ರಾಜಸ್ಥಾನ | ಭಾರತೀಯ ವಾಯುಪಡೆಯ ಫೈಟರ್ ಜೆಟ್‌ ವಿಮಾನ ಪತನ; ಇಬ್ಬರು ಪೈಲಟ್‌ಗಳ ಸಾವು

Date:

ರಾಜಸ್ಥಾನದ ಚಿರು ಜಿಲ್ಲೆಯ ಭಾನೊಡಾ ಗ್ರಾಮದ ಬಳಿ ಭಾರತೀಯ ವಾಯು ಪಡೆಯ ಫೈಟರ್‌ ಜೆಟ್‌ ವಿಮಾನ ಪತನವಾಗಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಹೊಲವೊಂದರಲ್ಲಿ ಪೈಲಟ್‌ ಮೃತದೇಹ ಒಳಗೊಂಡು ವಿಮಾನದ ಅವಶೇಷಗಳು ಪತ್ತೆಯಾಗಿವೆ. ಆನಂತರದಲ್ಲಿ ಸೇನೆ ಹಾಗೂ ಸ್ಥಳೀಯ ಆಡಳಿತ ಇಬ್ಬರು ಮೃತಪಟ್ಟಿರುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಮೂಲಗಳ ಪ್ರಕಾರ ಫೈಟರ್‌ ಜಟ್‌ ತರಬೇತಿಯಲ್ಲಿದ್ದಾಗ ಅಪಘಾತ ಸಂಭವಿಸಿದೆ. ವಾಯುಪಡೆಯು ರಾಜಸ್ಥಾನದ ಜೋದ್‌ಪುರ ಹಾಗೂ ಬಿಕನೇರ್‌ ಒಳಗೊಂಡು ಹಲವು ಕಡೆಗಳಲ್ಲಿ ಐಎಎಫ್‌ ನೆಲೆಗಳನ್ನು ಹೊಂದಿ ಕಾರ್ಯನಿರ್ವಹಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ನಂತರ ಪ್ರದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು. ಆಕಾಶದಲ್ಲಿ ದೊಡ್ಡ ಶಬ್ದ ಉಂಟಾಗಿ ಆನಂತರದಲ್ಲಿ ಮೈದಾನದಲ್ಲಿ ಬೆಂಕಿ ಮತ್ತು ಹೊಗೆ ಆವರಿಸಿದೆ. ಅಪಘಾತದ ನಂತರ ಹೊಲಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸಲು ಸ್ಥಳೀಯರು ಪ್ರಯತ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವಾಸಾರ್ಹತೆ ಕಳೆದುಕೊಂಡ ಚುನಾವಣಾ ಆಯೋಗದ ಅವಶ್ಯಕತೆ ಇದೆಯೇ?

ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಪೊಲೀಸರು ಆಗಿಮಿಸಿದ್ದು, ಸೇನಾ ರಕ್ಷಣಾ ಕಾರ್ಯಾಚರಣಾ ತಂಡ ಶೀಘ್ರದಲ್ಲೇ ಸ್ಥಳಕ್ಕೆ ಆಗಮಿಸಿ ತನಿಖೆಯನ್ನು ಆರಂಭಿಸಲಿದೆ. ಅಪಘಾತಕ್ಕೆ ಕಾರಣವೇನೆಂಬುದು ಕೂಡ ಪತ್ತೆಯಾಗಬೇಕಿದೆ. ಪ್ರಾಥಮಿಕ ತನಿಖೆ ಪೂರ್ಣಗೊಂಡ ನಂತರ ಸೇನೆಯು ಅಧಿಕೃತ ಹೇಳಿಕೆಯನ್ನು ನೀಡಲಿದೆ.

ಮಧ್ಯಾಹ್ನ 1.25ರ ಸಮಯದಲ್ಲಿ ಭಾನೊಡಾ ಗ್ರಾಮದ ಕೃಷಿ ಭೂಮಿಯಲ್ಲಿ ಜೆಟ್‌ ವಿಮಾನ ಪತನವಾಗಿದ್ದು, ಮೃತದೇಹಗಳನ್ನು ಅಪಘಾತದ ಸ್ಥಳದಲ್ಲಿ ಪತ್ತೆಹಚ್ಚಲಾಯಿತು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...