ಡೆಪ್ಯುಟಿ ಸ್ಪೀಕರ್ ಚುನಾವಣೆ: ಅಯೋಧ್ಯೆ ಸಂಸದ ‘ಇಂಡಿಯಾ’ ಒಕ್ಕೂಟದಿಂದ ಸ್ಪರ್ಧೆ ಸಾಧ್ಯತೆ

Date:

ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಲೋಕಸಭೆಯ ಡೆಪ್ಯುಟಿ ಸ್ಪೀಕರ್‌ ಚುನಾವಣೆಗೆ ಸಮಾಜವಾದಿ ಪಕ್ಷದ ಸಂಸದ ಅವದೇಶ್‌ ಪ್ರಸಾದ್‌ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಇದರೊಂದಿಗೆ ಡೆಪ್ಯುಟಿ ಸ್ಪೀಕರ್‌ ಚುನಾವಣೆಯಲ್ಲಿ ಕೂಡ ಆಡಳಿತ ಪಕ್ಷಕ್ಕೆ ಸೆಡ್ಡು ಹೊಡೆಯಲು ವಿಪಕ್ಷಗಳು ನಿರ್ಧರಿಸಿವೆ. ಅವದೇಶ್ ಅವರು ಅಯೋಧ್ಯೆಯಿರುವ ಫೈಜಾಬಾದ್‌ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.

ಇಲ್ಲಿಯವರೆಗೂ ಆಡಳಿತ ಪಕ್ಷ ಡೆಪ್ಯುಟಿ ಸ್ಪೀಕರ್‌ ಚುನಾವಣೆಗೆ ಯಾವುದೇ ಹೆಸರನ್ನು ಸೂಚಿಸಿಲ್ಲ. 17ನೇ ಲೋಕಸಭೆ ಚುನಾವಣೆ 2019ರಿಂದಲೂ ಈ ಹುದ್ದೆ ಖಾಲಿಯಿದೆ. ಈ ಹುದ್ದೆಯನ್ನು ವಿಪಕ್ಷಗಳಿಗೆ ಬಿಟ್ಟುಕೊಡುವ ಯಾವುದೇ ಸುಳಿವನ್ನು ಎನ್‌ಡಿಎ ಸರ್ಕಾರ ನೀಡಿಲ್ಲ. ಆದರೆ ಸರ್ಕಾರದ ನಿರ್ಧಾರದ ಮೇಲೆ ವಿಪಕ್ಷಗಳು ಮುಂದಿನ ಕಾರ್ಯತಂತ್ರ ನಡೆಸಲಿವೆ ಎನ್ನಲಾಗಿದೆ.

ಡೆಪ್ಯುಟಿ ಸ್ಪೀಕರ್‌ ಹುದ್ದೆಯನ್ನು ವಿಪಕ್ಷಗಳಿಗೆ ನೀಡಲು ಯಾವುದೇ ಒಮ್ಮತ ಮೂಡದ ಕಾರಣ ಇಂಡಿಯಾ ಒಕ್ಕೂಟದ ವಿಪಕ್ಷಗಳು ಸ್ಪೀಕರ್‌ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದವು. ಮೂಲಗಳ ಪ್ರಕಾರ ಪ್ರಸ್ತುತ ಅಧಿವೇಶನದಲ್ಲಿಯೇ ಡೆಪ್ಯುಟಿ ಸ್ಪೀಕರ್ ಚುನಾವಣೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ವಿಪಕ್ಷಗಳ ಲೋಕಸಭೆಯ ನಾಯಕರಾದ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಟಿಎಂಸಿಯ ಅಭಿಷೇಕ್‌ ಬ್ಯಾನರ್ಜಿ ಅವರು ಔಪಚಾರಿಕ ಚರ್ಚೆ ನಡೆಸಿದ್ದು ಡೆಪ್ಯುಟಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದರೊಂದಿಗೆ ಬಲವಾದ ರಾಜಕೀಯ ಸಂದೇಶ ನೀಡಬೇಕೆಂದು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ದಲಿತ ಸಮುದಾಯದ ನಾಯಕರಾಗಿರುವ ಅವದೇಶ್‌ ಪ್ರಸಾದ್‌ ಅವರು ಫೈಜಾಬಾದ್‌ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರೂ ಅಯೋಧ್ಯೆಯ ಸಂಸದರೆಂದು ಪರಿಚಿತರಾಗಿದ್ದಾರೆ. ಇವರ ಹೆಸರನ್ನು ಸೂಚಿಸಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥರಾದ ಮಮತಾ ಬ್ಯಾನರ್ಜಿ ಎಂದು ಮೂಲಗಳು ತಿಳಿಸಿವೆ.

ಅವದೇಶ್‌ ಪ್ರಸಾದ್‌ ಅವರು ರಾಮ ಮಂದಿರವಿರುವ ಅಯೋಧ್ಯೆಯಲ್ಲಿ ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರನ್ನು 54,567 ಮತಗಳಿಂದ ಸೋಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...