ಅಕ್ರಮ ಗೋಶಾಲೆ ತೆರವು; ಪಾಲಿಕೆ ಸಿಬ್ಬಂದಿಗಳ ಮೇಲೆ ಬಜರಂಗಿಗಳಿಂದ ಹಲ್ಲೆ – ಹಿಂಸಾಚಾರ

Date:

ಮಧ್ಯಪ್ರದೇಶದ ಇಂಧೋರ್‌ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಗೋಶಾಲೆಯನ್ನು ಇಂಧೋರ್ ಮಹಾನಗರ ಪಾಲಿಕೆ ತೆರವುಗೊಳಿಸಿದೆ. ಈ ವೇಳೆ, ಬಜರಂಗದಳದ ಕಾರ್ಯಕರ್ತರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದು, ಘರ್ಷಣೆ ನಡೆದಿದೆ. ಹಿಂಸಾಚಾರದಲ್ಲಿ ಸರ್ಕಾರಿ ವಾಹನಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

ಇಂಧೋರ್‌ನ ದತ್ತನಗರದ ಕೆಲವು ವರ್ಷಗಳಿಂದ ಅಕ್ರಮವಾಗಿ ಗೋಶಾಲೆ ನಡೆಸಲಾಗುತ್ತಿತ್ತು. ಆ ಗೋಶಾಲೆಯನ್ನು ಮಹಾನಗರ ಪಾಲಿಕೆಯ ಅಧಿಕಾರಿಗಳು ಬುಧವಾರ ತೆರವುಗೊಳಿಸಿದ್ದಾರೆ.

ಗೋಶಾಲೆಯನ್ನು ಅಗತ್ಯ ಅನುಮತಿ ಪಡೆಯದೆ ನಿರ್ಮಿಸಲಾಗಿತ್ತು. ಗೋಶಾಲೆಯಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಆ ಪ್ರದೇಶದ ನಿವಾಸಿಗಳು ಹಲವು ದೂರುಗಳನ್ನು ಸಲ್ಲಿಸಿದ್ದರು. ಹೀಗಾಗಿ, ಅಕ್ರಮವಾಗಿ ನಿರ್ಮಿಸಲಾಗಿದ್ದ ಗೋಶಾಲೆಯನ್ನು ತೆರವುಗೊಳಿಸಿರುವುದಾಗಿ ಇಂಧೋರ್‌ ಮಹಾನಗರ ಪಾಲಿಕೆಯ ಉಪ ಆಯುಕ್ತೆ ಲತಾ ಅಗರವಾಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ, ಬಜರಂಗದಳದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಹಿಂಸಾಚಾರ ನಡೆದಿದೆ. ಘರ್ಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಜರಂಗದಳದ ಕಾರ್ಯಕರ್ತರು ಜಾನುವಾರು ಸಾಗಣೆ ಮಾಡುತ್ತಿದ್ದ ಟ್ರಕ್‌ನ ಕಿಟಕಿ ಗಾಜನ್ನು ಹೊಡೆದು ಹಾಕಿದ್ದಾರೆ. ಅಲ್ಲದೆ, ಪಾಲಿಯ ಮೂವರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿದೆ. ಸರ್ಕಾರಿ ವಾಹನಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ.

ಆದರೆ, ಘರ್ಷಣೆ ಸಂಬಂಧ ಪಾಲಿಕಯಾಗಲೀ, ಬಜರಂಗದಳದ ಕಾರ್ಯಕರ್ತರಾಗಲೀ ದೂರು ದಾಖಲಿಸಿಲ್ಲ ಎಂದು ಡಿಸಿಪಿ ವಿನೋದ್ ಕುಮಾರ್ ಮೀನಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...