“ನಾನೂ ಈ ದೇಶದ ಮಗಳೇ, ದಯವಿಟ್ಟು ನನಗೆ ಧ್ವನಿಯಾಗಿ”: ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ

Date:

ಇತ್ತೀಚೆಗೆ ತಮ್ಮ ಕುಟುಂಬದ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿರುವ ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ, ಜನರು ಜಾತಿ–ಮತಗಳನ್ನು ಬದಿಗಿಟ್ಟು ತಮಗೆ ಬೆಂಬಲ ನೀಡಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಉಚ್ಚಾಟಿತ ನಾಯಕ ಕುಲದೀಪ್‌ ಸೆಂಗಾರ್‌ ಅವರ ಮಗಳು ಇತ್ತೀಚೆಗಷ್ಟೇ, ತಮ್ಮ ತಂದೆ ನಿರಪರಾಧಿ ಎಂದು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು.

2017ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿಯ ವಿಚಾರಣಾ ನ್ಯಾಯಾಲಯವು 2019ರಲ್ಲಿ ಸೆಂಗರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಶಿಕ್ಷೆ ಪ್ರಶ್ನಿಸಿ ಸೆಂಗರ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್‌, ಅರ್ಜಿ ಇತ್ಯರ್ಥವಾಗುವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ, 2025ರ ಡಿಸೆಂಬರ್‌ 23ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿ ಹೈಕೋರ್ಟ್ ಆದೇಶದ ಬಗ್ಗೆ ಜನಾಕ್ರೋಶ ವ್ಯಕ್ತವಾಗಿತ್ತು. ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಹಾಗೂ ಇತರರ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, ಡಿಸೆಂಬರ್‌ 29ರಂದು ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲಿಗೆ ಹೋಗಿ ಬಂದವರಿಗೆ ಸಂಭ್ರಮದ ಸ್ವಾಗತ; ಕರ್ನಾಟಕ ಹೀಗೇಕಾಯಿತು?

ಸೆಂಗಾರ್‌ ಬೆಂಬಲಿಗರಿಂದ ಅಪಪ್ರಚಾರ

ವಿಡಿಯೊ ಹಂಚಿಕೊಂಡಿರುವ ಸಂತ್ರಸ್ತೆ, ಸೆಂಗಾರ್‌ ಬೆಂಬಲಿಗರು ತಮ್ಮ ಹಾಗೂ ತಮ್ಮ ಪತಿಯ ಕುರಿತು ಕಳೆದ ಎರಡು ದಿನಗಳಿಂದ (ಸುಪ್ರೀಂ ಆದೇಶದ ಬಳಿಕ) ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ತಂದೆಯನ್ನು ಬೆಂಬಲಿಸುವ ಸಲುವಾಗಿ ಸೆಂಗಾರ್‌ ಪುತ್ರಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಜನವರಿ 11ರಂದು ‘ಕ್ಷತ್ರಿಯ ಸಮಾವೇಶ’ಕ್ಕೆ ಕರೆ ನೀಡಿದ್ದಾರೆ ಎನ್ನಲಾದ ಹೇಳಿಕೆಯನ್ನು ಹರಡಲಾಗುತ್ತಿದೆ ಎಂದೂ ಸಂತ್ರಸ್ತೆ ಆರೋಪಿಸಿದ್ದಾರೆ.

‘ನಾನೂ ಕ್ಷತ್ರಿಯ ಸಮುದಾಯದ ಮಗಳೇ. ನಾನೂ ಈ ದೇಶದ ಮಗಳೇ. ದಯವಿಟ್ಟು ನನಗೆ ಧ್ವನಿಯಾಗಿ. ಅಪರಾಧಕ್ಕೆ ಯಾವುದೇ ಜಾತಿಯಿಲ್ಲ’ ಎಂದು ಮನವಿ ಮಾಡಿದ್ದಾರೆ.

ನ್ಯಾಯಾಂಗದ ಮೇಲೆ ನಂಬಿಕೆ ಇದೆ ಎಂಬುದನ್ನು ಪುನರುಚ್ಚರಿಸಿರುವ ಅವರು, ಅಪರಾಧಿಯನ್ನು ಬೆಂಬಲಿಸುವ ಬದಲು, ನ್ಯಾಯಕ್ಕಾಗಿನ ಹೋರಾಟದಲ್ಲಿ ತಮ್ಮ ಜೊತೆ ನಿಲ್ಲುವಂತೆ ಜನರನ್ನು ಕೋರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...