ಉತ್ತರ ಪ್ರದೇಶ ಮದರಸಾ ಕಾಯ್ದೆ ರದ್ದು: ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ

Date:

ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ- 2004ನ್ನು ಅಸಾಂವಿಧಾನಿಕ ಎಂದು ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ವಕೀಲರಾದ ಸಂಜೀವ್ ಮಲ್ಹೋತ್ರಾ ಮತ್ತು ಪ್ರದೀಪ್ ಕುಮಾರ್ ಯಾದವ್ ಅವರ ಮೂಲಕ ಮೇಲ್ಮನವಿ ಸಲ್ಲಿಸಲಾಗಿದೆ.

ಮದರಸಾಗಳು ಇಸ್ಲಾಮಿಕ್ ಅಧ್ಯಯನ ಮತ್ತಿತರ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಕಲಿಸಿಕೊಡುತ್ತವೆ. ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯಿದೆ- 2004 ಪ್ರಕಾರ ಮದರಸಾ ಶಿಕ್ಷಣ ಎಂಬುದು ಅರೇಬಿಕ್, ಉರ್ದು, ಪರ್ಷಿಯನ್, ಇಸ್ಲಾಮಿಕ್-ಅಧ್ಯಯನಗಳು, ತತ್ವಶಾಸ್ತ್ರ ಹಾಗೂ ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ನಿರ್ದಿಷ್ಟಪಡಿಸಿದ ಇತರ ಕಲಿಕಾ ಕ್ಷೇತ್ರವನ್ನು ಒಳಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೈನರು, ಸಿಖ್ಖರು, ಬೌದ್ಧರು ಶಿಕ್ಷಣ ಸಂಸ್ಥೆಗಳನ್ನು ಹೊಂದಬಹುದಾದರೆ ಮುಸ್ಲಿಂ ಸಮುದಾಯ ಏಕೆ ಹೊಂದಬಾರದು ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಕಾಲದಲ್ಲಿ ಮೋದಿಯ ಬಾಂಡ್ ಭಯೋತ್ಪಾದನೆ

ಮದರಸಾಗಳ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡುವ ಮೂಲಕ ಮದರಸಾ ಶಿಕ್ಷಣ ಮಂಡಳಿಯನ್ನು ಸಬಲೀಕರಣಗೊಳಿಸುವುದು 2004ರ ಕಾಯಿದೆಯ ಉದ್ದೇಶವಾಗಿತ್ತು.

ಮಾರ್ಚ್ 22ರಂದು ನೀಡಿದ ತೀರ್ಪಿನಲ್ಲಿ ಹೈಕೋರ್ಟ್‌ನ ಲಖನೌ ಪೀಠ ಕಾಯಿದೆಯನ್ನು ಅಸಾಂವಿಧಾನಿಕ ಎಂದು ಘೋಷಿಸಿತು.

ಮದರಸಾ ಕಾಯ್ದೆಯು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜಾತ್ಯತೀತತೆಯ ತತ್ವವನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ವಿವೇಕ್ ಚೌಧರಿ ಮತ್ತು ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರನ್ನೊಳಗೊಂಡ ಹೈಕೋರ್ಟ್ ಪೀಠ ಹೇಳಿತ್ತು.

ಪ್ರಭುತ್ವ ತನ್ನ ಕರ್ತವ್ಯಗಳನ್ನು ನಿರ್ವಹಿಸುವಾಗ ಧರ್ಮಗಳ ನಡುವೆ ತಾರತಮ್ಯ ಎಸಗಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿತ್ತು.

ಸಂವಿಧಾನದ 14ನೇ (ಸಮಾನತೆಯ ಹಕ್ಕು), 21ನೇ (ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು) ಹಾಗೂ 21-ಎ ವಿಧಿಗಳನ್ನು (6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣದ ಹಕ್ಕು) ಮದರಸಾ ಕಾಯ್ದೆ ಉಲ್ಲಂಘಿಸಿದೆ ಎಂದು ಹೈಕೋರ್ಟ್ ತೀರ್ಪು ನೀಡಿತ್ತು.

ಉತ್ತರ ಪ್ರದೇಶದ ಮದರಸಾಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಬೇರೆ ಶಾಲೆಗಳಿಗೆ ತೆರಳಲು ತಕ್ಷಣದ ಕ್ರಮ ತೆಗೆದುಕೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅದು ಸೂಚಿಸಿತ್ತು. ಈ ತೀರ್ಪನ್ನು ಈಗ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...