತ್ತಿದೆ. ಈ ಚುನಾವಣೆಗಳಲ್ಲಿ ಬಿಜೆಪಿಯೇತರ ಸರ್ಕಾರ ರಚನೆಗೆ ಪ್ರತಿಪಕ್ಷಗಳನ್ನು ಒಂದುಗೂಡಿಸಲು ಪವಾರ್‌ ಸಹ ಪ್ರಯತ್ನಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಕಾಂಗ್ರೆಸ್‌ ನಾಯಕರು ಹಾಗೂ ಇತರ ಪಕ್ಷಗಳ ನಾಯಕರೊಂದಿಗೆ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...