ನವದೆಹಲಿಯ ತ್ಯಾಗರಾಜ್ ಕ್ರೀಡಾಂಗಣವನ್ನು ಸಾರ್ವಜನಿಕರಿಂದ ಖಾಲಿ ಮಾಡಿ ತಮ್ಮ ನಾಯಿಯನ್ನು ವಾಕ್ ಮಾಡಿಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ 2022ರಲ್ಲಿ ಲಡಾಖ್ ಗೆ ವರ್ಗಾಯಿಸಲ್ಪಟ್ಟಿದ್ದ 1994ರ ಬ್ಯಾಚ್ ನ ಐಎಎಸ್ ಅಧಿಕಾರಿ ಸಂಜೀವ್ ಖಿರ್ವಾರ್ ಅವರನ್ನು ಮುನ್ಸಿಪಲ್ ಕಾರ್ಪೊರೇಷನ್ ಆಫ್ ದೆಹಲಿ (ಎಂಸಿಡಿ)ಯ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಈ ನೇಮಕಾತಿಯನ್ನು ಕೇಂದ್ರ ಗೃಹ ಸಚಿವಾಲಯ ಬುಧವಾರ ಪ್ರಕಟಿಸಿದ್ದು, ಈ ಕುರಿತು ನವದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರ ಕಚೇರಿಗೆ ಅಧಿಕೃತವಾಗಿ ಮಾಹಿತಿ ನೀಡಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರು ಕೇಂದ್ರದ ಕೈಗೊಂಬೆಯಲ್ಲ- ಆಯಾ ರಾಜ್ಯದ ಜನಾದೇಶ ಧಿಕ್ಕರಿಸುವ ನಡೆ ಸಂವಿಧಾನಬಾಹಿರ
2022ರಲ್ಲಿ ದೆಹಲಿಯ ತ್ಯಾಗರಾಜ್ ಕ್ರೀಡಾಂಗಣವನ್ನು ಕ್ರೀಡಾಪಟುಗಳ ಬಳಕೆಗೆ ಮುಚ್ಚಿ, ವೈಯಕ್ತಿಕ ಉದ್ದೇಶಕ್ಕಾಗಿ ಬಳಸಿದ್ದಾರೆಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದವು. ಈ ಹಿನ್ನೆಲೆ ಅವರನ್ನು ಲಡಾಖ್‌ಗೆ ವರ್ಗಾಯಿಸಲಾಗಿತ್ತು.
ಇದೇ ವೇಳೆ, ಪ್ರಸ್ತುತ ಎಂಸಿಡಿ ಆಯುಕ್ತರಾಗಿದ್ದ 1992ರ ಬ್ಯಾಚ್‌ನ ಐಎಎಸ್ ಅಧಿಕಾರಿ ಅಶ್ವನಿ ಕುಮಾರ್ ಅವರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ವರ್ಗಾಯಿಸಲಾಗಿದೆ.





