ಈಸ್ಟ್‌ ಜೈನ್ತಿಯಾ ಹಿಲ್ಸ್‌ನಲ್ಲಿ ಅಕ್ರಮ ಗಣಿಗಾರಿಕೆ: 17,000 ಮೆಟ್ರಿಕ್ ಟನ್‌ ಹೆಚ್ಚು ಕಲ್ಲಿದ್ದಲು ವಶ

Date:

ಮೇಘಾಲಯದಲ್ಲಿ ಕಲ್ಲಿದ್ದಲು ಅಕ್ರಮ ಗಣಿಗಾರಿಕೆ ಮತ್ತು ಸಾಗಣೆಯ ವಿರುದ್ಧದ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ. ಪರಿಣಾಮವಾಗಿ, ಈಸ್ಟ್‌ ಜೈನ್ತಿಯಾ ಹಿಲ್ಸ್‌ ಜಿಲ್ಲೆಯಲ್ಲಿ 17,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಕಲ್ಲಿದ್ದಲು ಮತ್ತು 25.5 ಕೆಜಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಫೆಬ್ರವರಿ 5 ರಂದು ಥಾಂಗ್ಸ್ಕು ಪ್ರದೇಶದ ಕಲ್ಲಿದ್ದಲು ಗಣಿ ಸ್ಥಳದಲ್ಲಿ ಸಂಭವಿಸಿದ ಸ್ಫೋಟದಲ್ಲಿ 34 ಜನರು ಸಾವನ್ನಪ್ಪಿದರು. ಹಲವಾರು ಜನರು ಗಾಯಗೊಂಡಿದ್ದರು. ಈ ಘಟನೆಯ ಬಳಿಕ, ರಾಜ್ಯದಲ್ಲಿ ಕಾನೂನುಬಾಹಿರ ಗಣಿಗಾರಿಕೆ ಚಟುವಟಿಕೆಗಳ ವಿರುದ್ಧ ಪೊಲೀಸ್ ಕಾರ್ಯಾಚರಣೆಗಳು ನಡೆಯುತ್ತಿವೆ.

ಈಸ್ಟ್‌ ಜೈನ್ತಿಯಾ ಹಿಲ್ಸ್‌ ಜಿಲ್ಲೆಯ ಎಸ್‌ಪಿ ಪೊಲೀಸ್ ಪಂಕಜ್ ಕುಮಾರ್ ರಸ್ಗಾನಿಯಾ ನೇತೃತ್ವದಲ್ಲಿ ಪೊಲೀಸರು ಜಿಲ್ಲೆಯ ಹಲವು ಭಾಗಗಳಲ್ಲಿ ದಾಳಿ ನಡೆಸಿದ್ದಾರೆ. ಕೈಬಿಟ್ಟ ಗಣಿಗಳಿಂದ ಅಕ್ರಮವಾಗಿ ಗಣಿಗಾರಿಕೆ ಮಾಡಲಾದ ಕಲ್ಲಿದ್ದಲು ಮತ್ತು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಈ ಕಾರ್ಯಾಚರಣೆಯ ಸಮಯದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ.

ಏತನ್ಮಧ್ಯೆ, ಫೆಬ್ರವರಿ 5ರ ಘಟನೆಗೆ ಸಂಬಂಧಿಸಿದಂತೆ, ಇದುವರೆಗೆ 94 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. 22 ಜನರನ್ನು ಬಂಧಿಸಲಾಗಿದೆ ಎಂದು ರಸ್ಗಾನಿಯಾ ಹೇಳಿದ್ದಾರೆ.

ಘಟನೆಯ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (SIT) ಅನ್ನು ರಚಿಸಿದೆ. ಥಾಂಗ್ಸ್ಕು ಕಲ್ಲಿದ್ದಲು ಗಣಿ ಸ್ಫೋಟ ಘಟನೆಯ ತನಿಖೆಗಾಗಿ ಮೂವರು ಸದಸ್ಯರ ನ್ಯಾಯಾಂಗ ಸಮಿತಿಯನ್ನು ರಚಿಸಲಾಗಿದೆ. ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಆರ್.ಎಸ್ ಚೌಹಾಣ್ ಅವರನ್ನು ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...