ಮೋದಿ ಹೇಳಿದ ಮಾತು ಜನಸಾಮಾನ್ಯರು ಹೇಳಿದ್ದರೆ ಅವರನ್ನು ಮನೋ ವೈದ್ಯರ ಬಳಿ ಕರೆದೊಯ್ಯುತ್ತಿದ್ದಿರಿ: ರಾಹುಲ್

Date:

ನಾನು ಜೈವಿಕವಾಗಿ ಜನಿಸಿಲ್ಲ, ನನ್ನನ್ನು ಪರಮಾತ್ಮ ಕಳಿಸಿದ್ದಾನೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ದೆಹಲಿಯ ದಿಲ್‌ಸಾದ್‌ ಗಾರ್ಡನ್‌ನಲ್ಲಿ ಪಕ್ಷದ ಅಭ್ಯರ್ಥಿ ಕನ್ನಯ್ಯ ಕುಮಾರ್‌ ಪರ ಚುನಾವಣಾ ಪ್ರಚಾರ ಮಾಡಿದ ರಾಹುಲ್ ಗಾಂಧಿ, ನಾನು ಜೈವಿಕವಾಗಿ ಜನಿಸಿಲ್ಲ, ನನ್ನನ್ನು ಪರಮಾತ್ಮ ಕಳಿಸಿದ್ದಾನೆ ಎಂಬ ಪ್ರಧಾನಿ ಮೋದಿ ಹೆಳಿದ ಮಾತನ್ನು ಜನ ಸಾಮಾನ್ಯರು ಹೇಳಿದ್ದರೆ ಅವರನ್ನು ನೇರವಾಗಿ ಮನೋವೈದ್ಯರ ಬಳಿ ಕರೆದೊಯ್ಯುತ್ತಿದ್ದಿರಿ ಎಂದು ಹೇಳಿದರು.

“ದೇವರು ಕಳಿಸಿದ ವ್ಯಕ್ತಿ ಬಡವರಿಗಾಗಿ ಏನು ಮಾಡಿಲ್ಲ ಅವರು ಕೇವಲ 22 ಜನರಿಗಾಗಿ ಮಾತ್ರ ಕೆಲಸ ಮಾಡಿದ್ದಾರೆ. ಅಂಬಾನಿ, ಅದಾನಿ ಏಳಿಗೆಗಾಗಿ ಪ್ರಧಾನಿ ಮೋದಿ ಏನು ಬೇಕಾದರೂ ಮಾಡುತ್ತಾರೆ. ದೇಶದ ಎಲ್ಲ ಆಸ್ತಿಯನ್ನು ಅವರಿಗೆ ನೀಡಿದ್ದಾರೆ. ರೈಲ್ವೆ, ಬಂದರು, ವಿಮಾನ ನಿಲ್ದಾಣಗಳು ಇತರೆ ಎಲ್ಲವನ್ನು ಅದಾನಿಗೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಬಡವರು ಕೇಳಿದ್ದ ಸಾಲ ಮನ್ನ, ರಸ್ತೆಗಳು, ಆಸ್ಪತ್ರೆಗಳು, ಶಿಕ್ಷಣ ಮುಂತಾದ ಏನನ್ನು ನರೇಂದ್ರ ಮೋದಿ ಮಾಡಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುಪಿ-ಬಿಹಾರದಲ್ಲಿ ಧೂಳೆಬ್ಬಿಸಿದೆ ʼಖಟಾಖಟ್ ಖಟಾಖಟ್ʼ ಮಹಾಲಕ್ಷ್ಮೀ ಯೋಜನೆ

“ಬಿಜೆಪಿಯವರು ಯಾವಾಗಲು ಸಂವಿಧಾನವನ್ನು ಎಸೆಯಲು ಬಯಸುತ್ತಾರೆ. ಇದು ಸಾಮಾನ್ಯ ಪುಸ್ತಕವಲ್ಲ ಗಾಂಧಿ, ಅಂಬೇಡ್ಕರ್ ಹಾಗೂ ನೆಹರು ಅವರ ಸಾವಿರಾರು ವರ್ಷಗಳ ಸೈದ್ಧಾಂತಿಕ ಪರಂಪರೆಯನ್ನು ಹೊಂದಿರುವ ಸಂವಿಧಾನ. ಅವರು ನಮ್ಮ ಸಂವಿದಾನ  ಅಥವಾ ಭಾರತದ ಬಾವುಟವನ್ನು ಒಪ್ಪಿಕೊಳ್ಳುವುದಿಲ್ಲ. ಈ ಚುನಾವಣೆಯಲ್ಲಿ ಇವುಗಳಲ್ಲವನ್ನು ಬದಲಿಸಲು ಬಯಸಿದ್ದಾರೆ” ಎಂದು ರಾಹುಲ್ ಹೇಳಿದರು.

“ನೀವು ಸಂವಿಧಾನವನ್ನು ಬದಲಿಸಲು ಧೈರ್ಯ ಮಾಡಬೇಡಿ ಎಂದು ನಾನು ಅವರಿಗೆ ಹೇಳ ಬಯಸುತ್ತೇನೆ. ನೀವು ಅಂತಹ ಪ್ರಯತ್ನ ಮಾಡಿದರೆ ಕೋಟ್ಯಂತರ ಭಾರತೀಯರ ಆಕ್ರೋಶಕ್ಕೆ ತುತ್ತಾಗುತ್ತೀರಿ” ಎಂದು ರಾಹುಲ್ ಬಿಜೆಪಿ ವಿರುದ್ಧ ಹರಿಹಾಯ್ದರು.

ದೆಹಲಿ ಒಳಗೊಂಡು 58 ಕ್ಷೇತ್ರಗಳಿಗೆ ಮೇ.25 ರಂದು 6ನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜೂ.1 ರಂದು 7 ಹಂತದ ಮತದಾನ ನಡೆಯಲಿದ್ದು, ಜೂ.4 ರಂದು ಫಲಿತಾಂಶ ಹೊರಬೀಳಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...