ಡೊನಾಲ್ಡ್ ಟ್ರಂಪ್ ಅವರ ಧನಾತ್ಮಕ ನಡೆಯನ್ನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇನೆ: ಪ್ರಧಾನಿ ಮೋದಿ

Date:

ಭಾರತ ಮತ್ತು ಅಮೆರಿಕ ನಡುವೆ ಆರಂಭವಾದ ಸುಂಕಾಸ್ತ್ರದ ಕಾರ್ಮೋಡ ಅಂತ್ಯಗೊಳ್ಳುವ ಲಕ್ಷಣಗಳು ಕಾಣುತ್ತಿವೆ. ಪರಸ್ಪರ ಮುನಿಸಿಕೊಂಡಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತೆ ಸ್ನೇಹದ ಮಾತುಗಳನ್ನು ಆಡಿದ್ದಾರೆ.

“ನರೇಂದ್ರ ಮೋದಿ ಜೊತೆ ಎಂದಿಗೂ ನನಗೆ ಉತ್ತಮ ಸ್ನೇಹವಿದೆ. ಅವರು ಅದ್ಭುತ ಪ್ರಧಾನಿ. ಆದರೆ ಅವರು ಈಗ ಮಾಡುತ್ತಿರುವುದು ನನಗೆ ಇಷ್ಟವಾಗುತ್ತಿಲ್ಲ. ಭಾರತದೊಂದಿಗೆ ಅಮೆರಿಕಕ್ಕೆ ವಿಶೇಷ ಸಂಬಂಧ ಇದೆ, ಎರಡೂ ದೇಶಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ, ಸ್ವಲ್ಪ ಕಾಯಿರಿ” ಎಂದಿರುವ ಟ್ರಂಪ್‌ ಹೇಳಿಕಗೆ ಮೋದಿ ಪ್ರತಿಕ್ರಿಯಿಸಿದ್ದಾರೆ.

“ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಧನಾತ್ಮಕ ನಡೆಯನ್ನು ಸ್ವಾಗತಿಸುತ್ತೇನೆ. ಡೊನಾಲ್ಡ್ ಟ್ರಂಪ್ ಅವರ ಭಾವನೆಗಳನ್ನು ಮತ್ತು ನಮ್ಮ ಸಂಬಂಧಗಳ ಬಗ್ಗೆ ಅವರು ಸಕಾರಾತ್ಮಕ ಮೌಲ್ಯಮಾಪ ಮಾಡಿದ್ದಾಗಿ ನಾನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇನೆ” ಎಂದು ಎಂದು ಮೋದಿ ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತ ಮತ್ತು ಅಮೆರಿಕಗಳು ಬಹಳ ಸಕಾರಾತ್ಮಕ ಮತ್ತು ಭವಿಷ್ಯದ ದೃಷ್ಟಿಕೋನದ ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿವೆ” ಎಂದು ಮೋದಿ ಅವರು ಡೊನಾಲ್ಡ್ ಟ್ರಂಪ್ ಮತ್ತು POTUS (ಯುಎಸ್ ಅಧ್ಯಕ್ಷ) ಅವರನ್ನು ಟ್ಯಾಗ್ ಮಾಡಿ ಈ ಪೋಸ್ಟ್ ಹಾಕಿದ್ದಾರೆ. ಈ ಪೋಸ್ಟ್ ಈಗ ವೈರಲ್ ಆಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...