ಎನ್‌ಡಿಎ ಸೇರಿದರೆ ಕೇರಳಕ್ಕೆ ಹೆಚ್ಚಿನ ಅನುದಾನ: ಕೇಂದ್ರ ಸಚಿವ ರಾಮದಾಸ್‌ ಅಠಾವಳೆ

Date:

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎನ್‌ಡಿಎ ಮೈತ್ರಿಕೂಟ ಸೇರಿದರೆ, ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ಲಭಿಸಲಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.

ಕೇರಳದ ಕಣ್ಣೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಂದು ವೇಳೆ ವಿಜಯನ್ ಅವರು ಎನ್‌ಡಿಎ ಸೇರಿದರೆ ಅದೊಂದು ಕ್ರಾಂತಿಕಾರಿ ನಡೆಯಾಗಲಿದ್ದು, ಕೇರಳಕ್ಕೆ ಖಂಡಿತವಾಗಿಯೂ ಹೆಚ್ಚಿನ ಹಣ ಹರಿದು ಬರಲಿದೆ’ ಎಂದು ತಿಳಿಸಿದರು.

​’ಹೀಗೆ ಬಂದ ಹಣವನ್ನು ರಾಜ್ಯದ ಅಭಿವೃದ್ಧಿಗೆ ಬಳಸಬಹುದು. ಪ್ರಧಾನಿ ನರೇಂದ್ರ ಮೋದಿ ಅವರು ಕೇರಳಕ್ಕೆ ದೊಡ್ಡ ಕೊಡುಗೆ (ಪ್ಯಾಕೇಜ್) ನೀಡಲಿದ್ದಾರೆ’ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರು ದುರಹಂಕಾರ ತೊರೆಯಲಿ- ಆಯಾ ರಾಜ್ಯದ ಜನಾದೇಶವನ್ನು ಗೌರವಿಸಲಿ

ವಿಜಯನ್ ಅವರು ಎನ್‌ಡಿಎ ಸೇರಿದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಹಾದಿ ಸುಗಮವಾಗಲಿದ್ದು, ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಬಹುದು ಎಂದು ಅಠಾವಳೆ ತಿಳಿಸಿದರು.

​ಮಹಾರಾಷ್ಟ್ರದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಪಕ್ಷದ ಅಧ್ಯಕ್ಷರೂ ಆಗಿರುವ ಅಠಾವಳೆ, ಕೇವಲ ವಿಜಯನ್ ಅಷ್ಟೇ ಅಲ್ಲ, ಸಿಪಿಐಎಂ ಮತ್ತು ಸಿಪಿಐ ಪಕ್ಷಗಳೂ ಎನ್‌ಡಿಎ ಸೇರಬೇಕು ಎಂದು ಆಹ್ವಾನ ನೀಡಿದರು.

‘ಸಮಾಜವಾದಿ ಹಿನ್ನೆಲೆಯ ನಾಯಕರೇ ಎನ್‌ಡಿಎ ಸೇರಿರುವಾಗ, ಕಮ್ಯುನಿಸ್ಟ್ ನಾಯಕರು ಏಕೆ ಸೇರಬಾರದು?’ ಎಂದು ಅವರು ಪ್ರಶ್ನಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...