ಐಕಿಯಾ ಬೆಂಗಳೂರು: ಊಟ ಮಾಡುತ್ತಿರುವಾಗ ದಿಢೀರನೆ ತಟ್ಟೆ ಮೇಲೆ ಬಿದ್ದ ಸತ್ತ ಇಲಿ!

Date:

ಅಂತಾರಾಷ್ಟ್ರೀಯ ಮಟ್ಟದ ಪೀಠೋಪಕರಣಗಳ ಬೃಹತ್‌ ಮಳಿಗೆ ಬೆಂಗಳೂರಿನ ನಾಗಸಂದ್ರದ ಐಕಿಯಾ ಫುಡ್‌ಕೋರ್ಟ್‌ನಲ್ಲಿ ಗ್ರಾಹಕರೊಬ್ಬರು ಊಟ ಮಾಡುತ್ತಿರುವ ಸಂದರ್ಭದಲ್ಲಿ ಸತ್ತ ಇಲಿಯೊಂದು ಆಹಾರದ ತಟ್ಟೆ ಬಳಿ ಬಿದ್ದ ಘಟನೆ ನಡೆದಿದೆ.

ಶರಣ್ಯಶೆಟ್ಟಿ ಎಂಬ ಗ್ರಾಹಕರು ಐಕಿಯಾ ಬೆಂಗಳೂರಿನಲ್ಲಿ ತಮಗಾದ ಅನುಭವವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ತಾನು ಊಟ ಮಾಡುತ್ತಿರುವ ಸಂದರ್ಭದಲ್ಲಿ ಐಕಿಯಾ ಫುಡ್‌ ಟೇಬಲ್‌ ಮೇಲೆ ಏನು ಬಿದ್ದಿದೆ ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ. ನಾವು ಆಹಾರ ಸೇವಿಸುತ್ತಿದ್ದಾಗ ಮೇಲಿಂದ ಸತ್ತ ಇಲಿ ಬಿದ್ದಿತು. ಅತ್ಯಂತ ವಿಲಕ್ಷಣ ಕ್ಷಣ ಇದಾಗಿತ್ತು” ಎಂದು ಐಕಿಯಾ ಸಂಸ್ಥೆಗೆ ಟ್ಯಾಗ್‌ ಮಾಡಿದ್ದಾರೆ.

ಐಕಿಯಾದ ಘಟನೆಯ ಬಗ್ಗೆ ಶರಣ್ಯ ಪೋಸ್ಟ್‌ ಮಾಡಿರುವ ಟ್ವೀಟ್‌ಗೆ ಹಲವರು ಆಕ್ರೋಶ ವ್ಯಕ್ತಪಡಿಸಿ ಮರುಟ್ವೀಟ್‌ ಮಾಡಿರುವುದಲ್ಲದೆ ಶೇರ್‌ ಕೂಡ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಓ ದೇವರೆ ಇದೇನಿದು, ಈ ಚಿತ್ರ ನೋಡಿದರೆ ಮತ್ತೆ ಅಲ್ಲಿಗೆ ಹೋಗಬಾರದು ಅನಿಸುತ್ತದೆ ಎಂದು ಒಬ್ಬರು ಟ್ವೀಟ್‌ ಮಾಡಿದರೆ, ಮತ್ತೊಬ್ಬರು ಇನ್ನು ಮುಂದೆ ಅಲ್ಲಿಗೆ ಹೋಗದಿರಲು ಇದೊಂದು ಚಿತ್ರ ಸಾಕು ಎಂದು ಎಂದು ಟ್ವೀಟ್‌ ಮಾಡಿದ್ದಾರೆ. ಆಹಾರದಲ್ಲಿ ಇಲಿ ಸೇರಿಸಿ ಕೊಡುತ್ತಾರೆಯೆ? ಪೀಠೋಪಕರಣಗಳಲ್ಲಿ ಇಲಿ ಇರುತ್ತದೆಯೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಹೇಳಲಾಗಿದೆ.

ಹಲವರು ಸಂಸ್ಥೆಯವರು ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಐಕಿಯಾವನ್ನು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಒಬ್ಬರೇ ಸಾಕು ಎನ್ನುತ್ತಿದ್ದವರು 30 ಮೇಲ್ಪಟ್ಟು ಪಕ್ಷಗಳನ್ನು ಒಗ್ಗೂಡಿಸುತ್ತಿದ್ದಾರೆ: ಖರ್ಗೆ ವಾಗ್ದಾಳಿ

ಶರಣ್ಯ ಅವರು ಪೋಸ್ಟ್‌ ಶೇರ್‌ ಮಾಡಿಕೊಂಡ ನಂತರ, ಟ್ವೀಟ್ ಅನ್ನು 71,000 ಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. 267 ಮಂದಿ ಲೈಕ್‌ ಮಾಡಿದ್ದಾರೆ. 81 ಮಂದಿ ರೀಟ್ವೀಟ್‌ ಮಾಡಿದ್ದಾರೆ.

ಊಟದ ಟೇಬಲ್‌ ಬಳಿ ಸತ್ತ ಇಲಿ ಬಿದ್ದಿರುವುದಕ್ಕೆ ಐಕಿಯಾ ಕ್ಷಮೆ ಯಾಚಿಸಿದೆ. ”ನಾಗಸಂದ್ರದಲ್ಲಿ ನಡೆದ ಅಹಿತಕರ ಘಟನೆಗೆ ನಾವು ಕ್ಷಮೆ ಯಾಚಿಸುತ್ತೇವೆ. ನಾವು ಘಟನೆಯ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಮತ್ತು ಎಲ್ಲ ಮುನ್ನೆಚ್ಚರಿಕೆಯ ಪ್ರಯತ್ನಗಳನ್ನು ತೆಗೆದುಕೊಳ್ಳುವುದಕ್ಕೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಆಹಾರ ಸುರಕ್ಷತೆ ಮತ್ತು ನೈರ್ಮಲ್ಯವು ನಮ್ಮ ಪ್ರಮುಖ ಆದ್ಯತೆಯಾಗಿದೆ. ನಮ್ಮ ಗ್ರಾಹಕರು ಯಾವಾಗಲೂ ಅತ್ಯುತ್ತಮ ಶಾಪಿಂಗ್ ಅನುಭವವನ್ನು ಹೊಂದಬೇಕೆಂದು ನಾವು ಬಯಸುತ್ತೇವೆ” ಎಂದು ಟ್ವೀಟ್ ಮಾಡಲಾಗಿದೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...